ಬೈಂದೂರು : ನಿರುದ್ಯೋಗದ ಕಾರಣ ಮನನೊಂದ ಯುವತಿ ಆತ್ಮಹತ್ಯೆಗೆ ಶರಣು – Vishwanews24

Featured, ಉಡುಪಿ

ಬೈಂದೂರು : ನಿರುದ್ಯೋಗದ ಕಾರಣ ಮನನೊಂದ ಯುವತಿ ಆತ್ಮಹತ್ಯೆಗೆ ಶರಣು

ಬೈಂದೂರು: ನಿರುದ್ಯೋಗದ ಕಾರಣದಿಂದ ಮನನೊಂದ ಯುವತಿ ಡೆತ್‌ ನೋಟ್‌ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಕಾಲ್ತೊಡು ಗ್ರಾಮದ ಸಿಗೇಅಡಿ ನಿವಾಸಿ ಪ್ರಮೋದಾ ಶೆಟ್ಟಿ ಅವರ ಪುತ್ರಿ ಗೌತಮಿ (22) ಆತ್ಮಹತ್ಯೆ ಮಾಡಿಕೊಂಡವರು. ಎಂ.ಕಾಂ. ಪದವಿ ಪಡೆದಿದ್ದ ಗೌತಮಿಯು ಇತ್ತೀಚೆಗೆ ಬ್ಯಾಂಕ್‌ ಪರೀಕ್ಷೆ ಮತ್ತು ಕಂಪೆನಿಯಲ್ಲಿ ಉದ್ಯೋಗ ಪಡೆಯಲು ಪರೀಕ್ಷೆಗಳನ್ನು ಬರೆದರೂ ಕೂಡ ಆಕೆಗೆ ಉದ್ಯೋಗ ಸಿಗಲ್ಲಿಲ್ಲ ಹೀಗಾಗಿ ಯುವತಿ ಮನನೊಂದು ಮನೆಯ ಮಹಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ನೇಣಿಗೆ ಶರಣಾಗಿದ್ದ ಗೌತಮಿ ಅವರನ್ನು ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದಾರೆ. ಆದರೆ ವೈದ್ಯರು ಆಕೆ ಮೃತಪಟ್ಟಿರುವುದಾಗಿ ಹೇಳಿದ್ದಾರೆ.ಈ ಬಗ್ಗೆ ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಿಂಗಳೆ ಪ್ರತಿಷ್ಠಾನ : ಜಿಲ್ಲೆಯ ಐವರು ಶಾಸಕರೊಂದಿಗೆ ನನ್ನ ಕ್ಷೇತ್ರ – ನನ್ನ ಕನಸು ಒಂದು ಸಂವಾದ : vishwanews24

Leave a Reply