ಬೈಂದೂರು: ಬೈಂದೂರು ಕ್ಷೇತ್ರದ ಬಿಜೆಪಿ ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಬೈಂದೂರು ಬಿಜೆಪಿ ಮಂಡಲದ ಮಾಜಿ ಅಧ್ಯಕ್ಷ ಹಾಗೂ ರೈತ ಪರ ಹೋರಾಟಗಾರ ದೀಪಕ್ ಕುಮಾರ್ ಶೆಟ್ಟಿಯವರನ್ನು ಪಕ್ಷದಿಂದ 6 ವರ್ಷದ ಅವಧಿಗೆ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.ಈ ನಿಲುವು ಬಿಜೆಪಿ ಕಾರ್ಯಕರ್ತ ವಲಯದಲ್ಲಿ ಬಾರಿ ಸಂಚಲನ ಉಂಟು ಮಾಡಿದ್ದು ದೀಪಕ್ ಕುಮಾರ್ ಶೆಟ್ಟಿ ಅಭಿಮಾನಿಗಳಿಗೆ ಬಾರಿ ಅಸಾಮಾಧಾನ ಉಂಟಾಗಿದೆ.
ದೀಪಕ್ ಕುಮಾರ್ ಶೆಟ್ಟಿ ಉಚ್ಚಾಟನೆಗೆ ಪ್ರಮುಖ ಕಾರಣ ಬೈಂದೂರು ಶಾಸಕರು ಮತ್ತು ಇವರ ನಡುವಿನ ಆಂತರಿಕ ಸಮರವಾಗಿದೆ ಎನ್ನುವ ಅಭಿಪ್ರಾಯ ಕೇಳಿ ಬಂದಿದೆ. ಪಕ್ಷದ ಅಧೀಕೃತ ವೇದಿಕೆಯನ್ನು ಬಿಟ್ಟು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗುವ ಮೂಲಕ ಪಕ್ಷದ ಘನತೆ, ಶಿಸ್ತಿಗೆ ಹಾನಿಯಾಗಿರುವ ಕಾರಣ ನೀಡಿ ಉಚ್ಚಾಟನೆ ಮಾಡಲಾಗಿದೆ. ಇದಕ್ಕೆ ಬಹುಮುಖ್ಯ ಕಾರಣ ದೀಪಕ್ ಕುಮಾರ್ ಶೆಟ್ಟಿಯವರು ಗ್ರಾಮೀಣ ಭಾಗದ ನ್ಯಾಯ ಓದಗಿಸಲು ಹೋರಾಟ ಆರಂಭಿಸಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿರುವುದು ಶಾಸಕರಿಗೆ ನುಂಗಲಾರದ ಬಿಸಿ ತುಪ್ಪವಾಗಿತ್ತು. ಮಾತ್ರವಲ್ಲದೆ ಕಳೆದ ಒಂದು ವರ್ಷದಿಂದ ಶಾಸಕರು ಮತ್ತು ದೀಪಕ್ ಕುಮಾರ್ ಶೆಟ್ಟಿ ನಡುವಿನತೆರೆಮರೆಯ ಸೆಣಸಾಟ ಗುಟ್ಟಾಗಿ ಉಳಿದಿರಲಿಲ್ಲ. ಮರಳು ದಂಧೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಬಳಿ ಒಪ್ಪಂದದ ಹೊಂದಾಣಿಕೆ ಕುರಿತು ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿದ್ದರು.ಹೀಗಾಗಿ ರೈತ ಹೋರಾಟಕ್ಕೆ ಹಿನ್ನೆಡೆ ಮಾಡಬೇಕೆನ್ನುವ ಮೂಲ ಉದ್ದೇಶದಿಂದ ಇಷ್ಟೆಲ್ಲಾ ಪ್ರಯತ್ನ ನಡೆದಿದೆ ಎನ್ನುವುದು ದೀಪಕ್ ಕುಮಾರ್ ಶೆಟ್ಟಿ ಬೆಂಬಲಿಗರ ಅಭಿಪ್ರಾಯವಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…