Featured

ಬೆಳ್ತಂಗಡಿ : 14 ವರ್ಷದ ಮಗ ಆತ್ಮಹತ್ಯೆ ಮಾಡಿಕೊಂಡ ಬೇಸರದಲ್ಲಿ 13 ದಿನಕ್ಕೆ ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಬೆಳ್ತಂಗಡಿ : 14 ವರ್ಷದ ಮಗ ಆತ್ಮಹತ್ಯೆ ಮಾಡಿಕೊಂಡ ಬೇಸರದಲ್ಲಿ 13 ದಿನಕ್ಕೆ ಆತ್ಮಹತ್ಯೆಗೆ ಶರಣಾದ ತಂದೆ

ಬೆಳ್ತಂಗಡಿ : ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದಲ್ಲಿ ನಡೆದಿದೆ.

ಉಜಿರೆಯ ಪೆರ್ಲ ನಿವಾಸಿ ಯೊಗೀಶ್ ಪೂಜಾರಿ (41) ಆತ್ಮಹತ್ಯೆ ವ್ಯಕ್ತಿಯಾಗಿದ್ದಾರೆ. ಮನೆಯಲ್ಲಿ ನಡೆದ ಕ್ಷುಲಕ ಕಾರಣಕ್ಕೆ 14 ವರ್ಷದ ಮಗ ನೇಣಿಗೆಶರಣಾಗಿದ್ದ, ಜ.4 ರಂದು ಈ ಘಟನೆನಡೆದಿದ್ದು ಸರಿಯಾಗಿ 13 ನೇ ದಿನದ ಮಗನ ಉತ್ತರ ಕ್ರೀಯೆಯಂದೇ ತಂದೆ ಯೋಗೀಶ್ ಕೂಡ ಮಗನ ಹಾದಿ ಹಿಡಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಯೋಗಿಶ್ ಪೂಜಾರಿ ಮತ್ತು ರೇಷ್ಮಾ ದಂಪತಿಗಳ ಪುತ್ರ 14 ವರ್ಷದ ಯಕ್ಷಿತ್ 8ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದ, ಅದ್ಯಾವುದೋ ಕಾರಣಕ್ಕೆ ಆರು ವರ್ಷದ ತಮ್ಮ ಜೊತೆ ಗಲಾಟೆ ನಡೆದಿತ್ತು. ಈ ಗಲಾಟೆಯಲ್ಲಿ ತಮ್ಮ ಯಕ್ಷಿತ್ ಹೊಟ್ಟೆ ಮೇಲೆ ಕಚ್ಚಿ ಗಾಯ ಮಾಡಿದ್ದ, ಈ ವಿಚಾರದಲ್ಲಿ ನೊಂದು ತಂದೆ -ತಾಯಿ ಕೆಲಸಕ್ಕೆ ಹೋದ ಬಳಿಕ ತಮ್ಮನ ಎದುರೆ ಅಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದ. ಮನೆಯ ಕೋಣೆಯಲ್ಲಿ ತಾಯಿಯ ಸೀರೆಯಲ್ಲಿ ನೇಣು ಬಿಗಿದು ಜೀವಾಂತ್ಯ ಮಾಡಿಕೊಂಡಿದ್ದ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿತ್ತು. ಇದೀಗ ತಂದೆ ಯೋಗೀಶ್ ಕೂಡ ಮಗನ ಹಾದಿ ಹಿಡಿದಿದ್ದು ಗ್ರಾಮದಲ್ಲಿ ಸೂತಕದ ಛಾಯೆ ನಿರ್ಮಾಣವಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago