ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆಯ ಮಾಜಿ ಪ್ರಾಂಶುಪಾಲ ಡಾ. ಬಿ ಯಶೋವರ್ಮ ಅವರು ವಿಧಿವಶರಾಗಿದ್ದಾರೆ.
66 ವರ್ಷದ ಯಶೋವರ್ಮ ಅವರು ಕಳೆದ ಕೆಲವು ತಿಂಗಳಿನಿಂದ ಅನಾರೋಗ್ಯದ ಹಿನ್ನೆಲೆಯಲ್ಲಿ ಸಿಂಗಾಪುರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಭಾನುವಾರ ಮಧ್ಯರಾತ್ರಿ ಚಿಕಿತ್ಸೆ ಫಲಿಸದೆ ನಿಧರಾಗಿದ್ದಾರೆ.
ಯಶೋವರ್ಮ ಅವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಎಸ್‍ಡಿಎಂ ಎಜುಕೇಶನ್ ಸೊಸೈಟಿ ಕಾರ್ಯದರ್ಶಿಯಾಗಿದ್ದರು. ಡಾ. ಬಿ.ಯಶೋವರ್ಮ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಪತ್ನಿ ಡಾ. ಹೇಮಾವತಿ ಹೆಗ್ಗಡೆಯವರ ಸಹೋದರರಾಗಿದ್ದಾರೆ.
ಉಜಿರೆ ಎಸ್.ಡಿ.ಎಂ ಪದವಿ ಕಾಲೇಜಿನ ಪ್ರಾಚಾರ್ಯರಾಗಿ ಅನೇಕ ವರ್ಷ ಅವರು ಸೇವೆ ಸಲ್ಲಿಸಿದ್ದ ಅವರು, ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಹಲವಾರು ಸಮ್ಮೇಳನಗಳನ್ನು ನಡೆಸಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರರು, ಬಂಧು ವರ್ಗ, ಕುಟುಂಬಸ್ಥರನ್ನು ಆಗಲಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…