ಬೈಂದೂರು : ಕುಟುಂಬದವರೊಂದಿಗೆ ಪ್ರವಾಸಕ್ಕೆ ಬಂದಿದ್ದ ಹಾವೇರಿ ಮೂಲದ 16 ವರ್ಷದ ವಿದ್ಯಾರ್ಥಿಯೊಬ್ಬ, ಸೋಮವಾರ ಬೆಳಗ್ಗೆ ಶಿರೂರಿನ ಸಂಕದಗುಂಡಿ ನದಿಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಸಂಭವಿಸಿದೆ.
ಹಾವೇರಿ ಸಮೀಪದ ಕೃಷಿ ನಗರದ ನಿವಾಸಿ ಆಯುಷ್ (16) ಮೃತಪಟ್ಟ ದುರ್ದೈವಿ.
ಹಾವೇರಿಯಿಂದ ಒಟ್ಟು ಏಳು ಜನರ ತಂಡ ಮುರುಡೇಶ್ವರ ಮತ್ತು ಕನ್ಯಾಕುಮಾರಿ ಪ್ರವಾಸ ಕೈಗೊಂಡಿತ್ತು. ಮುರುಡೇಶ್ವರ ದರ್ಶನ ಮುಗಿಸಿ ವಾಪಸಾಗುತ್ತಿದ್ದಾಗ, ಅವರು ವಿಶ್ರಾಂತಿ ಪಡೆಯಲು ಶಿರೂರಿನ ಸಂಕದಗುಂಡಿ ನದಿಯ ಬಳಿ ತಂಗಿದ್ದರು. ಕುಟುಂಬದ ಸದಸ್ಯರು ಮಧ್ಯಾಹ್ನದ ಅಡುಗೆ ತಯಾರಿಯಲ್ಲಿ ನಿರತರಾಗಿದ್ದಾಗ, ಇಬ್ಬರು ಮಕ್ಕಳು ಸ್ನಾನ ಮಾಡಲು ಪಕ್ಕದ ನದಿಗೆ ಇಳಿದಿದ್ದಾರೆ.
ಈ ವೇಳೆ ನೀರಿನ ಆಳದ ಅರಿವಿಲ್ಲದೆ ಆಯುಷ್ ನದಿಯ ಆಳವಾದ ಭಾಗಕ್ಕೆ ಈಜಲು ಹೋಗಿ ಮುಳುಗಿದ್ದಾನೆ. ಅವನೊಂದಿಗಿದ್ದ ಸಹೋದರ ತಕ್ಷಣವೇ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಆದರೆ ಆತನನ್ನು ರಕ್ಷಿಸಲು ಸಾಧ್ಯವಾಗಲಿಲ್ಲ ಎಂದು ತಿಳಿದುಬಂದಿದೆ.
ನದಿ ತೀರಾ ಆಳವಾಗಿದ್ದರಿಂದ, ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಸ್ಥಳೀಯ ನಿವಾಸಿಗಳು ಜಂಟಿಯಾಗಿ ಸುಮಾರು ಒಂದು ಗಂಟೆಗಳ ಕಾಲ ಮೃತದೇಹಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಸುದೀರ್ಘ ಕಾರ್ಯಾಚರಣೆಯ ಬಳಿಕ ಕೊನೆಗೂ ಬಾಲಕನ ಮೃತದೇಹವನ್ನು ನೀರಿನಿಂದ ಹೊರತೆಗೆಯಲಾಗಿದೆ.
ಘಟನಾ ಸ್ಥಳಕ್ಕೆ ಬೈಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…