ಬೆಂಗಳೂರು: ನಾನು ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇನೆ. ಅದನ್ನು ನಾನು ಸಚಿವ ಅಲ್ಲ ಓರ್ವ ಶಾಸಕನಾಗಿ ಗೌರವಿಸುತ್ತೇನೆ. ನ್ಯಾಯಾಲಯ ಸ್ಪೀಕರ್ ಅಧಿಕಾರ ಏನು ಅನ್ನೋದನ್ನ ಎತ್ತಿ ಹಿಡಿದಿದೆ ಎಂದು ಜಲ ಸಂಪಲ್ಮೂಲ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ..
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಾಸಕರು ಕಲಾಪಕ್ಕೆ ಹೋಗಬಹುದು ಬಿಡಬಹುದು. ಆದರೆ, ಪಕ್ಷದ ಕೈಯಲ್ಲಿ ವಿಪ್ ಇದೆಯಲ್ಲ. ಅನರ್ಹತೆಯೇ ಬೇರೆಯ ಕಾನೂನಾಗಿದ್ದು, ನಾನು ನನ್ನ ಶಾಸಕರಿಗೆ ಮನವಿ ಮಾಡುತ್ತೇನೆ ಎಂದು ಹೇಳಿದರು. ಅವರನ್ನು ನಾನು ರೆಬೆಲ್ ಶಾಸಕರು ಎಂದು ಒಪ್ಪಿಕೊಳ್ಳುವುದಿಲ್ಲ, ಅವರು ನನ್ನ ಸ್ನೇಹಿತರು ಎಂದು ಹೇಳಿದ್ದಾರೆ.
ಬೇರೆಯವರ ನಂಬಿ ಹೋಗಬೇಡಿ. ನಿಮ್ಮ ಮೇಲೆ ಮಂಗನ ಟೋಪಿ ಹಾಕುತ್ತಾರೆ. ಅನರ್ಹತೆ ಅನ್ನೋದು ಒಂದು ಇದೆ ಅಲ್ವಾ. ಅನರ್ಹ ಆದರೆ ನೀವು ಮತ್ತೆ ಮಂತ್ರಿ ಆಗಲು ಸಾಧ್ಯವಿಲ್ಲ.
ಹೀಗಾಗಿ ನಿಮ್ಮನ್ನು ಗೆಲ್ಲಿಸಿರುವ ಜನರ ಮುಖ, ನಿಮ್ಮ ಕುಟುಂಬದವರ ಮುಖ ನೋಡಿ ನೀವು ಅನರ್ಹತೆಯ ಅಸ್ತ್ರಕ್ಕೆ ಬಲಿಯಾಗಬೇಡಿ. ವಿಶ್ವಾಸ ಮತದ ಬಗ್ಗೆ ನಾಳೆ ಮಾತನಾಡೋಣ ಎಂದು ಶಾಸಕ ಮಿತ್ರರಲ್ಲಿ ಮನವಿ ಮಾಡುವ ಮೂಲಕ ಡಿಕೆಶಿ ಅವರು ಪರೋಕ್ಷವಾಗಿ ಅನಹರ್ತೆಯ ಭಯ ಹುಟ್ಟಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…