ಕುಂದಾಪುರ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿರುವ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಅವರು ಶುಕ್ರವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಇತ್ತೀಚೆಗೆ ಪಕ್ಷದ ಟಿಕೆಟ್ ಅಪೇಕ್ಷಿಸುವ ಅಪೇಕ್ಷಿತರು ಕೆಪಿಸಿಸಿ ಕಚೇರಿಗೆ ನಿಯಮ ಪ್ರಕಾರ ಅರ್ಜಿ ಸಲ್ಲಿಸುವಂತೆ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಪ್ರಕಟಣೆ ಹೊರಡಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ವಂಡ್ಸೆ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಶೆಟ್ಟಿ ಗುಡಿಬೆಟ್ಟು ಅವರೊಂದಿಗೆ ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ತಮಿಳು ನಟ ವಿಶಾಲ್ – Vishwanews24
ಈ ಸಂದರ್ಭದಲ್ಲಿ ಸಹೋದರ ಕೆ ಮಾಧವ ಪೂಜಾರಿ, ಪುತ್ರ ಪವನ್ ಜಿ ಪೂಜಾರಿ ಹಾಗೂ ಇತರರು ಇದ್ದರು.
ಈ ಕುರಿತು ಮ್ಯಾಂಗಲೋರಿಯನ್ ಪ್ರತಿನಿಧಿಯೊಂದಿಗೆ ಮಾತನಾಡಿದ ಮಾಜಿ ಶಾಸಕ ಗೋಪಾಲ ಪೂಜಾರಿ ಅವರು, ಪಕ್ಷದ ಹಿರಿಯರು, ಕಾರ್ಯಕರ್ತರು ಹಾಗೂ ಹಿತೈಷಿಗಳ ಅಭಿಪ್ರಾಯವನ್ನು ಪಡೆದು ಈ ಬಾರಿಯ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಆಕಾಂಕ್ಷಿಯಾಗಿ ಪಕ್ಷದ ನಿಯಮದಂತೆ ಅರ್ಜಿ ಸಲ್ಲಿಸಿದ್ದೇನೆ. ಪಕ್ಷ ಪರಿಗಣಿಸುವ ವಿಶ್ವಾಸವಿದೆ. ಕ್ಷೇತ್ರದ ಜನ ಆಶೀರ್ವಾದ ಮಾಡಿದ್ದಲ್ಲಿ ಇನ್ನೊಮ್ಮೆ ಬೈಂದೂರು ಕ್ಷೇತ್ರದ ಶಾಸಕನಾಗಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ದುಡಿಯಲು ಬದ್ದನಾಗಿರುವುದಾಗಿ ತಿಳಿಸಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ತಮಿಳು ನಟ ವಿಶಾಲ್ – Vishwanews24
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್ರಾಜ್ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…