ಗೋಲ್ಡ್‍ಕೋಸ್ಟ್ : ಈ ಬಾರಿ ಪದಕಗಳ ಸುರಿಮಳೆಯನ್ನೇ ಗೈಯುವ ಹುಮ್ಮಸ್ಸಿನಲ್ಲಿರುವ ಭಾರತ ತಂಡವು ಆರಂಭದ ದಿನವೇ ಬೆಳ್ಳಿ ಪದಕವನ್ನು ಗೆಲ್ಲುವ ಮೂಲಕ ಶುಭಾರಂಭ ಮಾಡಿದೆ. ಇಂದು ನಡೆದ ಪುರುಷರ 56 ಕೆಜಿ ವೆಫ್ಟ್ ಲಿಫ್ಟಿಂಗ್ ವಿಭಾಗದಲ್ಲಿ ಕರ್ನಾಟಕದ ಕುಂದಾಪುರದ ಗುರುರಾಜ್ 249 ಕೆಜಿ ಭಾರವನ್ನು ಎತ್ತುವ ಮೂಲಕ ಭಾರತಕ್ಕೆ ಮೊದಲ ಪದಕವನ್ನು ಗೆದ್ದು ದೇಶಕ್ಕೆ ಕೀರ್ತಿ ತಂದಿದ್ದಾನೆ.
ಗುರುರಾಜ್ ಟ್ರಕ್ ಡ್ರೈವರ್‍ರೊಬ್ಬರ ಮಗನಾಗಿದ್ದು 56 ಕೆಜಿ ವೆಫ್ಟ್ ಲಿಫ್ಟಿಂಗ್‍ನ ಎರಡು ಸುತ್ತಿನಲ್ಲಿ ಕ್ರಮವಾಗಿ 111 ಕೆಜಿ ಹಾಗೂ 138 ಕೆಜಿ ಭಾರ ಎತ್ತುವ ಮೂಲಕ ಬೆಳ್ಳಿ ಪದಕಕ್ಕೆ ಮುತ್ತಿಕ್ಕಿದ್ದಾರೆ. ಮಲೇಷ್ಯಾದ ಮೊಹಮ್ಮದ್ ಈಜರ್ ಅಹಮದ್ 261 ಕೆಜಿ ಭಾರ ಎತ್ತುವ ಮೂಲಕ ಚಿನ್ನದ ಪದಕ ಗೆದ್ದರೆ, ಶ್ರೀಲಂಕಾದ ಚರ್ತುರಂಗ ಲಕ್ಮಲ್ (248 ಕೆಜಿ) ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. 2010ರ ಕಾಮನ್‍ವೆಲ್ತ್‍ನ ಹಿರಿಯ ವೆಟ್‍ಲಿಫ್ಟಿಂಗ್ ಹಾಗೂ 2016ರಲ್ಲಿ ಸೌತ್ ಏಷ್ಯಾನ್ ಗೇಮ್ಸ್‍ನಲ್ಲಿ ಚಿನ್ನದ ಪದಕ ಸೂರೆಗೊಂಡಿದ್ದ ಗುರುರಾಜ್,. 2017ರಲ್ಲಿ ವ ಆಸ್ಟ್ರೇಲಿಯಾದಲ್ಲಿ ನಡೆದ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದು ಬೀಗಿದ್ದರು.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…