ಬೆಳ್ತಂಗಡಿ: ಡ್ಯಾಂ ಬಳಿ ಸ್ನಾನಕ್ಕೆ ಹೋದ ಮೂವರು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಕೋಡಿ ಎಂಬಲ್ಲಿ ನಡೆದಿದೆ.
ಮೂಡಬಿದ್ರೆ ತಾಲೂಕಿನ ಎಡಪದವು ನಿವಾಸಿ ಲಾರೆನ್ಸ್ (20) , ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಸೂರಜ್ (19) , ಬಂಟ್ವಾಳ ಗ್ರಾಮದ ವಗ್ಗದ ಜೈಸನ್ (19) ಮೃತರು. ಇವರು ಇಂದು ಬೆಳ್ತಂಗಡಿ ತಾಲೂಕಿನ ಮೂಡುಕೋಡಿ ಗ್ರಾಮದ ವಾಲ್ಟರ್ ಎಂಬವರ ಮನೆಗೆ ಕಾರ್ಯಕ್ರಮದ ನಿಮಿತ್ತ ಬಂದಿದ್ದರು.
ಮಧ್ಯಾಹ್ನ ಊಟ ಮುಗಿಸಿ ಮೂಡುಕೋಡಿ ಗ್ರಾಮದ ಬರ್ಕಜೆ ಡ್ಯಾಂ ಬಳಿ ಸ್ನಾನ ಮಾಡಲು ಮೂವರು ಹೋಗಿದ್ದು ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ಯುವಕರು ನೀರುಪಾಲಾಗಿದ್ದಾರೆ. ಮೂವರ ಮೃತದೇಹಗಳನ್ನು ನೀರಿನಿಂದ ಹೊರತೆಗೆಯಲಾಗಿದ್ದು, ಈ ಬಗ್ಗೆ ವೇಣೂರು ಪೊಲೀಸರು ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ಮೂವರು ಕೂಡ ಮಂಗಳೂರು ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಎನ್ನಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…