ಬೆಳ್ತಂಗಡಿ  : ಹೃದಯಾಘಾತ –  ರಾಷ್ಟ್ರಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ ನಿಧನ – Vishwanews24

Featured, ದಕ್ಷಿಣ ಕನ್ನಡ

ಬೆಳ್ತಂಗಡಿ  : ಹೃದಯಾಘಾತ –  ರಾಷ್ಟ್ರಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ ನಿಧನ

ಬೆಳ್ತಂಗಡಿ  :ಹೃದಯಾಘಾತದಿಂದ ರಾಷ್ಟ್ರಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ ಸಾವನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಮೃತರನ್ನು ವಿದ್ಯಾರ್ಥಿ ದಿಸೆಯಲ್ಲಿ ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ, ಉಜಿರೆ ಎಸ್.ಡಿ.ಎಂ. ಕಾಲೇಜು ಹಳೇ ವಿದ್ಯಾರ್ಥಿ ಸಾಲಿಯತ್ (24) ಎಂದು ಗುರುತಿಸಲಾಗಿದೆ.

ಇವರು ಪಡಂಗಡಿ ಪೊಯ್ಯೇಗುಡ್ಡೆ ನಿವಾಸಿಯಾಗಿದ್ದು, ಇವರ ಮದುವೆಯಾಗಿ ಒಂದು ವರ್ಷವಷ್ಟೇ ಆಗಿತ್ತು. ಚಿಕ್ಕಮಗಳೂರು ಪತಿ ಮನೆಯಲ್ಲಿದ್ದ ಅವರಿಗೆ ಹೃದಯ ನೋವಿನಿಂದಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಸಾಲಿಯತ್ ಅವರ ಸಾವಿಗೆ ಹೃದಯಾಘಾತ ಕಾರಣ ಎಂದು ವೈದ್ಯರು ದೃಢಪಡಿಸಿದ್ದಾರೆ.

ಕರಾವಳಿಗರಿಗೆ ಕುಚ್ಚಲು ಅಕ್ಕಿ ನೀಡಲು ಸಾಧ್ಯವಾಗದವರು ಗ್ಯಾರಂಟಿ ಕಾರ್ಡ್ ಬಗ್ಗೆ ಜನರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ :  ರಮೇಶ್ ಕಾಂಚನ್ – Vishwanews24

ಪಡಂಗಡಿಯಲ್ಲಿ ಪ್ರಾಥಮಿಕ, ಎಸ್.ಡಿ.ಎಂ. ಅನುದಾನಿತ ಪ್ರೌಢ ಶಾಲೆ ಉಜಿರೆಯಲ್ಲಿ 9 ತರಗತಿ, ಮುಂಡಾಜೆಯಲ್ಲಿ 10 ನೇ ತರಗತಿ ಶಿಕ್ಷಣ ಪೂರ್ಣಗೊಳಿಸಿ, ಉಜಿರೆ ಎಸ್.ಡಿ.ಎಂ.ನಲ್ಲಿ ಪದವಿ ಪೂರ್ವ ಹಾಗೂ ಪದವಿ ಶಿಕ್ಷಣ ಪಡೆಯುತ್ತಿರುವಾಗ ಕ್ರೀಡಾ ಕ್ಷೇತ್ರದಲ್ಲಿ ಅತ್ಯಧಿಕ ಸಾಧನೆ ತೋರಿದ್ದರು.

Leave a Reply