ಬೆಳ್ಳಾರೆ: ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ತಾಡಿ ಗ್ರಾಮದಲ್ಲಿ ತೋಟದ ಕೆರೆಯಲ್ಲಿದ್ದ ಪಾಚಿ ತೆಗೆಯಲು ಹೋದ ಯುವಕ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ಯುವಕನನ್ನು ಪಾಲ್ತಾಡಿ ಗ್ರಾಮದ ಕಾಪುತಮೂಲೆ ನಿವಾಸಿ ಮೋನಪ್ಪ ನಾಯ್ಕ ಎಂಬವರ ಪುತ್ರ ಗೋಪಾಲಕೃಷ್ಣ ಕೆ.(34) ಎಂದು ಗುರುತಿಸಲಾಗಿದೆ.
ಗೋಪಾಲಕೃಷ್ಣ ಅವರು ಪಾಲ್ತಾಡಿ ಗ್ರಾಮದ ಕಾಪುತಮೂಲೆ ಎಂಬಲ್ಲಿರುವ ತೋಟದ ಕೆರೆಯಲ್ಲಿರುವ ಪಾಚಿಯನ್ನು ತೆಗೆಯಲು ಒಬ್ಬನೇ ತೆರಳಿದ್ದು, ಮತ್ತೆ ವಾಪಾಸು ಬಾರದೇ ಇದ್ದುದರಿಂದ ಮನೆಯವರು ಕೆರೆಯ ಬಳಿ ಹೋಗಿ ನೋಡಿದಾಗ ಗೋಪಾಲಕೃಷ್ಣನ ಚಪ್ಪಲಿ ಕೆರೆಯ ನೀರಿನಲ್ಲಿ ತೇಲುತ್ತಿದ್ದುರಿಂದ ಸಂಶಯಗೊಂಡು ಮರದ ದೋಂಟಿಯೊಂದನ್ನು ಕೆರೆಯ ನೀರಿಗೆ ಹಾಕಿ ನೋಡಿದಾಗ ಗೋಪಾಲಕೃಷ್ಣನ ಅಂಗಿ ದೋಂಟಿಯ ಕೊಕ್ಕೆ ಸಿಕ್ಕಿಕೊಂಡಿದ್ದು, ಮೃತರ ತಂದೆ ಮೋನಪ್ಪ ನಾಯ್ಕ ಅವರು ಕೂಡಲೇ ಅಣ್ಣ ಶೇಷಪ್ಪ ನಾಯ್ಕ ಮತ್ತು ಅವರ ಮಗ ಸುಬ್ರಾಯ ನಾಯ್ಕರವರನ್ನು ಕರೆದು ಗೋಪಾಲಕೃಷ್ಣನ ದೇಹವನ್ನು ಮೇಲಕ್ಕೆತ್ತಿ ಆಟೋ ರಿಕ್ಷಾವೊಂದರಲ್ಲಿ ಕೆಯ್ಯೂರುವರೆಗೆ ತೆಗೆದುಕೊಂಡು ಬಂದು ಅಲ್ಲಿಂದ ಅಂಬ್ಯುಲೆನ್ಸ್ ವಾಹನವೊಂದರಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದಲ್ಲಿ ಅಲ್ಲಿನ ವೈದ್ಯರು ಪರೀಕ್ಷಿಸಿ ಗೋಪಾಲಕೃಷ್ಣನು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಇನ್ನು ತೋಟದ ಕೆರೆಯಲ್ಲಿರುವ ಪಾಚಿಯನ್ನು ತೆಗೆಯಲು ಹೋದ ಗೋಪಾಲಕೃಷ್ಣ ಅವರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಯ ನೀರಿಗೆ ಬಿದ್ದು ಈಜು ಬಾರದೇ ನೀರಿನಲ್ಲಿ ಮುಳುಗಿ ಮೃತಪಟ್ಟ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮೃತ ಗೋಪಾಲಕೃಷ್ಣ ಅವರು ಪಡುಬಿದ್ರೆಯ ಅದಾನಿ ಪವರ್ ಲಿಮಿಟೆಡ್ ಯಪಿಎಸ್‌ಎಲ್ ಇಲ್ಲಿ ಇಲೆಕ್ಟ್ರಿಕಲ್ ಮೆಂಟೈನೆನ್ಸ್ ಟೆಕ್ನಿಶಿಯನ್ ಆಗಿ ಕೆಲಸ ಮಾಡುತ್ತಿದ್ದು, ವಾರದ ರಜಾದಿನವಾದ ಗುರುವಾರದಂದು ಮನೆಯಲ್ಲಿ ಇದ್ದ ವೇಳೆ ಕೆರೆಯ ಪಾಚಿ ತೆಗೆಯಲು ಹೋಗಿದ್ದು, ಈ ವೇಳೆ ಅವಘಢ ಸಂಭವಿಸಿದೆ.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…