Featured

ಬೈಂದೂರು: ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಆಸ್ತಿ ವಿವರ – Vishwanews24

ಬೈಂದೂರು: ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಆಸ್ತಿ ವಿವರ

ಉಡುಪಿ: ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಟಿಕೇಟ್ ಪಡೆದು ಇಂದು ನಾಮಪತ್ರ ಸಲ್ಲಿಸಿರುವ ಬೈಂದೂರು ತಾಲೂಕು ಬಿಜೂರು ನಿವಾಸಿ ಗುರುರಾಜ್ ಶೆಟ್ಟಿ ಗಂಟಿಹೊಳೆ (42)ಒಟ್ಟು ಆದಾಯ 7.63 ಕೋಟಿ ರೂ. ಆಗಿದ್ದರೆ, ಪತ್ನಿ ಅನುರಾಧ ಶೆಟ್ಟಿ ಅವರ ಆದಾಯ 2.12 ಕೋಟಿ ರೂ.ಎಂದು ನಾಮಪತ್ರದೊಂದಿಗೆ ಸಲ್ಲಿಸಿರುವ ಅಫಿದವತ್‌ನಲ್ಲಿ ತಿಳಿಸಲಾಗಿದೆ

ಗುರುರಾಜ್ ಅವರ ಬಳಿ 1,76,844 ರೂ. ಚರಾಸ್ಥಿ ಇದ್ದರೆ, ಸ್ಥಿರಾಸ್ಥಿಯ ಮೌಲ್ಯ 7,61,40,000ರೂ. ಆಗಿದೆ. ಇದರಲ್ಲಿ ಪಿತ್ರಾರ್ಜಿತ ಆಸ್ತಿಯ ಮೌಲ್ಯ 32,70,000 ರೂ. ಆಗಿದ್ದರೆ, ಸ್ವಯಾರ್ಜಿತ ಆಸ್ತಿ ಮೌಲ್ಯ 7,28,70,00ರೂ. ಎಂದು ತಿಳಿಸಲಾಗಿದೆ.

ಗುರುರಾಜರ ಪತ್ನಿ ಅನುರಾಧ ಅವರಲ್ಲಿ 18,74,166 ರೂ. ಚರಾಸ್ಥಿ ಇದ್ದರೆ, ಸ್ಥಿರಾಸ್ಥಿಯ ಮೌಲ್ಯ 1,93,50,000 ರೂ. ಆಗಿದೆ. ಅವರಲ್ಲಿ 8.65 ಲಕ್ಷ ರೂ. ಮೌಲ್ಯದ 346ಗ್ರಾಂ ಚಿನ್ನಾಭರಣಗಳಿವೆ. ಇಬ್ಬರ ಕೈಯಲ್ಲೂ 35,000 ಹಾಗೂ 70,000ರೂ.ನಗದು ಹಣವಿದೆ.

ಗುರುರಾಜ್ ಅವರು ವೈಯಕ್ತಿಕವಾಗಿ 1.64 ಕೋಟಿ ರೂ. ಸಾಲವನ್ನು ಹೊಂದಿದ್ದರೆ, 45ಶೇ. ಶೇರ್‌ನ್ನು ಹೊಂದಿರುವ ಶ್ರೀ ಕ್ಯಾಶ್ಯ ಫರ್ಮ್‌ನಲ್ಲಿ 9,10,63,000 ಸಾಲವನ್ನು ಹೊಂದಿದ್ದಾರೆ ಎಂದು ಅಫಿದವತ್‌ನಲ್ಲಿ ತಿಳಿಸಲಾಗಿದೆ.

ಗುರುರಾಜ್ ವಿರುದ್ಧ ಯಾವುದೇ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿಲ್ಲ. ಆದರೆ 2018ರಲ್ಲಿ ಆರು ಲಕ್ಷ ರೂ. ಮೊತ್ತದ ಚೆಕ್‌ಬೌನ್ಸ್ ಕೇಸಿನಲ್ಲಿ ಕುಂದಾಪುರ ನ್ಯಾಯಾಲಯ ಅವರಿಗೆ ಆರು ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿದ್ದು, ಇದಕ್ಕೆ 2022ರಲ್ಲಿ ಕುಂದಾಪುರ ಜೆಎಂಎಫ್‌ಸಿ ನ್ಯಾಯಾಲಯ ದಿಂದ ತಡೆಯಾಜ್ಞೆ ಪಡೆಯಲಾಗಿದೆ. ಇದರ ವಿಚಾರಣೆ ಮೇ ತಿಂಗಳಲ್ಲಿ ನಡೆಯಲಿದೆ ಎಂದು ಅಫಿದವತ್‌ನಲ್ಲಿ ಹೇಳಲಾಗಿದೆ.

Vishwa News 24

Recent Posts

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

50 minutes ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

59 minutes ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 hours ago

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

2 hours ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

2 hours ago