Featured

ಬೆಳ್ತಂಗಡಿ : ಸೌಜನ್ಯ ಪ್ರಕರಣದ ರಹಸ್ಯಗಳನ್ನು ಬಿಚ್ಚಿಟ್ಟರೆ ನನ್ನನ್ನು ಸಾಯಿಸಬಹುದು : ವಸಂತ ಬಂಗೇರ ಸ್ಫೋಟಕ ಹೇಳಿಕೆ – Vishwanews24

ಬೆಳ್ತಂಗಡಿ : ನನ್ನ ಅಂತ್ಯದೊಳಗೆ ಸೌಜನ್ಯ ಪ್ರಕರಣಕ್ಕೆ ನ್ಯಾಯ ಕೊಡಿಸಿಯೇ ಸಿದ್ಧ : ವಸಂತ ಬಂಗೇರ

ಬೆಳ್ತಂಗಡಿ : ಸೌಜನ್ಯ ಪ್ರಕರಣದ ರಹಸ್ಯಗಳನ್ನು ಬಿಚ್ಚಿಟ್ಟರೆ ನನ್ನನ್ನು ಸಾಯಿಸಬಹುದು ಎಂದು ಮಾಜಿ ಶಾಸಕ ವಸಂತ ಬಂಗೇರ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇದೀಗ ಇವರ ಹೇಳಿಕೆ ಜಿಲ್ಲೆಯಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದ್ದು, ಸೌಜನ್ಯ ಪ್ರಕರಣ ಮತ್ತೊಂದು ದೊಡ್ಡ ಹೋರಾಟಕ್ಕೆ ಕಾರಣವಾಗುವ ಸಾಧ್ಯತೆ ಇದೆ.

ಸೌಜನ್ಯ ಪ್ರಕರಣ ಮರು ತನಿಖೆಗೆ ಒತ್ತಾಯ ಇದೀಗ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಅಚ್ಚರಿಯ ಹೇಳಿಕೆಗಳು ಇದೀಗ ಪ್ರಮುಖ ರಾಜಕೀಯ ಮುಖಂಡರ ಬಾಯಿಯಿಂದ ಬರಲಾರಂಭಿಸಿದೆಯ ಈ ನಡುವೆ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣವನ್ನ ದಾರಿ ತಪ್ಪಿಸಲಾಗಿದೆ ಎಂಬ ಮಾತನ್ನು ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ ವಸಂತ ಬಂಗೇರ ಹೇಳಿದ್ದು ಪ್ರಕರಣದ ತನಿಖೆ ಬಗ್ಗೆ ಅನುಮಾನ ಮೂಡಿಸಿದೆ.

ಬೆಳ್ತಂಗಡಿಯಲ್ಲಿ ಮಾತಾಡಿದ ಅವರು ನಾನು ಶಾಸಕನಾಗಿದ್ದಾಗ ಅಧಿವೇಶನದಲ್ಲಿ ಸೌಜನ್ಯ ಕೇಸ್ ಸಿಬಿಐಗೆ ವಹಿಸಲು ಆಗ್ರಹಿಸಿದ್ದೆ, ಸಿದ್ದರಾಮಯ್ಯನವರೂ ಕೆಲವರನ್ನ ತುಂಬಾ ಒಳ್ಳೆಯವರು ಎಂದು ನಂಬಿದ್ದರು. ನನ್ನನ್ನ ಕರೆದು ಹೇಳಿದ್ರು ಇದನ್ನ ಪ್ರಸ್ತಾಪ ಮಾಡಬೇಡ …ಈ ಕೇಸನ್ನ ಸಿಬಿಐಗೆ ವಹಿಸಲು ಸಾಧ್ಯವಿಲ್ಲ ಎಂದರು. ‘ನಾನು ಸುಮಾರು ಒಂದೂ ಗಂಟೆಗೂ ಅಧಿಕ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಿದ್ದೆ. ಕೇವಲ ಸೌಜನ್ಯ ಪ್ರಕರಣ ಮಾತ್ರವಲ್ಲ ಬೆಳ್ತಂಗಡಿಯಲ್ಲಿ ನಡೆದ ಅಮಾನುಷ ಹತ್ಯೆಗಳ ಬಗ್ಗೆ ಅವರಿಗೆ ತಿಳಿಸಿದ್ದೆ. ‘ಕೊನೆಗೆ ಸಿದ್ದರಾಮಯ್ಯನವರು ಅಧಿವೇಶನದಲ್ಲಿ ಸೌಜನ್ಯ ಪ್ರಕರಣವನ್ನ ಸಿಬಿಐಗೆ ವಹಿಸಿದೆ ಎಂದರು. ಆದರೆ ಸಿಬಿಐ ತನಿಖೆಯಲ್ಲಿ ನ್ಯಾಯ ಸಿಗುತ್ತೆ ಎಂಬ ನಂಬಿಕೆ ನನಗಿತ್ತು, ‘ಆದರೆ ಸಿಬಿಐ ತನಿಖೆಯ ಅರ್ಧದಲ್ಲಿ ಇದರಲ್ಲಿ ಮೋಸ ಇದೆ ಎನ್ನೋದು ನನಗೆ ತಿಳಿಯಿತು. ಅದನ್ನ ಸಾರ್ವಜನಿಕವಾಗಿ ನಿಮ್ಮ ಮುಂದೆ ಹೇಳಲು ಸಾಧ್ಯವಿಲ್ಲ,ಆದರೆ ಸಂದರ್ಭ ಬಂದಾಗ ನಾನು ಪ್ರಸ್ತಾಪಿಸಿಯೇ ಸಿದ್ಧ, ಒಂದಲ್ಲ ಒಂದು ದಿನ  ಕಾಲ ಬರುತ್ತೆ,

ಆವತ್ತು ಸೌಜನ್ಯ ಪ್ರಕರಣದ ದಿಕ್ಕು ತಪ್ಪಿಸಿದ್ದು ಯಾರು, ಅನ್ಯಾಯ ತೊಂದರೆ ಕೊಟ್ಟಿದ್ದು ಯಾರು ಎಂದು ಹೇಳುತ್ತೇನೆ. ಆದರೆ ನನ್ನನ್ನು ಸಾಯಿಸಿದ್ರೂ ಸಾಯಿಸಬಹುದು. ಅಂತೂ ನನ್ನ ಅಂತ್ಯದೊಳಗೆ ಸೌಜನ್ಯ ಪ್ರಕರಣಕ್ಕೆ ನ್ಯಾಯ ಕೊಡಿಸಿಯೇ ಸಿದ್ಧ ಎಂದಿದ್ದಾರೆ.

ಸಿದ್ದರಾಮಯ್ಯನವರನ್ನ ಏಕಾಂಗಿಯಾಗಿ ಭೇಟಿಯಾಗಿ ಈ ಪ್ರಕರಣವನ್ನ ಹೇಗೆ ತನಿಖೆ ಮಾಡಬೇಕೆಂಬುದನ್ನ ಹೇಳುತ್ತೇನೆ. ಇದನ್ನ ಈ ರೀತಿ ತನಿಖೆ ಮಾಡಬೇಕು, ಇಂತವರನ್ನೇ ತನಿಖೆ ಮಾಡಬೇಕು ಎಂದು ಹೇಳುತ್ತೇನೆ. ಖಾಕಿಯವರನ್ನೂ ಕೈ ಕಾಲು ಕಟ್ಟಿ ತನಿಖೆ ಮಾಡಿಸಿ ಎಂದು ಸಿದ್ದರಾಮಯ್ಯನವರಿಗೆ ತಿಳಿಸುತ್ತೇನೆ. ತಪ್ಪು ಮಾಡಿದವನೂ ಎಷ್ಟೇ ದೊಡ್ಡ ವ್ಯಕ್ತಿಯಾಗಿದ್ದರೂ ಅದನ್ನ ಅನುಭವಿಸಲೇ ಬೇಕು. ಒಗ್ಗಟ್ಟಾಗಿ ಸೌಜನ್ಯ ವಿರುದ್ಧವಾದ ದೌರ್ಜನ್ಯ ಹಾಗೂ ಕೊಲೆ ವಿರುದ್ದ ದೇಶವ್ಯಾಪಿಯಾಗಿ ಪ್ರತಿಭಟನೆಯಾಗುತ್ತೆ. ಸೌಜನ್ಯ ಕುಟುಂಬಸ್ಥರನ್ನ ಮುಖ್ಯಮಂತ್ರಿಗಳಿಗೆ ಖುದ್ದು ನಾನೇ ಭೇಟಿ ಮಾಡಿಸಿದ್ದೇನೆ. ಮುಖ್ಯಮಂತ್ರಿಗಳಿಗೂ ಸೌಜನ್ಯ ಪ್ರಕರಣದ ಗಂಭೀರತೆ ಅರಿವಿಗೆ ಬಂದಿದೆ ಎಂದರು. ಸದ್ಯ ವಸಂತ ಬಂಗೇರ ಹೇಳಿಕೆ ಕರಾವಳಿಯಲ್ಲಿ ಸಂಚಲನ ಸೃಷ್ಟಿಸಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago