ಬೈಂದೂರು : ಕ್ಷೇತ್ರದ ಪ್ರತಿ ಮನೆ ಮನೆಗೂ ಶುದ್ಧ ಕುಡಿಯುವ ನೀರು ; ಕೇಂದ್ರದಿಂದ ರೂ.200 ಕೋಟಿ ಹಣ ಬಿಡುಗಡೆ : ಬಿ.ವೈ.ರಾಘವೇಂದ್ರ -Vshwanews24

ಬೈಂದೂರು : ಕ್ಷೇತ್ರದ ಪ್ರತಿ ಮನೆ ಮನೆಗೂ ಶುದ್ಧ ಕುಡಿಯುವ ನೀರು ; ಕೇಂದ್ರದಿಂದ ರೂ.200 ಕೋಟಿ ಹಣ ಬಿಡುಗಡೆ : ಬಿ.ವೈ.ರಾಘವೇಂದ್ರ -Vshwanews24

ಬೈಂದೂರು : ಕ್ಷೇತ್ರದ ಪ್ರತಿ ಮನೆ ಮನೆಗೂ ಶುದ್ಧ ಕುಡಿಯುವ ನೀರು ಪೂರೈಕೆಗೆ ಪ್ರಥಮ ಆದ್ಯತೆ ನೀಡಲಾಗಿದ್ದು ಈ ಕಾರ್ಯಕ್ಕೆ ಕೇಂದ್ರ ಸರ್ಕಾರದಿಂದ ರೂ.200 ಕೋಟಿ ಹಣ ಬಿಡುಗಡೆಯಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಬೈಂದೂರಿನಲ್ಲಿ ಇಂದು ಪಟ್ಟಣ ಪಂಚಾಯಿತಿ, ಮೆಸ್ಕಾಂ ಸಬ್‌ಸ್ಟೇಷನ್ ಉದ್ಘಾಟನೆ, ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಶಿಲಾನ್ಯಾಸದ ಅಭಿವೃದ್ಧಿ ಕಾರ್ಯಗಳಿಗೆ ಆರಂಭ ನೀಡಿ, ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಹಾಗೂ ಮುಖ್ಯಮಂತ್ರಿಗಳು ಹೆಚ್ಚಿನ ಆದ್ಯತೆ ನೀಡಿದ್ದು, ಕ್ಷೇತ್ರದ ವ್ಯಾಪ್ತಿಯಲ್ಲಿ ಖಾಲಿ ಇರುವ ಜಾಗ ಗುರುತಿಸಿ, ನಿವೇಶನ ಇಲ್ಲದವರಿಗೆ ನಿವೇಶನ ನೀಡಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಪ.ಪಂ ಹೆಚ್ಚು ಅನುದಾನ ಬರುವ ಉದ್ದೇಶದಿಂದ ಉನ್ನತ ದರ್ಜೆ ಕಾರ್ಯ ಕೈಗೊಳ್ಳಲಾಗಿದೆ ಎಂದರು.

ಪ್ರವಾಸೋದ್ಯಮ ಬಿ.ಎಂ.ಸುಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ ಬೈಂದೂರು ಕ್ಷೇತ್ರಕ್ಕೆ ರೂ.1500 ಕೋಟಿಗೂ ಹೆಚ್ಚಿನ ಹಣ ದೊರೆತಿದೆ. ಕಂದಾಯ ಸಾಧನೆಯಲ್ಲಿ ರಾಜ್ಯದಲ್ಲೇ ಮೂರನೇ ಸ್ಥಾನದಲ್ಲಿರುವ ಬೈಂದೂರಿನಲ್ಲಿ ಕೈಗಾರಿಕಾ ವಲಯ, ಎಪಿಎಂಸಿ ಮಾರುಕಟ್ಟೆ ನಿರ್ಮಾಣದೊಂದಿಗೆ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು ಈ ವೇಳೆ ಕೊಡೇರಿ ದೋಣಿ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಒದಗಿಸಿದರು.

ಬೈಂದೂರಿನ ತಾತ್ಕಾಲಿಕ ಅಗ್ನಿಶಾಮಕ ಠಾಣೆಯನ್ನು ಗೃಹ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಉದ್ಘಾಟಿಸಿ ರಾಜ್ಯದಲ್ಲಿ 10 ನೂತನ ಅಗ್ನಿಶಾಮಕ ಠಾಣೆ ಮಂಜೂರು ಮಾಡಲಾಗಿದೆ, ರೂ.25 ಕೋಟಿ ಅನುದಾನ ನೀಡಲಾಗಿದೆ. ಇಲಾಖೆಯನ್ನು ಉನ್ನತ ವ್ಯವಸ್ಥೆಗೆ ಮಾರ್ಪಾಡು ಮಾಡಲಾಗುತ್ತದೆ. ಆದಷ್ಟು ಬೇಗ ಬೈಂದೂರಿನಲ್ಲಿ ಇಲಾಖೆಯ ಸ್ವಂತ ಕಟ್ಟಡದ ಕೆಲಸಕ್ಕೆ ಆರಂಭ ಒದಗಲಿದೆ ಎಂದರು.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

9 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

9 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

9 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

9 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

10 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

10 hours ago