Featured

ಬೈಂದೂರು : ಎಟಿಎಂ ಕೇಂದ್ರದಿಂದ ಹಣ ತೆಗೆಯುಲು ಸಹಾಯ ಮಾಡುವ ನೆಪದಲ್ಲಿ ಗ್ರಾಹಕರ ಕಾರ್ಡ್ ಬಳಸಿ ಹಣ ಕಳವು- ಇಬ್ಬರು ಅಂತರ್ ರಾಜ್ಯ ಆರೋಪಿಗಳ ಬಂಧನ

ಬೈಂದೂರು:ಎಟಿಎಂ ಕೇಂದ್ರದಿಂದ ಹಣ ತೆಗೆಯುಲು ಸಹಾಯ ಮಾಡುವ ನೆಪದಲ್ಲಿ ಗ್ರಾಹಕರ ಕಾರ್ಡ್ ಬಳಸಿ ಹಣ ಕಳವು- ಇಬ್ಬರು ಅಂತರ್ ರಾಜ್ಯ ಆರೋಪಿಗಳ ಬಂಧನ

ಬೈಂದೂರು: ಎಟಿಎಂ ಕೇಂದ್ರದಿಂದ ಹಣ ತೆಗೆಯುಲು ಸಹಾಯ ಮಾಡುವ ನೆಪದಲ್ಲಿ ಗ್ರಾಹಕರ ಕಣ್ಣು ತಪ್ಪಿಸಿ ಅವರ ಎಟಿಎಂ ಕಾರ್ಡ್ ಬಳಸಿ ಹಣ ಎಗರಿಸಿದ ಮೂರು ಪ್ರತ್ಯೇಕ ಘಟನೆಗಳ ಇಬ್ಬರು ಹರಿಯಾಣ ಮೂಲದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಈ ಬಗ್ಗೆ ಮೂರು ಪ್ರಕರಣಗಳು ಬೈಂದೂರು ಠಾಣಾ ನಡೆದಿದ್ದು ದೂರು ದಾಖಲಾಗಿತ್ತು.

ಈ ಬಗ್ಗೆ ತನಿಖೆ ಕೈಗೊಂಡ ಪೊಲೀಸರ ತಂಡ ಹರಿಯಾಣ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಹರಿಯಾಣ ರಾಜ್ಯ ಬರ್ಸಿ ಜಟಾನ್‌ನ ಸಂದೀಪ್ (36), ಹರಿಯಾಣ ಔರಂಗನಗರದ ರವಿ (27) ಬಂಧಿತ ಆರೋಪಿಗಳಾಗಿದ್ದು ಇವರಿಂದ 21 ಸಾವಿರ ನಗದು, 217 ಎಟಿಎಂ ಕಾರ್ಡ್, ಪಿಒಎಸ್ ಯಂತ್ರ, 2 ಮೊಬೈಲ್ ಹಾಗೂ ಒಂದು ಮೋಟಾರ್ ಸೈಕಲ್‌ನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿಗಳ ಮೇಲೆ ವಿವಿಧ ರಾಜ್ಯಗಳಲ್ಲಿ 20ಕ್ಕೂ ಅಧಿಕ ಪ್ರಕರಣ ದಾಖಲಾಗಿರುವುದು ತನಿಖೆ ವೇಳೆ ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇವರು ಬಹುತೇಕ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ರಾಜಸ್ತಾನ ಕಡೆಗಳಲ್ಲಿ ಇಂತಹ ಕುಕೃತ್ಯಗಳನ್ನು ಎಸಗಿದ್ದು ವಿಚಾರಣೆಯಲ್ಲಿ ತಿಳಿದು ಬಂದಿದೆ ಎನ್ನಲಾಗಿದೆ.

ಶಿರೂರು ಭಾಗದ ಎರಡು ಎಟಿಎಂ ಹಾಗೂ ಬೈಂದೂರಿನ ಒಂದು ಎಟಿಎಂ ಕೇಂದ್ರದಲ್ಲಿ ಗ್ರಾಹಕರ ಸೋಗಿನಲ್ಲಿ ಬಂದು ನೈಜ ಗ್ರಾಹಕರಿಗೆ ಹಣ ವಿಥ್‌ಡ್ರಾ ಮಾಡಲು ಸಹಕಾರ ಮಾಡುವ ನೆಪದಲ್ಲಿ ಬೇರೆ ಎಟಿಎಂ ಕಾರ್ಡ್ ನೀಡಿ ಮೂರು ಕಡೆ ಒಟ್ಟು 2 ಲಕ್ಷದ 26 ಸಾವಿರ ಹಣ ಎಗರಿಸಿದ್ದರು.

ಈ ಕುರಿತು ಮೂರು ಪ್ರತ್ಯೇಕ ಪ್ರಕರಣಗಳು ಬೈಂದೂರು ಠಾಣೆಯಲ್ಲಿ ದಾಖಲಾಗಿತ್ತು. ತನಿಖೆ ಕೈಗೆತ್ತಿಕೊಂಡ ಪೊಲೀಸರು ಕುಂದಾಪುರದಲ್ಲಿ ಬುಧವಾರ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ. ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎಸ್.ಟಿ.ಸಿದ್ದಲಿಂಗಪ್ಪ, ಪರಮೇಶ್ವರ ಹೆಗಡೆ, ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ಕೆ.ಯು, ಬೈಂದೂರು ವೃತ್ತನಿರೀಕ್ಷಕ ಸವಿತ್ರ ತೇಜ್ ಸೂಚನೆಯಂತೆ, ಬೈಂದೂರು ಪೊಲೀಸ್ ಠಾಣೆ ಪಿಎಸ್‌ಐ ತಿಮ್ಮೇಶ್, ಅಪರಾಧ ವಿಭಾಗದ ಸಿಬ್ಬಂದಿಗಳಾದ ಸುಜಿತ್ ಕುಮಾರ್, ಮಾಳಪ್ಪ, ಸೂರ ನಾಯ್ಕ್, ನಾಗಶ್ರೀ, ಶ್ರೀಧರ ಪಾಟೀಲ್ ಹಾಗೂ ಕುಂದಾಪುರ ಠಾಣೆಯ ಅಪರಾಧ ವಿಭಾಗದ ಸಿಬ್ಬಂದಿಗಳು ಸಹಕರಿಸಿದ್ದರು

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

12 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

12 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

13 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

13 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

13 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

13 hours ago