Featured

ಬೆಳ್ತಂಗಡಿ : PFI ಜಿಲ್ಲಾ ಸಮಿತಿ‌ ಸದಸ್ಯ ಹೈದರ್ ನೀರ್ಸಾಲ್ ಹೃದಯಾಘಾತದಿಂದ ನಿಧನ – Vishwanews24

ಬೆಳ್ತಂಗಡಿ: PFI ಜಿಲ್ಲಾ ಸಮಿತಿ‌ ಸದಸ್ಯ, ಸಾಮಾಜಿಕ ಮುಂದಾಳು  ಹೈದರ್ ನೀರ್ಸಾಲ್ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ಜಿಲ್ಲಾ ಸಮಿತಿ ಸದಸ್ಯ, ಸಾಮಾಜಿಕ ಮುಂದಾಳು, ಸಂಘಟಕ ಹೈದರ್ ನೀರ್ಸಾಲ್(55) ಉಜಿರೆ ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಸರಕಾರದ ಸಿಎಸ್‌ಸಿ ಆನ್ಲೈನ್ ಕೇಂದ್ರವನ್ನೂ ನಡೆಸುತ್ತಿದ್ದ ಅವರು ಸಿಎಸ್‌ಸಿ ವಿಎಲ್‌ಇ ಸೊಸೈಟಿ ಬೆಳ್ತಂಗಡಿ ಭಾಗದ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು.

ನಿರಂತರ ಕಾರ್ಯತತ್ಪರರಾಗಿಯೇ ಇರುತ್ತಿದ್ದ ಅವರು ಮಂಗಳವಾರ “ಗ್ರಾಮ ಒನ್” ಇದರ ಸಭೆಗಾಗಿ ತೆರಳುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತವಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದರು. ಆದರೆ ಚಿಕಿತ್ಸೆಗೆ ಫಲಕಾರಿಯಾಗದೇ ಬುಧವಾರ ಮೃತಪಟ್ಟಿದ್ದಾರೆ‌.

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಮಾಜಿ ಅಧ್ಯಕ್ಷರಾಗಿದ್ದ ಅವರು ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಪ್ರಸ್ತುತ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಶಿರ್ಲಾಲು ಮಸೀದಿ ಗೌರವಾಧ್ಯಕ್ಷರಾಗಿ, ತಾಲೂಕು ಮುಸ್ಲಿಂ‌ ಒಕ್ಕೂಟ ಸೇರಿದಂತೆ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು.‌

ಹೈದರ್ ನಿರ್ಸಾಲ್ ಅವರ ಮಯ್ಯತ್ ಇದೀಗ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿದ್ದು, 3 ಗಂಟೆಗೆ ಅವರ ಮನೆಗೆ ತಲುಪಲಿದೆ. ಅಲ್ಲಿ ಅಂತಿಮ ವಿಧಿ ಪೂರೈಸಿ ಉಜಿರೆ ಹಳೆಪೇಟೆ ಮಸೀದಿಯ ಹೊರಾಂಗಣದಲ್ಲಿ ಸಾರ್ವಜನಿಕರಿಗೆ ಅಂತಿಮ‌ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸುವ್ಯವಸ್ಥೆಯ ದೃಷ್ಟಿಯಿಂದ ಎಲ್ಲರೂ ಅಲ್ಲಿಯೇ ಅಂತಿಮ ದರ್ಶನ ಪಡೆಯುವಂತೆ ಕುಟುಂಬದವರು ವಿನಂತಿಸಿದ್ದಾರೆ.

ಮೃತರು ತಾಯಿ, ಪತ್ಮಿ, ಓರ್ವ ಗಂಡು, ಮೂವರು ಹೆಣ್ಣು ಮಕ್ಕಳು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

17 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

17 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

17 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

21 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

21 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

21 hours ago