Featured

ಬೆಳ್ಮಣ್‌ : ಕಾರಿನ ಒಳಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ – Vishwanews24

ಬೆಳ್ಮಣ್‌ : ಕಾರಿನ ಒಳಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಬೆಳ್ಮಣ್‌ : ತಮ್ಮನ ಮನೆಗೆ ಬೆಂಕಿ ಹಚ್ಚಿ ತಾನೂ ಭಸ್ಮವಾದ ಘಟನೆ ಕಾರ್ಕಳ ತಾಲೂಕಿನ ಸಚ್ಚೇರಿಪೇಟೆಯಲ್ಲಿ ಜ. 25 ರ ಬುಧವಾರ ತಡರಾತ್ರಿ ನಡೆದಿದೆ.

ಮುಂಡ್ಕೂರು ಗ್ರಾಮದ ಸಚ್ಚರೀ ಪೇಟೆ ಕುದ್ರುಟ್ಟು ನಿವಾಸಿ ಕೃಷ್ಣ ಕುಲಾಲ್ 46 ವರ್ಷ ಬರ್ಬರ ಕೃತ್ಯ ಎಸಗಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.ವೃತ್ತಿಯಲ್ಲಿ ಕಾರು ಚಾಲಕನಾಗಿದ್ದು ತನ್ನ ಮಾರುತಿ ಒಮಿನಿ ಕಾರಿನ ಒಳಗೆ ಕುಳಿತು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕೃಷ್ಣ ಕುಲಾಲ್ ಎಂಬಾತ ತನ್ನ ತಮ್ಮ ಶೇಖರ ಕುಲಾಲ್ ಎಂಬವರ ಮನೆಗೆ ತಡರಾತ್ರಿ 3 ಗಂಟೆಗೆ ಬೆಂಕಿಯಿಟ್ಟು ತಾನು ತನ್ನ ಓಮಿನಿಯಲ್ಲಿ ಕುಳಿತು ಅದಕ್ಕೂ ಬೆಂಕಿ ಹಾಕಿ ತಾನೂ ಸುಟ್ಟು ಭಸ್ಮವಾಗಿದ್ದಾನೆ.

ಶೇಖರನ ಮನೆಯಲ್ಲಿ ಕೃಷ್ಣ ಹಾಗೂ ಶೇಖರನ ಸಹೋದರಿ ಮಗಳ ಮೆಹಂದಿ ಕಾರ್ಯಕ್ರಮ ನಡೆಯುತ್ತಿದ್ದು ಮೂರು ಗಂಟೆಗೆ ಕೃಷ್ಣ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದ್ದು, ಜಮೀನು ವಿವಾದ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ.

ಕೃತ್ಯಕ್ಕೆ ಮುನ್ನ ಕೃಷ್ಣ ಡೆತ್ ನೋಟ್ ಬರೆದು ಕಾಂಪೌಂಡ್ ಗೋಡೆಗೆ ಅಂಟಿಸಿದ್ದು, ಹಲವರ ಹೆಸರು ಉಲ್ಲೇಖಿಸಲಾಗಿದೆ.

ಕಾರ್ಕಳ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

15 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

16 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

18 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

18 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

19 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

19 hours ago