ಬೈಂದೂರು : ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಲಾರಿ ; ಚಾಲಕ ಹಾಗೂ ನಿರ್ವಾಹಕ ಗಂಭೀರ ಗಾಯ – vishwanews24

Featured, ಉಡುಪಿ

ಬೈಂದೂರು : ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಲಾರಿ ; ಚಾಲಕ ಹಾಗೂ ನಿರ್ವಾಹಕ ಗಂಭೀರ ಗಾಯ

ಬೈಂದೂರು : ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬೈಂದೂರು ಸಮೀಪದ ಉಪ್ಪುಂದ ಶಾಲೆಬಾಗಿಲು ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಘಟನೆಯಲ್ಲಿ ಲಾರಿ ಚಾಲಕ ಹಾಗೂ ನಿರ್ವಾಹಕ ಗಂಭೀರವಾಗಿ ಗಾಯಗೊಂಡಿದ್ದಾರೆ, ಬೈಂದೂರಿನಿಂದ ಕುಂದಾಪುರ ಕಡೆಗೆ ಚಲಿಸುತ್ತಿದ್ದ ಲಾರಿ ಶಾಲೆಬಾಗಿಲು ಎಂಬಲ್ಲಿ ಬರುತ್ತಿದ್ದಂತೆ ತಿರುವು ಇರುವ ಸ್ಥಳಕ್ಕೆ ಸಮೀಪದಲ್ಲಿ ಹೆದ್ದಾರಿ ನಡುವೆ ಇರುವ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಎದುರಿನ ರಸ್ತೆಗೆ ಬಿದ್ದಿದೆ. ಈ ಸಂದರ್ಭ ಮಂಗಳೂರಿನಿಂದ ಬೆಳಗಾವಿಗೆ ಸರಕು ಸಾಗಿಸುತ್ತಿದ್ದ ಲಾರಿ ಬೈಂದೂರು ಕಡೆಗೆ ಚಲಿಸುತ್ತಿದ್ದು ಅದಕ್ಕೂ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 407 ಲಾರಿ ಚಾಲಕ ವಿಶ್ವನಾಥ ಹಾಗೂ ನಿರ್ವಾಹಕನನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಗೆ 407 ಲಾರಿ ಸಂಪೂರ್ಣ ನುಚ್ಚು ಗುಜ್ಜಾಗಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರೂ ಅಥವಾ ಲಿಂಗ ಪರಿವರ್ತನೆ ಆದವರು ಇನ್ನು ಮುಂದೆ  ಮಹಿಳಾ ಕ್ರಿಕೆಟ್​ನಲ್ಲಿ ಆಡುವಂತಿಲ್ಲ.. Vishwanews24

Leave a Reply