Featured

ಬೈಂದೂರು ಕಾರ್ಯಕರ್ತರ ಹಾಗೂ ಮತದಾರರ ಋಣ ಸಂದಾಯವನ್ನ ತೀರಿಸುತ್ತೇನೆ : ಸಂಸದ ಬಿ ವೈ ರಾಘವೇಂದ್ರ – vishwanews24

ಬೈಂದೂರು ಕಾರ್ಯಕರ್ತರ ಹಾಗೂ ಮತದಾರರ ಋಣ ಸಂದಾಯವನ್ನ ತೀರಿಸುತ್ತೇನೆ : ಸಂಸದ ಬಿ ವೈ ರಾಘವೇಂದ್ರ

ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರ ಅತಿ ಹೆಚ್ಚು ಅಂತರದಲ್ಲಿ ನನ್ನ ಗೆಲುವಿಗೆ ಕಾರಣವಾಗಿದೆ. ಈ ಕ್ಷೇತ್ರದ ಕಾರ್ಯಕರ್ತರು ಹಾಗೂ ಮತದಾರರ ಋಣ ಸಂದಾಯವನ್ನ ತೀರಿಸುತ್ತೇನೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಬಿ ವೈ ರಾಘವೇಂದ್ರ ಹೇಳಿದ್ದಾರೆ ಅವರು ಶುಕ್ರವಾರ ಹೆಮ್ಮಾಡಿಯ ಜುವೆಲ್ ಪಾರ್ಕ್ ನಲ್ಲಿರುವ ಜಯಶ್ರೀ ಸಭಾಂಗಣದಲ್ಲಿ ಲೋಕಸಭಾ ಚುನಾವಣೆ ಮತ್ತು ಪರಿಷತ್ ಚುನಾವಣೆಯ ಗೆಲುವಿಗೆ ಕಾರಣಕರ್ತರಾದ ಕಾರ್ಯಕರ್ತರನ್ನ ಸನ್ಮಾನಿಸಿ ಗೌರವಿಸುವ ಕಾರ್ಯಕ್ರಮದ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ನನ್ನ ಅಧಿಕಾರ ಅವಧಿಯಲ್ಲಿ ಕೇಂದ್ರ ಸರಕಾರದಿಂದ ಸಿಗುವ ಸವಲತ್ತುಗಳನ್ನು ಮತ್ತು ರಾಜ್ಯ ಸರ್ಕಾರದಿಂದ ಪಡೆಯಬಹುದಾದ ಅನುದಾನಗಳನ್ನು ಬೈಂದೂರು ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ವಿನಯೋಗಿ ಈ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲು ಶಾಸಕ ಗುರುರಾಜ್ ಶೆಟ್ಟಿ ಅವರ ಜೊತೆಗೆ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದರು.

ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳು ಸಂಪೂರ್ಣ ಸ್ಥಗಿತಗೊಂಡಿವೆ ಬಿಜೆಪಿ ಸರ್ಕಾರ ಇದ್ದಾಗ ಮಂಜೂರಾತಿಯಾಗಿದ್ದ ಕಾಮಗಾರಿಗಳು ಕೂಡ ಈ ಸರಕಾರ ಅನುಷ್ಠಾನಕ್ಕೆ ತೆಗೆದುಕೊಳ್ಳುತ್ತಿಲ್ಲ. ಈಗಾಗಲೇ ಸರ್ಕಾರ ಬಂದು ಒಂದು ವರ್ಷ ಕಳೆದಿದೆ, ಇನ್ನಾದರೂ ಅಭಿವೃದ್ಧಿಯ ಕಡೆಗೆ ಸರ್ಕಾರ ಗಮನ ಕೊಡುವಂತಾಗಲಿ ಎಂದು ಆಗೈಸುತ್ತೇನೆ.

ಈ ಕ್ಷೇತ್ರದಲ್ಲಿ ಸಾಕಷ್ಟು ಸಮಸ್ಯೆಗಳಿಗೆ ಪರಿಹಾರ ಕಾಣಬೇಕಾಗಿದ್ದು ಅರಣ್ಯ ಸಮಸ್ಯೆ, ಮರಳಿನ ಸಮಸ್ಯೆ ಬಡವರಿಗೆ ನಿವೇಶನ ಸಮಸ್ಯೆಗಳು ಹೀಗೆ ಹತ್ತು ಹಲವು ಸಮಸ್ಯೆಗಳಿದ್ದು ಇದರ ಪರಿಹಾರಕ್ಕೆ ಕಾನೂನಿನಲ್ಲಿ ಅವಕಾಶ ಕಲ್ಪಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ. ರಾಜ್ಯ ಸರ್ಕಾರ ಆರ್ಥಿಕವಾಗಿ ಸಂಪೂರ್ಣ ದಿವಾಳಿಯಾಗಿದ್ದು ಬೆಲೆ ಏರಿಕೆ ಮೂಲಕ ಜನರಿಗೆ ಹೆಚ್ಚಿನ ಹೊರೆ ಹೊರೆಸುತ್ತಿದೆ ಇದರ ವಿರುದ್ಧ ಬಿಜೆಪಿ ಹೈಕಮಾಂಡ್ ನಿರ್ಧಾರಕ್ಕೆ ಬಂದಿದ್ದು ರಾಜ್ಯದ ಎಲ್ಲೆಡೆ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ತೀರ್ಮಾನಿಸಿದ್ದೇವೆ ಅದೇ ರೀತಿ ಎಲ್ಲಾ ಕಡೆ ಪ್ರತಿಭಟನೆ ನಡೆಸಲಾಗುತ್ತದೆ ಮತ್ತು ಆ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ಕೊಡಲಾಗುತ್ತಿದೆ ಎಂದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago