ಕುಂದಾಪುರ, : ಶಿವಮೊಗ್ಗ ಲೋಕಸಭಾ ಕ್ಷೇತ್ರವನ್ನು ನಾನು ಎರಡು ಬಾರಿ ಪ್ರತಿನಿಧಿಸಿದ್ದೇನೆ. ಯಡಿಯೂರಪ್ಪನವರು ಒಂದು ಬಾರಿ ಪ್ರತಿನಿಧಿಸಿದ್ದಾರೆ. ಈಗ ಕ್ಷೇತ್ರದ ಶಾಸಕರು ಬಿಜೆಪಿಯವರೆ ಆಗಿದ್ದು ಬೈಂದೂರನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದು ನಮ್ಮ ಗುರಿ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಹಿಂದಿನಿಂದಲೂ ಕೂಡಾ ಶಿವಮೊಗ್ಗ ಕ್ಷೇತ್ರದ ಬೈಂದೂರಿಗೆ ಸಾಕಷ್ಟು ಅನುದಾನಗಳು ಬಂದಿದೆ. ಮುಂದಿನ ದಿನಗಳಲ್ಲಿ ನಾವೆಲ್ಲಾ ಒಗ್ಗಟ್ಟಾಗಿ ಚುನಾವಣೆ ಎದುರಿಸಬೇಕಾಗಿದೆ. ಕಳೆದ ಚುನಾವಣೆಗಳಲ್ಲಿ 8 ವಿಧಾನ ಸಭಾ ಕ್ಷೇತ್ರಗಳ ಪೈಕಿ ಹೆಚ್ಚು ಅಂತರವನ್ನು ತಂದುಕೊಟ್ಟ ಕ್ಷೇತ್ರ ಎಂದರೆ ಅದು ಬೈಂದೂರು ಎಂದರು.
ಮಾ.12ರಂದು ನೆಂಪುವಿನಲ್ಲಿರುವ ಶಾಸಕರ ನಿವಾಸದಲ್ಲಿ ನಡೆದ ವಂಡ್ಸೆ, ಕಾವ್ರಾಡಿ ಶಕ್ತಿ ಕೇಂದ್ರಗಳ ಲೋಕಸಭಾ ಚುನಾವಣೆ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಇವತ್ತಿನಿಂದ ಕ್ಷೇತ್ರಾದ್ಯಂತ ಪ್ರವಾಸ ಆರಂಭ ಮಾಡಿದ್ದೇನೆ. ಕಾರ್ಯಕರ್ತರನ್ನು ಒಟ್ಟುಗೂಡಿಸಿ ಚುನಾವಣೆಗೆ ಸಜ್ಜುಗೊಳಿಸುವ ಕಾರ್ಯ ಆರಂಭವಾಗಿದೆ. ಕಾರ್ಯಕರ್ತರ, ಜನರ ಬಾವನೆಗಳು ಹುಸಿಯಾಗದಂತೆ ಮುಂದೆಯೂ ಕೂಡಾ ಕೆಲಸ ಮಾಡುತ್ತೇನೆ ಎಂದರು.
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…
ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …
ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ: ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…
ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…
ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…
ಆರ್ ಎಸ್ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…