ಬೈಂದೂರು : ಕ್ಷೇತ್ರದ ಪ್ರತಿ ಮನೆ ಮನೆಗೂ ಶುದ್ಧ ಕುಡಿಯುವ ನೀರು ಪೂರೈಕೆಗೆ ಪ್ರಥಮ ಆದ್ಯತೆ ನೀಡಲಾಗಿದ್ದು ಈ ಕಾರ್ಯಕ್ಕೆ ಕೇಂದ್ರ ಸರ್ಕಾರದಿಂದ ರೂ.200 ಕೋಟಿ ಹಣ ಬಿಡುಗಡೆಯಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಬೈಂದೂರಿನಲ್ಲಿ ಇಂದು ಪಟ್ಟಣ ಪಂಚಾಯಿತಿ, ಮೆಸ್ಕಾಂ ಸಬ್‌ಸ್ಟೇಷನ್ ಉದ್ಘಾಟನೆ, ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಶಿಲಾನ್ಯಾಸದ ಅಭಿವೃದ್ಧಿ ಕಾರ್ಯಗಳಿಗೆ ಆರಂಭ ನೀಡಿ, ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಹಾಗೂ ಮುಖ್ಯಮಂತ್ರಿಗಳು ಹೆಚ್ಚಿನ ಆದ್ಯತೆ ನೀಡಿದ್ದು, ಕ್ಷೇತ್ರದ ವ್ಯಾಪ್ತಿಯಲ್ಲಿ ಖಾಲಿ ಇರುವ ಜಾಗ ಗುರುತಿಸಿ, ನಿವೇಶನ ಇಲ್ಲದವರಿಗೆ ನಿವೇಶನ ನೀಡಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಪ.ಪಂ ಹೆಚ್ಚು ಅನುದಾನ ಬರುವ ಉದ್ದೇಶದಿಂದ ಉನ್ನತ ದರ್ಜೆ ಕಾರ್ಯ ಕೈಗೊಳ್ಳಲಾಗಿದೆ ಎಂದರು.
ಪ್ರವಾಸೋದ್ಯಮ ಬಿ.ಎಂ.ಸುಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ ಬೈಂದೂರು ಕ್ಷೇತ್ರಕ್ಕೆ ರೂ.1500 ಕೋಟಿಗೂ ಹೆಚ್ಚಿನ ಹಣ ದೊರೆತಿದೆ. ಕಂದಾಯ ಸಾಧನೆಯಲ್ಲಿ ರಾಜ್ಯದಲ್ಲೇ ಮೂರನೇ ಸ್ಥಾನದಲ್ಲಿರುವ ಬೈಂದೂರಿನಲ್ಲಿ ಕೈಗಾರಿಕಾ ವಲಯ, ಎಪಿಎಂಸಿ ಮಾರುಕಟ್ಟೆ ನಿರ್ಮಾಣದೊಂದಿಗೆ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು ಈ ವೇಳೆ ಕೊಡೇರಿ ದೋಣಿ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಒದಗಿಸಿದರು.
ಬೈಂದೂರಿನ ತಾತ್ಕಾಲಿಕ ಅಗ್ನಿಶಾಮಕ ಠಾಣೆಯನ್ನು ಗೃಹ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಉದ್ಘಾಟಿಸಿ ರಾಜ್ಯದಲ್ಲಿ 10 ನೂತನ ಅಗ್ನಿಶಾಮಕ ಠಾಣೆ ಮಂಜೂರು ಮಾಡಲಾಗಿದೆ, ರೂ.25 ಕೋಟಿ ಅನುದಾನ ನೀಡಲಾಗಿದೆ. ಇಲಾಖೆಯನ್ನು ಉನ್ನತ ವ್ಯವಸ್ಥೆಗೆ ಮಾರ್ಪಾಡು ಮಾಡಲಾಗುತ್ತದೆ. ಆದಷ್ಟು ಬೇಗ ಬೈಂದೂರಿನಲ್ಲಿ ಇಲಾಖೆಯ ಸ್ವಂತ ಕಟ್ಟಡದ ಕೆಲಸಕ್ಕೆ ಆರಂಭ ಒದಗಲಿದೆ ಎಂದರು.
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…