ಬೆಳ್ತಂಗಡಿ : ಸೌಜನ್ಯಾ ಪರ ಹೋರಾಟಗಾರರ ವಿರುದ್ದ ಪೊಲೀಸ್ ಠಾಣೆಗೆ ದೂರು ನೀಡಿದ ಚಿನ್ನಯ್ಯ – vishwanews24

Featured, ದಕ್ಷಿಣ ಕನ್ನಡ

ಬೆಳ್ತಂಗಡಿ : ಸೌಜನ್ಯಾ ಪರ ಹೋರಾಟಗಾರರ ವಿರುದ್ದ ಪೊಲೀಸ್ ಠಾಣೆಗೆ ದೂರು ನೀಡಿದ ಚಿನ್ನಯ್ಯ

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದಲ್ಲಿ ಜೈಲು ಸೇರಿ ಹೊರಬಂದ ಚಿನ್ನಯ್ಯ ಇದೀಗ ಮಹೇಶ್ ಶೆಟ್ಟಿ ತಿಮರೋಡಿ, ಯೂಟ್ಯೂಬರ್ ಸಮೀರ್ ಎಂ.ಡಿ. ಸಹಿತ ಐವರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ.

ಸೌಜನ್ಯಾ ಪರ ಹೋರಾಟಗಾರರಾದ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ., ಯೂಟ್ಯೂಬರ್ ಸಮೀರ್ ಎಂ.ಡಿ. ಹಾಗೂ ಸೌಜನ್ಯಾಳ ಮಾವ ವಿಠಲ ಗೌಡ ಅವರು ತನಗೆ ತನ್ನ ಕುಟುಂಬಕ್ಕೆ ತಮಗೆ ಜೀವಬೆದರಿಕೆ ಹಾಕಬಹುದು. ಆದ್ದರಿಂದ ತನಗೆ ರಕ್ಷಣೆ ನೀಡಬೇಕು ಎಂದು ಚಿನ್ನಯ್ಯ ಪೊಲೀಸ್ ದೂರಿನಲ್ಲಿ ಆಗ್ರಹಿಸಿದ್ದಾನೆ.

ಉಡುಪಿ: ದಲಿತರು, ಮುಸ್ಲಿಮರ ಮಧ್ಯೆ ದ್ವೇಷ ಹರಡುವ ನಾಟಕ ಪ್ರದರ್ಶನ ರದ್ದುಪಡಿಸಲು ಒತ್ತಾಯಿಸಿ ಕಾಂಗ್ರೆಸ್ ಮನವಿ – vishwanews24

ಧರ್ಮಸ್ಥಳ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿದ್ದ ಚಿನ್ನಯ್ಯ, ಡಿ.18 ರಂದು ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾಗಿದ್ದ. ಅಂದು ರಾತ್ರಿ ಎಂಟು ಗಂಟೆ ಸುಮಾರಿಗೆ ಚಿನ್ನಯ್ಯ ತನ್ನ ಪತ್ನಿ ಮಲ್ಲಿಕಾ ಮತ್ತು ಸಹೋದರಿ ರತ್ನಾ ಜೊತೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರಾಗಿ ದೂರು ನೀಡಿದ್ದಾನೆ.

ಮಹೇಶ್ ಶೆಟ್ಟಿ ತಿಮರೋಡಿ, ಜಯಂತ್ ಟಿ, ಯೂಟ್ಯೂಬರ್ ಸಮೀರ್ ಎಂ.ಡಿ., ಸೌಜನ್ಯಾಳ ಮಾವ ವಿಠಲ ಗೌಡ, ಗಿರೀಶ್ ಮಟ್ಟಣ್ಣವರ್ ಹಾಗೂ ಸಂಗಡಿಗರು ತನಗೆ ಮತ್ತು ತನ್ನ ಪತ್ನಿ ಮಲ್ಲಿಕಾ ಯಾನೆ ನಾಗಮ್ಮ ಗೆ ಜೀವಬೆದರಿಕೆ ಹಾಕಬಹುದು. ಆದ್ದರಿಂದ ಸೂಕ್ತ ಕಾನೂನು ಕ್ರಮ ಕೈಗೊಂಡು ತಮಗೆ ಯಾವುದೇ ತೊಂದರೆಯಾಗದಂತೆ ರಕ್ಷಣೆ ಕಲ್ಪಿಸಬೇಕು ಎಂದು ದೂರಿನಲ್ಲಿ ಆಗ್ರಹಿಸಿದ್ದಾರೆ.

ಉಡುಪಿ : ಚೈತ್ರಾ ಕುಂದಾಪುರ ತಂದೆಗೆ ಯಾವುದೇ ರೀತಿ ದೈಹಿಕ, ಮಾನಸಿಕ ಹಿಂಸೆ ನೀಡುವಂತಿಲ್ಲ : ನ್ಯಾಯಾಲಯ ಆದೇಶ – vishwanews24

ಬೆಳ್ತಂಗಡಿ ಪೊಲೀಸರು ದೂರು ಸ್ವೀಕರಿಸಿದ್ದಾರೆ. ಈ ಬಗ್ಗೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ತಿಳಿಸಿದ್ದಾರೆ.

Leave a Reply