ಬೇಲಿಕೇರಿ ಅದಿರು ನಾಪತ್ತೆ ಪ್ರಕರಣ: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ 7 ವರ್ಷ ಜೈಲು ಶಿಕ್ಷೆ – vishwanews24

Featured, ರಾಜ್ಯ ನ್ಯೂಸ್

ಬೇಲಿಕೇರಿ ಅದಿರು ನಾಪತ್ತೆ ಪ್ರಕರಣ: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ 7 ವರ್ಷ ಜೈಲು ಶಿಕ್ಷೆ, 9 ಕೋಟಿ ರೂ. ದಂಡ

ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅದಿರು ಅಕ್ರಮ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್​ ಸೈಲ್​​ಗೆ 7 ವರ್ಷ ಜೈಲು ಶಿಕ್ಷೆ ಮತ್ತು 9 ಕೋಟಿ ದಂಡ ವಿಧಿಸಿದೆ.

ಪ್ರಕರಣದ ವಾದ-ಪ್ರತಿವಾದ ಆಲಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಕ್ಟೋಬರ್​ 24 ರಂದು ಶಾಸಕ ಸತೀಶ್​ ಸೈಲ್​ ದೋಷಿ ಎಂದು ತೀರ್ಪು ನೀಡಿತ್ತು. ಇಂದು ಶಿಕ್ಷೆ ವಿಧಿಸಿದೆ. ದಂಡದ ಹಣವನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಲು ನ್ಯಾಯಾಲಯ ಆದೇಶಿಸಿದೆ.

ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿಗೆ ಮಾತ್ರ ಅವಕಾಶ : ಸಿಎಂ ಖಡಕ್ ಸೂಚನೆ – vishwanews24

ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರ ಶಾಸಕ ಸತೀಶ್‌ ಸೈಲ್‌ ಅವರಿಗೆ ಮೊದಲ ಕೇಸ್‌ ಅಂದರೆ ಒಳಸಂಚು ಪ್ರಕರಣದಲ್ಲಿ ಐದು ವರ್ಷ ಜೈಲು ಶಿಕ್ಷೆ, ವಂಚನೆ ಪ್ರಕರಣದಲ್ಲಿ ಏಳು ವರ್ಷ ಶಿಕ್ಷೆ ಪ್ರಕಟವಾಗಿದೆ. ಅಲ್ಲದೆ ಕಳ್ಳತನ ಪ್ರಕರಣದಲ್ಲಿ 2 ವರ್ಷ ಜೈಲುಶಿಕ್ಷೆ ನೀಡಿ ಕೋರ್ಟ್‌ ಆದೇಶಿಸಿದೆ.

Leave a Reply