Featured

ಬೈಂದೂರು ಬಿಜೆಪಿ ಮುಖಂಡ ದೀಪಕ್ ಕುಮಾರ್ ಶೆಟ್ಟಿ ಪಕ್ಷದಿಂದ ಉಚ್ಚಾಟನೆ – vishwanews24

ಬೈಂದೂರು ಬಿಜೆಪಿ ಮುಖಂಡ ದೀಪಕ್ ಕುಮಾರ್ ಶೆಟ್ಟಿ ಪಕ್ಷದಿಂದ ಉಚ್ಚಾಟನೆ

ಬೈಂದೂರು: ಬೈಂದೂರು ಕ್ಷೇತ್ರದ ಬಿಜೆಪಿ ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಬೈಂದೂರು ಬಿಜೆಪಿ ಮಂಡಲದ ಮಾಜಿ ಅಧ್ಯಕ್ಷ ಹಾಗೂ ರೈತ ಪರ ಹೋರಾಟಗಾರ ದೀಪಕ್ ಕುಮಾರ್ ಶೆಟ್ಟಿಯವರನ್ನು ಪಕ್ಷದಿಂದ 6 ವರ್ಷದ ಅವಧಿಗೆ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.ಈ ನಿಲುವು ಬಿಜೆಪಿ ಕಾರ್ಯಕರ್ತ ವಲಯದಲ್ಲಿ ಬಾರಿ ಸಂಚಲನ ಉಂಟು ಮಾಡಿದ್ದು ದೀಪಕ್ ಕುಮಾ‌ರ್ ಶೆಟ್ಟಿ ಅಭಿಮಾನಿಗಳಿಗೆ ಬಾರಿ ಅಸಾಮಾಧಾನ ಉಂಟಾಗಿದೆ.

ದೀಪಕ್‌ ಕುಮಾ‌ರ್ ಶೆಟ್ಟಿ ಉಚ್ಚಾಟನೆಗೆ ಪ್ರಮುಖ ಕಾರಣ ಬೈಂದೂರು ಶಾಸಕರು ಮತ್ತು ಇವರ ನಡುವಿನ ಆಂತರಿಕ ಸಮರವಾಗಿದೆ ಎನ್ನುವ ಅಭಿಪ್ರಾಯ ಕೇಳಿ ಬಂದಿದೆ. ಪಕ್ಷದ ಅಧೀಕೃತ ವೇದಿಕೆಯನ್ನು ಬಿಟ್ಟು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗುವ ಮೂಲಕ ಪಕ್ಷದ ಘನತೆ, ಶಿಸ್ತಿಗೆ ಹಾನಿಯಾಗಿರುವ ಕಾರಣ ನೀಡಿ ಉಚ್ಚಾಟನೆ ಮಾಡಲಾಗಿದೆ. ಇದಕ್ಕೆ ಬಹುಮುಖ್ಯ ಕಾರಣ ದೀಪಕ್ ಕುಮಾರ್ ಶೆಟ್ಟಿಯವರು ಗ್ರಾಮೀಣ ಭಾಗದ ನ್ಯಾಯ ಓದಗಿಸಲು ಹೋರಾಟ ಆರಂಭಿಸಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿರುವುದು ಶಾಸಕರಿಗೆ ನುಂಗಲಾರದ ಬಿಸಿ ತುಪ್ಪವಾಗಿತ್ತು. ಮಾತ್ರವಲ್ಲದೆ ಕಳೆದ ಒಂದು ವರ್ಷದಿಂದ ಶಾಸಕರು ಮತ್ತು ದೀಪಕ್ ಕುಮಾರ್ ಶೆಟ್ಟಿ ನಡುವಿನತೆರೆಮರೆಯ ಸೆಣಸಾಟ ಗುಟ್ಟಾಗಿ ಉಳಿದಿರಲಿಲ್ಲ. ಮರಳು ದಂಧೆಯಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವಿನ ಬಳಿ ಒಪ್ಪಂದದ ಹೊಂದಾಣಿಕೆ ಕುರಿತು ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿದ್ದರು.ಹೀಗಾಗಿ ರೈತ ಹೋರಾಟಕ್ಕೆ ಹಿನ್ನೆಡೆ ಮಾಡಬೇಕೆನ್ನುವ ಮೂಲ ಉದ್ದೇಶದಿಂದ ಇಷ್ಟೆಲ್ಲಾ ಪ್ರಯತ್ನ ನಡೆದಿದೆ ಎನ್ನುವುದು ದೀಪಕ್ ಕುಮಾರ್ ಶೆಟ್ಟಿ ಬೆಂಬಲಿಗರ ಅಭಿಪ್ರಾಯವಾಗಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago