ಬೈಂದೂರು: ”ಪ್ರಧಾನಿ ನರೇಂದ್ರ ಮೋದಿ ಅವರ ಪರಿಕಲ್ಪನೆಗಳಿಗೆ ಅನುಗುಣವಾಗಿ ಪ್ರಸ್ತುತ ಚೀನಾದ ಬದಲಾಗಿ ಮೀನುಗಾರಿಕಾ ದೋಣಿಗಳಿಗೆ ಭಾರತದಲ್ಲಿ ತಯಾರಿಸಿದ ಎಂಜಿನ್‌ಗಳನ್ನು ಬಳಸಲು ನಿರ್ಧರಿಸಲಾಗಿದೆ ಎಂದು ಮೀನುಗಾರಿಕೆ ಸಚಿವ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.
ಕರಾವಳಿ ಸಾಂಪ್ರದಾಯಿಕ ಮೀನುಗಾರರ ಸಹಕಾರ ಸಂಘ ನಾವುಂದ ಶಾಖೆಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯದ ಕರಾವಳಿಯಲ್ಲಿ ಒಟ್ಟು 22,500 ಯಾಂತ್ರಿಕೃತ ಮೀನುಗಾರಿಕೆ ದೋಣಿಗಳು ಕಾರ್ಯನಿರ್ವಹಿಸುತ್ತಿವೆ.ಅವುಗಳಲ್ಲಿ 7,500 ಸಾಂಪ್ರದಾಯಿಕ ದೋಣಿಗಳಾಗಿದ್ದು, ಅವುಗಳಲ್ಲಿ ಒಂಭತ್ತು ದೋಣಿಗಳಿಗೆ ಎಚ್‌ಪಿ ಬೋರ್ಡ್ ಎಂಜಿನ್‌ಗಳನ್ನು ಅಳವಡಿಸಲಾಗಿದೆ. ದೊಡ್ಡ ದೋಣಿಗಳು 350 ಎಚ್‌ಪಿವರೆಗೆ ವಿಭಿನ್ನ ಶ್ರೇಣಿಯ ಎಂಜಿನ್‌ಗಳನ್ನು ಹೊಂದಿವೆ. ಅವುಗಳ ಪೈಕಿ ಶೇ.90ರಷ್ಟು ಬೋಟ್, ಯಂತ್ರೋ ಪಕರಣ ಹಾಗೂ ಎಂಜಿನ್‌ಗಳನ್ನು ವಿದೇಶಿ ಹಾಗೂ ಹೆಚ್ಚಾಗಿ ಚೀನಾ ನಿರ್ಮಿತ ಉಪಕರಣಗಳನ್ನು ಬಳಸಲಾಗುತ್ತಿದೆ. ಮೀನುಗಾರರು ಸ್ಥಳೀಯ ಉತ್ಪನ್ನಗಳನ್ನು ಬಳಸಲು ಒಲವು ತೋರುತ್ತಿದ್ದಾರೆ” ಎಂದಿದ್ದಾರೆ.
“ಇವುಗಳನ್ನು ಗಮನಿಸಿ ಸ್ವದೇಶಿ ನಿರ್ಮಿತ ಯಂತ್ರೋಪಕರಣ ಹಾಗೂ ಎಂಜಿನ್ ಬಳಸಿಕೊಳ್ಳಲು ಉದ್ದೇಶಿಸಲಾಗಿದೆ” ಎಂದು ತಿಳಿಸಿದ್ದಾರೆ.
“ಸ್ವದೇಶಿ ನಿರ್ಮಿತ ಯಂತ್ರೋಪಕರಣಗಳನ್ನು ಬಳಸುವ ವಿಚಾರವಾಗಿ ಕಂಪೆನಿಯವರಿಗೆ ಸೂಚನೆ ನೀಡಲಾಗಿದೆ. ಗುಣಮಟ್ಟ ಹಾಗೂ ದರ ಸೂಕ್ತವೆಂದೆನಿಸಿದರೆ ಇದಕ್ಕೆ ಒಪ್ಪಿಕೊಳ್ಳಲು ಮೀನುಗಾರರು ಸಿದ್ದರಿದ್ದಾರೆ ಎನ್ನುವ ಬಗ್ಗೆ ತಿಳಿಸಿದ್ದಾರೆ. ಮೀನುಗಾರಿಕೆ ನಡೆಸುವ ಬೋಟ್‌ಗಳಿಗೆ ಡೀಸೆಲ್ ಬಳಕೆಯ ಬದಲಾಗಿ ಗ್ಯಾಸ್ ಬಳಕೆಗೆ ಹೆಚ್ಚು ಒತ್ತು ನೀಡಲು ತಿಳಿಸಲಾಗಿದೆ” ಎಂದಿದ್ದಾರೆ.
http://ಸಚಿವ ಸ್ಥಾನ ನೀಡಿದರೆ ಉತ್ತಮವಾಗಿ ಕೆಲಸ ಮಾಡುತ್ತೇನೆ : ಎನ್. ಮಹೇಶ್ -Vishwanews24
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…