Featured

ಬೈಂದೂರು: ಕಾರಿನ ಜೊತೆ ವ್ಯಕ್ತಿಯ ಮೃತದೇಹ ಪತ್ತೆ ಪ್ರಕರಣ : ಮಹಿಳೆ ಸೇರಿ ಮೂವರ ಬಂಧನ -Vishwanews24

ಬೈಂದೂರು: ಕಾರಿನ ಜೊತೆ ವ್ಯಕ್ತಿಯ ಮೃತದೇಹ ಪತ್ತೆ ಪ್ರಕರಣ : ಮಹಿಳೆ ಸೇರಿ ಮೂವರ ಬಂಧನ

ಬೈಂದೂರು : ಇಲ್ಲಿನ ಹೇನುಬೇರು ಗ್ರಾಮಕ್ಕೆ ತೆರಳುವ ಮಾರ್ಗದಲ್ಲಿ ಸುಟ್ಟುಹೋದ ಸ್ಥಿತಿಯಲ್ಲಿ ಕಾರು ಹಾಗೂ ಅದರೊಳಕ್ಕೆ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ಜಾಡು ಹಿಡಿದು ಹೊರಟ ಬೈಂದೂರು ಪೊಲೀಸರು, ಓರ್ವ ಮಹಿಳೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿ. ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯ 4 ದಿನಗಳ ಪೊಲೀಸ್ಟ ಕಸ್ಟಡಿಗೆ ನೀಡಿದೆ.

ಸುಟ್ಟು ಹೋದ ಕಾರಿನ ಚೆಸ್ಸಿಯನ್ನು ಫೊರೆನ್ಸಿಕ್ ತಜ್ಞರ ಸಹಾಯದಿಂದ ಪರಿಶೀಲಿಸಿ, ಮಾಲಕನ ವಿವರಗಳನ್ನು ಪತ್ತೆಹಚ್ಚಲಾಗಿತ್ತು. ಕಾರಿನ ಮಾಲಕ ಕಾರ್ಕಳ ತಾಲೂಕಿನ ಮಾಳ ಗ್ರಾಮದ ನಿವಾಸಿ ಸದಾನಂದ ಶೇರೆಗಾರ್ (54) ಎಂದು ಗುರುತಿಸಲಾಗಿದ್ದು ಆತನೇ ಕಾರಿಗೆ ಬೆಂಕಿ ಹಚ್ಚಿ ಕಾರ್ಕಳ ಮೂಲದ ಮೇಸ್ತ್ರಿ ಆನಂದ ದೇವಾಡಿಗ (55) ಎಂಬಾತನನ್ನು ಕೊಲೆಗೈದಿದ್ದಾನೆ ಎಂಬುದು ದೃಢಪಟ್ಟಿದೆ. ಘಟನೆಯ ಸಂಬಂಧ ಸದಾನಂದ ಶೇರುಗಾರ್ ಹಾಗೂ ಕೃತ್ಯಕ್ಕೆ ಸಹಕರಿಸಿದ ಮಹಿಳೆ ಶಿಲ್ಪಾ (34) ಎಂಬಾಕೆಯನ್ನು ಗುರುವಾರ ಬೆಳಿಗ್ಗೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಕಾರ್ಕಳದಲ್ಲಿ ಸರ್ವೇಯರ್ ಆಗಿದ್ದ ಸದಾನಂದ ಶೇರೆಗಾರ್ ಜಾಗ ಹಾಗೂ ಹಣದ ವಿಚಾರದಲ್ಲಿನ ಅವ್ಯವಹಾರವನ್ನು ಮುಚ್ಚಿಹಾಕಲು, ಬೇರೊಬ್ಬ ವ್ಯಕ್ತಿಯನ್ನು ತನ್ನ ಕಾರಿನಲ್ಲಿ ಕೂರಿಸಿ ಬೆಂಕಿ ಹಚ್ಚಿ ಕೊಲೆಗೈಯುವ ಪ್ಲಾನ್ ಸೃಷ್ಟಿಸಿದ್ದ. ಮೇ.12ರಂದು ತನಗೆ ಆಪ್ತವಾಗಿದ್ದ ಶಿಲ್ಪ ಎಂಬ ಮಹಿಳೆಯ ಸಹಕಾರ ಪಡೆದು, ಆಕೆಯ ಸ್ನೇಹಿತ ಕಾರ್ಕಳದಲ್ಲಿ ಮೇಸ್ತ್ರಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯನ್ನು ಮಂಗಳವಾರ ಮಧ್ಯಾಹ್ನದ ನಂತರ ಕಾರ್ಕಳದ ಬಾರೊಂದಕ್ಕೆ ಕರೆಯಿಸಿ ಕಂಠಪೂರ್ತಿ ಕುಡಿಸಿದ್ದರು. ರಾತ್ರಿಯಾಗುತ್ತಿದ್ದಂತೆ ಆತನನ್ನು ಪುಸಲಾಯಿಸಿ ನಿದ್ರೆ ಮಾತ್ರೆಯನ್ನು ನುಂಗಿಸಿ ಬೈಂದೂರಿನ ಕಡೆಗೆ ಬಂದಿದ್ದರು. ಮಂಗಳವಾರ ರಾತ್ರಿ 12.30ರ ಸುಮಾರಿಗೆ ಸಾಸ್ತಾನ ಟೋಲ್ ಗೇಟಿನಲ್ಲಿ ಬೈಂದೂರು ಕಡೆಗೆ ತೆರಳಿರುವುದು ದೃಡಪಟ್ಟಿದ್ದಲ್ಲದೇ, ಟೋಲ್ ಗೇಟಿನಲ್ಲಿ ಮಹಿಳೆಯೋರ್ವಳು ಕಾರಿನಿಂದ ಇಳಿದು ಟೋಲ್ ನೀಡಿರುವ ದೃಶ್ಯ ಸೆರೆಯಾಗಿತ್ತು. ಅಲ್ಲಿಂದ ಬೈಂದೂರು ಒತ್ತಿನಣೆ ಸಮೀಪ ಹೇನುಬೇರು ನಿರ್ಜನ ಪ್ರದೇಶವೆಂಬದು ಅರಿತು ಅಲ್ಲಿಯೇ ಕಾರು ತಂದು ನಿಲ್ಲಿಸಿದ್ದಾರೆ. ನಿದ್ರೆ ಮಾತ್ರೆಯ ಮಂಪರಿನಲ್ಲಿದ್ದ ವ್ಯಕ್ತಿ ಕಾರಿನ ಒಳಕ್ಕೆ ಇರುವಾಗಲೇ ಕಾರಿಗೆ ಬೆಂಕಿ ಹಚ್ಚಿದ್ದಾರೆ. ಅಲ್ಲಿಂದ ಪರಾರಿಯಾಗಿದ್ದಾರೆ.

ನಂತರ ತಲೆಮರೆಸಿಕೊಳ್ಳುವ ಸಲುವಾಗಿ ಬೆಂಗಳೂರಿಗೆ ಬಸ್ಸಿನಲ್ಲಿ ಹೊರಟಿದ್ದ ಸದಾನಂದ ಹಾಗೂ ಶಿಲ್ಪ, ಬಸ್ ಹಾಳಾಗಿದ್ದರಿಂದ ಮತ್ತೆ ಮೂಡುಬಿದಿರೆಗೆ ವಾಪಾಸಾಗಿದ್ದಾರೆ. ಅಲ್ಲಿಂದ ಕಾರ್ಕಳಕ್ಕೆ ಬೆಳಿಗ್ಗೆ ಬಸ್ಸಿನಲ್ಲಿ ಬರುತ್ತಿದ್ದ ಸಂದರ್ಭ ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ. ಕೃತ್ಯಕ್ಕೆ ಸಹಕರಿಸಿದ ಸದಾನಂದನ ಸಂಬಂಧಿಗಳಾದ ಇಬ್ಬರು ವ್ಯಕ್ತಿಗಳನ್ನೂ ಇದಕ್ಕೂ ಮೊದಲೇ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತನಿಕೆಯ ಜಾಡು ಹಿಡಿದು ಹೊರಟ ಬೈಂದೂರು ಪೊಲೀಸರು ಶೀಘ್ರವಾಗಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ತನಿಖೆ ಮುಂದುವರಿಸಿದ್ದಾರೆ. ಅವರಿಗೆ ಸಹಕರಿಸಿದ್ದರು ಎನ್ನಲಾದ ಇಬ್ಬರನ್ನು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಒಂದೇ ದಿನದಲ್ಲಿ ಪ್ರಕರಣ ಭೇದಿಸಿದ ಪೊಲೀಸರಿಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಉಡುಪಿ ಎಸ್‌ಪಿ ವಿಷ್ಣುವರ್ಧನ್ ಅವ ಮಾರ್ಗದರ್ಶನದಲ್ಲಿ ಎಎಸ್‌ಪಿ ಸಿದ್ಧಲಿಂಗಯ್ಯ ಹಾಗೂ ಡಿವೈಎಸ್‌ಪಿ ಶ್ರೀಕಾಂತ್ ಕೆ. ಅವರ ನಿರ್ದೇಶನದಲ್ಲಿ, ಬೈಂದೂರು ವೃತ್ತನಿರೀಕ್ಷಕ ಸಂತೋಷ್ ಕಾಯ್ಕಿಣಿ ಅವರ ನೇತೃತ್ವದಲ್ಲಿ ಬೈಂದೂರು ಪಿಎಸ್‌ಐ ಪವನ್ ನಾಯಕ್ ಗಂಗೊಳ್ಳಿ ಪಿಎಸ್‌ಐ ವಿನಯ ಕೊರ್ಲಹಳ್ಳಿ, ಪೊಲೀಸ್ ಕಾನ್ಸ್‌ಟೇಬಲ್‌ಗಳಾದ ನಾಗೇಂದ್ರ, ಮೋಹನ, ಕೃಷ್ಣ, ಶ್ರೀಧರ, ಪ್ರಿನ್ಸ್, ಚಂದ್ರ ಗಂಗೊಳ್ಳಿ, ಚಾಲಕ ಚಂದ್ರಶೇಖರ್, ಸುಜಿತ್, ಶ್ರೀನಿವಾಸ್, ಶಾಂತರಾಮ ಶೆಟ್ಟಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago