Featured

ಬೇಕರಿ ತಿನಿಸು, ಚಿಪ್ಸ್‌ಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆ ವರದಿ ಪ್ರಕಟ – vishwanews24

ಬೇಕರಿ ತಿನಿಸು, ಚಿಪ್ಸ್‌ಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆ ವರದಿ ಪ್ರಕಟ

ಬೆಂಗಳೂರು: ಬೇಕರಿಯ ತಿಂಡಿ-ತಿಸಿಸು ಯಾರಿಗೆ ತಾನೇ ಇಷ್ಟವಿಲ್ಲ? ಮಕ್ಕಳಿಂದ ಹಿಡಿದು ವೃದ್ಧರವರೆಗೂ ಅಚ್ಚುಮೆಚ್ಚು. ಆದರೆ ವಿವಿಧ ಬೇಕರಿ ಉತ್ಪನ್ನಗಳು ಹಾಗೂ ಚಿಪ್ಸ್‌ಗಳಲ್ಲಿ ಮಿತಿಮೀರಿ ವಿಷಕಾರಿ ಹಾಗೂ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳನ್ನು ಬಳಸುತ್ತಿರುವುದು ಪತ್ತೆಯಾಗಿರುವುದಾಗಿ ಕರ್ನಾಟಕ ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಧಿಕೃತವಾಗಿ ಘೋಷಿಸಿದೆ.

ಆಹಾರ ಸುರಕ್ಷತಾ ಅಧಿಕಾರಿಗಳು ರಾಜ್ಯಾದ ಬೇಕರಿ ಹಾಗೂ ಚಿಪ್ಸ್ ತಯಾರಿಕಾ ಕೇಂದ್ರಗಳಿಂದ ಬರೋಬ್ಬರಿ 35,639 ಆಹಾರದ ಮಾದರಿಗಳನ್ನು ಸಂಗ್ರಹಿಸಿ ರಾಸಾಯನಿಕ ವಿಶ್ಲೇಷಣಾ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದ್ದರು. ಇದೀಗ ಲ್ಯಾಬ್ ವರದಿ ಬಂದಿದ್ದು, ರಾಜ್ಯಾದ್ಯಂತ ಮಾರಾಟವಾಗುತ್ತಿರುವ ವಿವಿಧ ಬೇಕರಿ ಉತ್ಪನ್ನಗಳು ಹಾಗೂ ಚಿಪ್ಸ್‌ಗಳು ಮನುಷ್ಯನ ಬಳಕೆಗೆ ಯೋಗ್ಯವಾಗಿಲ್ಲ. ಆಕರ್ಷಣೆಗಾಗಿ ಈ ತಿನಿಸುಗಳಲ್ಲಿ ಮಿತಿಮೀರಿ ವಿಷಕಾರಿ ಹಾಗೂ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳನ್ನು ಬಳಸುತ್ತಿರುವುದಾಗಿ ದೃಢಪಟ್ಟಿದೆ.

ಇದನ್ನೂ ಓದಿ:

ಬಹುತೇಕ ಬೇಕರಿ ತಿನಿಸುಗಳು ಮತ್ತು ಚಿಪ್ಸ್‌ಗಳಲ್ಲಿ ನಿಷೇಧಿತ ಹಾಗೂ ಮಿತಿಮೀರಿದ ರಾಸಾಯನಿಕ ಬಣ್ಣಗಳನ್ನು ಮಿಶ್ರಣ ಮಾಡಲಾಗುತ್ತಿದೆ. ಚಿಕ್ಕ ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೆ ಎಲ್ಲಾ ವರ್ಗದ ಜನರಲ್ಲಿ ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್‌ನಂತಹ ಗಂಭೀರ ಕಾಯಿಲೆಗಳು ಕಾಣಿಸಿಕೊಳ್ಳಲು ಇಂತಹ ಕಲಬೆರಕೆ ಹಾಗೂ ವಿಷಕಾರಿ ಆಹಾರ ಪದ್ಧತಿಯೇ ಮುಖ್ಯ ಕಾರಣ ಎಂದು ಇಲಾಖೆ ತಿಳಿಸಿದ್ದು, ಸಾರ್ವಜನಿಕರ ಆರೋಗ್ಯದ ಬಗ್ಗೆ ತೀವ್ರ ಆತಂಕ ಮೂಡಿಸಿದೆ.

ಆಹಾರ ಇಲಾಖೆಯ ವರದಿ ಪ್ರಕಟವಾದ ಬೆನ್ನಲ್ಲೇ, ನಿಯಮ ಉಲ್ಲಂಘಿಸಿ ವಿಷಕಾರಿ ರಾಸಾಯನಿಕಗಳನ್ನು ಬಳಸುತ್ತಿರುವ ಇಂತಹ ಬೇಜವಾಬ್ದಾರಿ ತಯಾರಕರ ಮತ್ತು ಬೇಕರಿ ಮಾಲೀಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಅಂತಹ ತಯಾರಕರ ಪರವಾನಗಿ ರದ್ದುಪಡಿಸಿ, ಅಂಗಡಿಗಳನ್ನು ತಕ್ಷಣವೇ ಮುಚ್ಚಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ:

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…

9 hours ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…

9 hours ago

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ -vishwanews24

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…

10 hours ago

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

11 hours ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

14 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

14 hours ago