ಬೆಳ್ಳಾರೆ: ತೋಟದ ಕೆರೆಯಲ್ಲಿದ್ದ ಪಾಚಿ ತೆಗೆಯಲು ಹೋದ ಯುವಕ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತ್ಯು – Vishwanews24

Featured, ದಕ್ಷಿಣ ಕನ್ನಡ

ಬೆಳ್ಳಾರೆ: ತೋಟದ ಕೆರೆಯಲ್ಲಿದ್ದ ಪಾಚಿ ತೆಗೆಯಲು ಹೋದ ಯುವಕ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತ್ಯು

ಬೆಳ್ಳಾರೆ: ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ತಾಡಿ ಗ್ರಾಮದಲ್ಲಿ ತೋಟದ ಕೆರೆಯಲ್ಲಿದ್ದ ಪಾಚಿ ತೆಗೆಯಲು ಹೋದ ಯುವಕ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ಯುವಕನನ್ನು ಪಾಲ್ತಾಡಿ ಗ್ರಾಮದ ಕಾಪುತಮೂಲೆ ನಿವಾಸಿ ಮೋನಪ್ಪ ನಾಯ್ಕ ಎಂಬವರ ಪುತ್ರ ಗೋಪಾಲಕೃಷ್ಣ ಕೆ.(34) ಎಂದು ಗುರುತಿಸಲಾಗಿದೆ.

ಗೋಪಾಲಕೃಷ್ಣ ಅವರು ಪಾಲ್ತಾಡಿ ಗ್ರಾಮದ ಕಾಪುತಮೂಲೆ ಎಂಬಲ್ಲಿರುವ ತೋಟದ ಕೆರೆಯಲ್ಲಿರುವ ಪಾಚಿಯನ್ನು ತೆಗೆಯಲು ಒಬ್ಬನೇ ತೆರಳಿದ್ದು, ಮತ್ತೆ ವಾಪಾಸು ಬಾರದೇ ಇದ್ದುದರಿಂದ ಮನೆಯವರು ಕೆರೆಯ ಬಳಿ ಹೋಗಿ ನೋಡಿದಾಗ ಗೋಪಾಲಕೃಷ್ಣನ ಚಪ್ಪಲಿ ಕೆರೆಯ ನೀರಿನಲ್ಲಿ ತೇಲುತ್ತಿದ್ದುರಿಂದ ಸಂಶಯಗೊಂಡು ಮರದ ದೋಂಟಿಯೊಂದನ್ನು ಕೆರೆಯ ನೀರಿಗೆ ಹಾಕಿ ನೋಡಿದಾಗ ಗೋಪಾಲಕೃಷ್ಣನ ಅಂಗಿ ದೋಂಟಿಯ ಕೊಕ್ಕೆ ಸಿಕ್ಕಿಕೊಂಡಿದ್ದು, ಮೃತರ ತಂದೆ ಮೋನಪ್ಪ ನಾಯ್ಕ ಅವರು ಕೂಡಲೇ ಅಣ್ಣ ಶೇಷಪ್ಪ ನಾಯ್ಕ ಮತ್ತು ಅವರ ಮಗ ಸುಬ್ರಾಯ ನಾಯ್ಕರವರನ್ನು ಕರೆದು ಗೋಪಾಲಕೃಷ್ಣನ ದೇಹವನ್ನು ಮೇಲಕ್ಕೆತ್ತಿ ಆಟೋ ರಿಕ್ಷಾವೊಂದರಲ್ಲಿ ಕೆಯ್ಯೂರುವರೆಗೆ ತೆಗೆದುಕೊಂಡು ಬಂದು ಅಲ್ಲಿಂದ ಅಂಬ್ಯುಲೆನ್ಸ್ ವಾಹನವೊಂದರಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದಲ್ಲಿ ಅಲ್ಲಿನ ವೈದ್ಯರು ಪರೀಕ್ಷಿಸಿ ಗೋಪಾಲಕೃಷ್ಣನು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಬಂಟ್ವಾಳ: ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು, ಸಹಸವಾರ ಗಂಭೀರ – Vishwanews24

ಇನ್ನು ತೋಟದ ಕೆರೆಯಲ್ಲಿರುವ ಪಾಚಿಯನ್ನು ತೆಗೆಯಲು ಹೋದ ಗೋಪಾಲಕೃಷ್ಣ ಅವರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಯ ನೀರಿಗೆ ಬಿದ್ದು ಈಜು ಬಾರದೇ ನೀರಿನಲ್ಲಿ ಮುಳುಗಿ ಮೃತಪಟ್ಟ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮೃತ ಗೋಪಾಲಕೃಷ್ಣ ಅವರು ಪಡುಬಿದ್ರೆಯ ಅದಾನಿ ಪವರ್ ಲಿಮಿಟೆಡ್ ಯಪಿಎಸ್‌ಎಲ್ ಇಲ್ಲಿ ಇಲೆಕ್ಟ್ರಿಕಲ್ ಮೆಂಟೈನೆನ್ಸ್ ಟೆಕ್ನಿಶಿಯನ್ ಆಗಿ ಕೆಲಸ ಮಾಡುತ್ತಿದ್ದು, ವಾರದ ರಜಾದಿನವಾದ ಗುರುವಾರದಂದು ಮನೆಯಲ್ಲಿ ಇದ್ದ ವೇಳೆ ಕೆರೆಯ ಪಾಚಿ ತೆಗೆಯಲು ಹೋಗಿದ್ದು, ಈ ವೇಳೆ ಅವಘಢ ಸಂಭವಿಸಿದೆ.

ಉಡುಪಿ : ಮಾಂಗ್ರೋವ್ ವನದ ಮಧ್ಯೆ ಕಯಾಕ್ ಮೂಲಕ ವಿನೂತನ ರೀತಿಯಲ್ಲಿ ಮತದಾನ ಜಾಗೃತಿ – Vishwanews24

Leave a Reply