Featured

ಬೆಳ್ತಂಗಡಿ: ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಪ್ರಧಾನ ಕಚೇರಿ ಉಜಿರೆಗೆ ನಟಿ ಶೃತಿ ಭೇಟಿ – Vishwanews24

ಬೆಳ್ತಂಗಡಿ: ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಪ್ರಧಾನ ಕಚೇರಿ ಉಜಿರೆಗೆ ನಟಿ ಶೃತಿ ಭೇಟಿ

ಬೆಳ್ತಂಗಡಿ: ಚತುರ್ಭಾಷಾ ಚಲನಚಿತ್ರ ನಟಿ ಶ್ರೀಮತಿ ಶೃತಿಯವರು ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಪ್ರಧಾನ ಕಛೇರಿ ಉಜಿರೆಗೆ ಇಂದು  ಭೇಟಿ ನೀಡಿದರು.

ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಕೆ.ಎಸ್ ಜನಾರ್ಧನರವರು ಚಿತ್ರನಟಿ ಶೃತಿಯವರನ್ನು ಸ್ವಾಗತಿಸಿ, ಸಿರಿಸಂಸ್ಥೆಯ ಕಿರು ಪರಿಚಯವನ್ನು ಮಾಡಿ, ಶಾಲು ಹೊದಿಸಿ, ಸ್ಮರಣಿಕೆ ನೀಡಿ ಸನ್ಮಾನಿಸಿ ಗೌರವಿಸಿದರು.

ಮಡಿಕೇರಿ : ಶವಾಗಾರದಲ್ಲಿ ಹೆಣಗಳ ಬೆತ್ತಲೆ ಫೋಟೋ ಸೆರೆಹಿಡಿಯುತ್ತಿದ್ದ ಸೈಯದ್ ಪೊಲೀಸ್ ವಶಕ್ಕೆ..⏺️ ವೃದ್ಧೆಯ ಮನೆಗೆ ನುಗ್ಗಿ ಮಾನಭಂಗಕ್ಕೆ ಯತ್ನ – Vishwanews24

ಶ್ರೀಮತಿ ಶೃತಿಯವರು ಸನ್ಮಾನ ಸ್ವೀಕರಿಸಿ ಮಾತನಾಡಿ ಪೂಜ್ಯ ಹೆಗ್ಗಡೆಯವರು ಹಾಗೂ ಮಾತೃಶ್ರೀ ಹೇಮಾವತಿ ಅಮ್ಮನವರ ಕನಸಿನ ಕೂಸಾಗಿರುವ ಈ ಸಿರಿ ಸಂಸ್ಥೆಯು ಇಲ್ಲಿ ದುಡಿಯುತ್ತಿರುವ ಪ್ರತಿಯೋರ್ವ ಮಹಿಳೆಗೂ ಸ್ವಾವಲಂಬನೆಯ ಬದುಕನ್ನು ನೀಡಿ, ಸುಖೀ ಜೀವನವನ್ನು ನಡೆಸಲು ಸ್ಫೂರ್ತಿಯಾಗಿದೆ. ಪ್ರತಿ ಯಶಸ್ವಿ ಪುರುಷನ ಹಿಂದೆ ಓರ್ವ ಮಹಿಳೆ ಇದ್ದಾಳೆ ಎಂಬ ಗಾದೆ ಮಾತು ಇಲ್ಲಿ ಸುಳ್ಳಾಗಿದೆ. ಯಾಕೆಂದರೆ ಸಿರಿ ಸಂಸ್ಥೆಯಲ್ಲಿ ದುಡಿಯುತ್ತಾ, ಸ್ವಾವಲಂಬನೆಯ ಬದುಕನ್ನು ಕಟ್ಟಿಕೊಂಡಂತಹ ಇಲ್ಲಿಯ ಎಲ್ಲಾ ಮಹಿಳೆಯರ ಹಿಂದೆ ಶಕ್ತಿಯಾಗಿ ಪೂಜ್ಯರಾದ ಡಾ.ಡಿ ವೀರೇಂದ್ರ ಹೆಗ್ಗಡೆಯವರು ನಿಂತಿದ್ದಾರೆ. ಸಿರಿ ಸಂಸ್ಥೆ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ, ಪೂಜ್ಯ ದಂಪತಿಗಳ ಆಸರೆಯಲ್ಲಿ ಸಹಸ್ರಾರು ಮಹಿಳೆಯರ ಬಾಳು ಬೆಳಕಾಗಲಿ ಎಂದು ಶುಭ ಹಾರೈಸಿದರು.

🏏 ಮುಂಬೈಯೊಂದಿಗೆ IPL ಗೆ ವಿದಾಯ ಘೋಷಿಸಿದ ವೆಸ್ಟ್ ಇಂಡೀಸ್ ದಿಗ್ಗಜ ಕೀರನ್ ಪೊಲಾರ್ಡ್ – Vishwanews24

ಕಾರ್ಯಕ್ರಮದಲ್ಲಿ ಸಿರಿ ಸಂಸ್ಥೆಯ ಆಡಳಿತ ಮಂಡಳಿಯ ನಿರ್ದೇಶಕರಾದ ಶ್ರೀ ರಾಜೇಶ್ ಪೈ, ‘ಕೊರಗಜ್ಜ’ ಚಲನಚಿತ್ರದ ನಿರ್ಮಾಪಕರಾದ ಶ್ರೀ ವಿಧ್ಯಾದ‌, ಸಿರಿ ಸಂಸ್ಥೆಯ ಆಡಳಿತ ಮತ್ತು ಲೆಕ್ಕಪತ್ರ ವಿಭಾಗದ ನಿರ್ದೇಶಕರಾದ ಪ್ರಸನ್ನ, ಎಸ್.ಕೆ.ಡಿ.ಆರ್.ಡಿ.ಪಿ ಬೆಳ್ತಂಗಡಿ ತಾಲೂಕು ಯೋಜನಾಧಿಕಾರಿ ಸುರೇಂದ್ರ ಹಾಗೂ ಸಿರಿ ಸಂಸ್ಥೆಯ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು, ಶ್ರೀಮತಿ ಶೃತಿಯವರನ್ನು ಅಭಿನಂದಿಸಿ ಗೌರವಾರ್ಪಣೆ ಸಲ್ಲಿಸಿದರು. ಸಿರಿ ಸಿಬ್ಬಂದಿಗಳು ಶ್ರೀಮತಿ ಶೃತಿಯವರ ಭೇಟಿಯಿಂದ ಸಂಭ್ರಮಿಸಿದರು. ಜೀವನ್ ಕುಮಾರ್ ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

3 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago