ಬೆಳ್ತಂಗಡಿ : ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಧರ್ಮಸ್ಥಳದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ (17) ಅತ್ಯಾಚಾರ ನಡೆಸಿ ನಂತರ ಕೊಲೆ ಮಾಡಿದ್ದ ಪ್ರಕರಣದ ತೀರ್ಪು 11 ವರ್ಷಗಳ ಬಳಿಕ ಬೆಂಗಳೂರು ಸಿಬಿಐ ವಿಶೇಷ ಕೋರ್ಟ್ ನಿಂದ ಜೂನ್ 16 ರಂದು ಪ್ರಕಟವಾಗಲಿದೆ.
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಚಂದಪ್ಪ ಗೌಡ ಮತ್ತು ಕುಸುಮವತಿ ದಂಪತಿಯ ಎರಡನೇ ಮಗಳು ಸೌಜನ್ಯ (17) ಕಾಲೇಜು ಮುಗಿಸಿ ಮನೆಗೆ ವಾಪಸ್ ಹೋಗುವಾಗ 9-10-2012 ರಂದು ಸಂಜೆ 4:15 ಕ್ಕೆ ನಾಪತ್ತೆಯಾಗಿದ್ದಳು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.
10-10-2012 ರಂದು ರಾತ್ರಿ 10:30 ಕ್ಕೆ ಧರ್ಮಸ್ಥಳ ಮಣ್ಣಸಂಖದಲ್ಲಿ ಸೌಜನ್ಯ ಶವ ಪತ್ತೆಯಾಗಿತ್ತು. ಬಳಿಕ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ರೇಪ್ & ಮರ್ಡರ್ ಪ್ರಕರಣ ದಾಖಲಾಗಿತ್ತು.
11-10-2012 ರಂದು ಪ್ರಕರಣದ ಆರೋಪಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಹೌಸಿಂಗ್ ಕಾಲೋನಿಯ ಸಂತೋಷ್ ರಾವ್ (38) ಬಾಹುಬಲಿ ಬೆಟ್ಟದ ಗುಡ್ಡದಲ್ಲಿ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದ. ಬಳಿಕ ಪೊಲೀಸರು ಆತನನ್ನು ಬಂಧಿಸಿದ್ದರು. ಪ್ರಕರಣವನ್ನು ಸಿಐಡಿಗೆ ನೀಡಲಾಗಿತ್ತು. ಬಳಿಕ ಪ್ರತಿಭಟನೆ ಜೋರಾಗಿದ್ದರಿಂದ ಪ್ರಕರಣವನ್ನು ರಾಜ್ಯ ಸರಕಾರ ಸಿಬಿಐಗೆ ನೀಡಿತ್ತು.
ಪ್ರಕರಣದ ಆರೋಪಿ ಸಂತೋಷ್ ರಾವ್ ಬೆಂಗಳೂರು ಸಿಬಿಐ ಕೋರ್ಟ್ ಗೆ ಆರು ಬಾರಿಗೂ ಹೆಚ್ಚು ಹಾಜರಾಗದೆ ತಲೆಮರೆಸಿಕೊಂಡಿದ್ದಾನೆ. ಪ್ರಕರಣ ನಡೆದು 11 ವರ್ಷಗಳ ಬಳಿಕ ದಿ.16-06-2023 ರಂದು ಪ್ರಕರಣ ತೀರ್ಪು ಪ್ರಕಟವಾಗಲಿದೆ. ಇಡೀ ರಾಜ್ಯದ ಜನರೇ ಈ ಪ್ರಕರಣದ ತೀರ್ಪಿಗಾಗಿ ಕಾಯುತ್ತಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…