ವಿನಾಕಾರಣ ನಮ್ಮ ಹೆಸರನ್ನು ಸಮಾಜದಲ್ಲಿ ಹಾಳುಗೆಡವಲಾಗುತ್ತಿದೆ ,ಇದಕ್ಕೆ ದೇವರೆ ತಕ್ಕ ಶಿಕ್ಷೆ ನೀಡಬೇಕು:ಧೀರಜ್ ಕೆಲ್ಲ
ಬೆಳ್ತಂಗಡಿ: 11 ವರ್ಷಗಳ ಹಿಂದೆ ಧರ್ಮಸ್ಥಳದ ಪಾಂಗಳ ನಿವಾಸಿ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಾಕಾರಣ ಪ್ರಕರಣದಲ್ಲಿ ತಮ್ಮಹೆಸರು ಬರುತ್ತಿರುವ ಹಿನ್ನೆಲೆ ಸೌಜನ್ಯ ಅವರ ತಾಯಿ ಮುಂದೆಯೇ ಇಂದು (ಆ.27) ರಂದು ಧರ್ಮಸ್ಥಳ ಅಣ್ಣಪ್ಪ ಸ್ವಾಮಿ ಬೆಟ್ಟದಲ್ಲಿ ಧೀರಜ್ ಕೆಲ್ಲ, ಮಲ್ಲಿಕ್ ಜೈನ್, ಉದಯ್ ಜೈನ್ ಆಣೆ ಪ್ರಮಾಣ ಮಾಡಿರುವ ಘಟನೆ ನಡೆಯಿತು.
ಸೌಜನ್ಯ ನ್ಯಾಯಕ್ಕಾಗಿ ವಿಶ್ವ ಹಿಂದು ಪರಿಷತ್ ಭಜರಂಗ ದಳದ ಬೆಳ್ತಂಗಡಿ ಪ್ರಖಂಡದ ವತಿಯಿಂದ ಇಂದು ಹಮ್ಮಿಕೊಂಡ ನೇತ್ರಾವತಿಯಿಂದ ಅಣ್ಣಪ್ಪ ಸ್ವಾಮಿ ಬೆಟ್ಟದ ವರೆಗಿನ ಪಾದಯಾತ್ರೆ ಬಳಿಕ ಪ್ರಮಾಣ ಕೈಗೊಳ್ಳಲಾಯಿತು.
ಬಳಿಕ ಮಾತನಾಡಿದ ಧೀರಜ್ ಕೆಲ್ಲ, ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ದೇವರ ಮುಂದೆಯೇ ನಾವು ಪ್ರಮಾಣ ಕೈಗೊಂಡಿದ್ದೇವೆ. ನಾವು ನಿರ್ದೋಷಿಗಳೆಂದು ಸಾಬೀತಾಗಿದೆ. ನಮಗೂ ಕುಟುಂಬ, ಬಂಧುವರ್ಗವಿದೆ. ಆದರೆ ವಿನಾಕಾರಣ ನಮ್ಮ ಹೆಸರನ್ನು ಸಮಾಜದಲ್ಲಿ ಹಾಳುಗೆಡವಲಾಗುತ್ತಿದೆ. ಇದಕ್ಕೆ ದೇವರೆ ತಕ್ಕ ಶಿಕ್ಷೆ ನೀಡಬೇಕು. ನಾವು ಈ ಹಿಂದೆ ಕಾನತ್ತೂರಿಗೂ ತೆರಳಿ ಪ್ರಾರ್ಥನೆ ಮಾಡಿದ್ದೇವೆ ಎಂದು ಹೇಳಿದರು.
ಆಣೆ ಪ್ರಮಾಣಕ್ಕೂ ಮುನ್ನ ಧರ್ಮಸ್ಥಳದಲ್ಲಿ ಜನಸ್ತೋಮ ಜಮಾಯಿಸಿದ್ದರು. ಪೊಲೀಸರು ಎಲ್ಲರನ್ನು ಶಾಂತಗೊಳಸಿ ಪರಿಸ್ಥಿತಿ ತಿಳಿಗೊಳಿಸಿದರು. ವಿಹಿಂಪ ಸಂಘಟನೆಯ 200 ಕ್ಕೂ ಅಧಿಕ ಮಂದಿ ನೇತ್ರಾವತಿ ಸ್ನಾನಘಟ್ಟದಿಂದ ಧರ್ಮಸ್ಥಳ ದ್ವಾರದವರೆಗೆ ಶಿವ ಪಂಚಾಕ್ಷರಿ ಪಠಣದೊಂದಿಗೆ ಕಾಲ್ನಡಿಗೆಯಲ್ಲಿ ಸಾಗಿ ಬಂದರು.
ದ.ಕ. ಎಸ್.ಪಿ. ರಿಷ್ವಂತ್ ಅವರು ಪ್ರತಿಭಟನೆಗಾರರನ್ನು ಧರ್ಮಸ್ಥಳ ದ್ವಾರದ ಬಳಿ ತಡೆದು, ಸೌಜನ್ಯ ಕುಟುಂಬಸ್ಥರು ಹಾಗೂ ವಿಹಿಂಪದ ಪ್ರಮುಖರನ್ನಷ್ಟೆ ದ್ವಾರದ ಒಳ ಪ್ರವೇಶಕ್ಕೆ ಅನುಮತಿ ಮಾಡಿಕೊಟ್ಟರು. ಮಲ್ಲಿಕ್ ಜೈನ್, ಧೀರಜ್ ಕೆಲ್ಲ, ಉದಯ್ ಜೈನ್ ಪ್ರಮಾಣ ಮಾಡುತ್ತಲೆ ಸೌಜನ್ಯ ತಾಯಿ ಕಣ್ಣೀರಿಡುತ್ತಾ ಯಾವುದೇ ಪ್ರತಿಕ್ರಿಯೆ ನೀಡದೆ ಹಿಂದಿರುಗಿದರು.
ಸೌಜನ್ಯ ತಾಯಿ ಕುಸುಮಾವತಿ ಹಾಗೂ ವಿಹಿಂಪ ಪ್ರಮುಖರು ಸೌಜನ್ಯ ಕೊಲೆ ಆರೋಪಿಗಳಿಗೆ ಶಿಕ್ಷೆಯಾಗಲಿ ಎಂದು ಅಣ್ಣಪ್ಪ ಸ್ವಾಮಿ ಮೆಟ್ಟಿಲಲ್ಲಿ ಪ್ರಾರ್ಥನೆ ಮಾಡಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…