Featured

ಬೈಂದೂರು: ಜ.10ರಂದು ನಾಡದೋಣಿ ಮೀನುಗಾರರರಿಂದ ರಸ್ತೆ ತಡೆದು ಪ್ರತಿಭಟನೆ – vishwanews24

ಬೈಂದೂರು: ಜ.10ರಂದು ನಾಡದೋಣಿ ಮೀನುಗಾರರರಿಂದ ರಸ್ತೆ ತಡೆದು ಪ್ರತಿಭಟನೆ

ಬೈಂದೂರು: ಮೂರು ಜಿಲ್ಲೆಯಲ್ಲಿನ ಸುಮಾರು 320 ಕಿ.ಮೀ ವ್ಯಾಪ್ತಿಯ ಸಮುದ್ರದಲ್ಲಿ ಲೈಟ್ ಫಿಶಿಂಗ್ ಹಾಗೂ ಬುಲ್ ಟ್ರಾಲ್ ಮೂಲಕ ಮೀನುಗಾರಿಕೆ ಅವೈಜ್ಞಾನಿಕವಾಗಿ ನಡೆಯುತ್ತಿದ್ದು ಇದನ್ನು ವಿರೋಧಿಸಿ ಜ.10ರಂದು ತ್ರಾಸಿ ಬೀಚ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಒಕ್ಕೂಟದ ಅಧ್ಯಕ್ಷ ನಾಗೇಶ ಖಾರ್ವಿ ಹೇಳಿದ್ದಾರೆ.

ಉಪ್ಪುಂದ ನಾಡದೋಣಿ ಭವನದಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಅವೈಜ್ಞಾನಿಕ ಮೀನುಗಾರಿಕೆಯಿಂದ ಮೀನುಗಳ ಸಂತತಿ ಶೀಘ್ರ ನಾಶವಾಗುವ ಭೀತಿ ಎದುರಾಗಿದೆ. ರಾಜ್ಯದಲ್ಲಿ ಲೈಟ್ ಫಿಶಿಂಗ್ ನಿಷೇಧಿಸಿ ಸೂಕ್ತ ಕ್ರಮಕೈಗೊಂಡು ಸಾಂಪ್ರದಾಯಿಕ ನಾಡದೋಣಿ ಮೀನು ಗಾರರನ್ನು ಉಳಿಸುವ ನಿಟ್ಟಿನಲ್ಲಿ ಸರಕಾರ ಮುಂದಾಗಬೇಕೆಂದು ಆಗ್ರಹಿಸಿದರು.

ಲೈಟ್ ಫಿಶಿಂಗ್‌ಗೆ ಕಡಿವಾಣ ಹಾಕದೆ ಇಲಾಖೆಗಳು ಪರೋಕ್ಷವಾಗಿ ಸಹಕಾರ ನೀಡುತ್ತಿದೆ. ಇದರಿಂದ ನಾಡದೋಣಿ ಮೀನುಗಾರರು ಸಂಕಷ್ಟ ಅನುಭವಿಸು ವಂತೆ ಮಾಡುತ್ತಿದ್ದಾರೆ. ಈ ಮೂಲಕ ಮೀನುಗಾರರು ಮುಂದಿನ ದಿನಗಳಲ್ಲಿ ಬೀದಿಗೆ ಬೀಳುವಂತೆ ಮಾಡಲಾಗುತ್ತಿದೆ. ಈ ವಿಚಾರದಲ್ಲಿ ಅಧಿಕಾರಿಗಳು ನ್ಯಾಯಾಲಯದ ಆದೇಶವನ್ನು ಪಾಲನೆ ಮಾಡಬೇಕೆಂದು ಅವರು ತಿಳಿಸಿದರು.

ಜ.10ರಂದು ನಡೆಯುವ ಪ್ರತಿಭಟನೆಯಲ್ಲಿ ಭಟ್ಕಳದಿಂದ ಗಂಗೊಳ್ಳಿಯ ವರೆಗಿನ ಸಾವಿರಕ್ಕೂ ಹೆಚ್ಚು ದೋಣಿಗಳನ್ನು ಸಮುದ್ರದಲ್ಲಿ ಲಂಗರು ಹಾಕಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗುವುದು. ಇದರಲ್ಲಿ ಮೂರು ಜಿಲ್ಲೆಯ ನಾಡದೋಣಿ ಮೀನುಗಾರರು ಭಾಗವಹಿಸಲಿದ್ದಾರೆ. ಜನಪ್ರತಿನಿಧಿಗಳು, ಸಂಬಂಧಪಟ್ಟ ಅಧಿಕಾರಿಗಳಿಂದ ಸೂಕ್ತ ಸ್ಪಂದನೆ ಸಿಗದೆ ಹೋದರೆ ಜಿಲ್ಲಾಡಳಿತ ಕಚೇರಿ ಎದುರು ಧರಣಿ ನಡೆಸಲು ತಿರ್ಮಾನಿಸಲಾಗಿದೆ ಎಂದು ಅವರು ಹೇಳಿದರು.

ರಾಜ್ಯ ಒಕ್ಕೂಟದ ಗೌರವ ಸಲಹೆಗಾರ ಮದನ್ ಕುಮಾರ್ ಉಪ್ಪುಂದ ಮಾತನಾಡಿ, ಬೆಳಕು ಬಳಸಿ ಮೀನುಗಾರಿಕೆಯಿಂದ ಮೀನುಗಳ ಸಂತತಿಯ ವಿನಾಶಕ್ಕೆ ಕಾರಣವಾಗುತ್ತದೆ ಎಂದು ಲೈಟ್ ಫಿಶಿಂಗ್‌ಗೆ ನಿಷೇಧಿಸಿ ನ್ಯಾಯಾ ಲಯ ಆದೇಶ ನೀಡಿದೆ. ಮೀನುಗಾರಿಕೆ ಸಚಿವರು ಸದನದಲ್ಲಿ ನಿಷೇಧ ಇದೆ ಎಂದು ಹೇಳಿ ಉತ್ತರ ನೀಡಿದ್ದಾರೆ. ಆದರೆ ಹೊರಗಡೆ ವಿರುದ್ಧವಾಗಿ ಹೇಳಿಕೆ ನೀಡುವ ಮೂಲಕ ನಾಡದೋಣಿ ಮೀನುಗಾರರಿಗೆ ಅನ್ಯಾಯ ಉಂಟು ಮಾಡುತ್ತಿದ್ದಾರೆ ಇದರಿಂದ ಮೀನುಗಾರರ ಬದುಕು ಬೀದಿಗೆ ಬರುತ್ತದೆ. ಅವೈಜ್ಞಾನಿಕ ಮೀನುಗಾರಿಕೆ ನಡೆಸುವುದು ನಿಲ್ಲುವರೆಗೂ ಹೋರಾಟ ಮುಂದುವರಿಸುತ್ತೇವೆ ಎಂದರು.

ಸುದ್ದಿಗೋಷ್ಟಿಯಲ್ಲಿ ರಾಜ್ಯ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಯಶವಂತ ಖಾರ್ವಿ, ರಾಜ್ಯ ಒಕ್ಕೂಟದ ಉಪಾಧ್ಯಕ್ಷ ನಾಗೇಶ ಖಾರ್ವಿ, ಸದಸ್ಯರಾದ ರಾಮ ಖಾರ್ವಿ, ಚಂದ್ರ ಖಾರ್ವಿ ಉಪಸ್ಥಿತರಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago