Featured

ಬೆಳ್ತಂಗಡಿ: ಹಿರಿಯ ಯಕ್ಷಗಾನ ಭಾಗವತ ದಿನೇಶ್ ಅಮ್ಮಣ್ಣಾಯ ನಿಧನ – vishwanews24

ಬೆಳ್ತಂಗಡಿ: ಹಿರಿಯ ಯಕ್ಷಗಾನ ಭಾಗವತ ದಿನೇಶ್ ಅಮ್ಮಣ್ಣಾಯ ನಿಧನ

ಬೆಳ್ತಂಗಡಿ: ತೆಂಕುತಿಟ್ಟು ಯಕ್ಷಗಾನ ರಂಗದ ಖ್ಯಾತ ಹಾಗೂ ಹಿರಿಯ ಭಾಗವತ, ರಸರಾಗ ಚಕ್ರವರ್ತಿ ಬಿರುದಾಂಕಿತ ದಿನೇಶ್ ಅಮ್ಮಣ್ಣಾಯ( 65) ಗುರುವಾರ ನಿಧನರಾಗಿದ್ದಾರೆ.

ಮೃತರು ಪತ್ನಿ ಇಬ್ಬರು ಪುತ್ರಿಯರ ಸಹಿತ ಅಪಾರ ಅಭಿಮಾನಿ, ಬಂಧುಗಳನ್ನು ಅಗಲಿದ್ದಾರೆ.

ದಾಮೋದರ ಮಂಡೆಚ್ಚರ ಶಿಷ್ಯರಾಗಿ ಪುತ್ತೂರು ಮೇಳದ ಮೂಲಕ ಕಲಾ ಜೀವನ ಆರಂಭಿಸಿದ ಅಮ್ಮಣ್ಣಾಯ, ನಾಲ್ಕು ದಶಕಕ್ಕೂ ಹೆಚ್ಚು ಕಾಲ ಯಕ್ಷಗಾನ ರಂಗದಲ್ಲಿ ಭಾಗವತರಾಗಿ ಸೇವೆ ಸಲ್ಲಿಸಿದ್ದರು.

ಆ ಕಾಲದ ಪ್ರಸಿದ್ಧ ಡೇರೆ ಮೇಳವಾಗಿದ್ದ ಕರ್ನಾಟಕ ಮೇಳದಲ್ಲಿ ದಿಗ್ಗಜ ಕಲಾವಿದರನ್ನು ರಂಗದಲ್ಲಿ ಕುಣಿಸಿದ ಕೀರ್ತಿ ಅಮ್ಮಣ್ಣಾಯರದ್ದು. ತುಳು ಪ್ರಸಂಗಗಳಿಗೆ ತನ್ನ ಕಂಠ ಮಾಧುರ್ಯದಿಂದ ಅಪಾರ ಅಭಿಮಾನಿಗಳನ್ನು ಸಂಪಾದಿಸಿಕೊಂಡಿದ್ದರು. ಎಡನೀರು ಮೇಳದಲ್ಲೂ ತಿರುಗಾಟ ನಡೆಸಿದ್ದರು. ವಿಶ್ರಾಂತ ಜೀವನವನ್ನು ನಡೆಸುತ್ತಿದ್ದ ಅಮ್ಮಣ್ಣಾಯರು ಭಾಗವತರಾಗಿ ಅನೇಕ ವೇದಿಕೆಗಳಲ್ಲಿ ಕಾಣಿಸಿಕೊಳ್ಳುತ್ತಿದ್ದರು.

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

10 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

10 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

10 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

10 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

10 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

11 hours ago