ಉಡುಪಿ : ಬೈಂದೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸತ್ತ ಹಸುಗಳನ್ನು ಟೋಯಿಂಗ್ ವಾಹನಕ್ಕೆ ಕಟ್ಟಿ ಎಳೆದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಂದೂರು ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 195/2021 ಕಲಂ: 429 ಐಪಿಸಿ ಮತ್ತು 11(1) (ಡಿ) ಪ್ರಾಣಿಹಿಂಸೆ ನಿಷೇಧ ಕಾಯಿದೆಯಂತೆ ಪ್ರಕರಣ ದಾಖಲಾಗಿದೆ.
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸತ್ತು ಬಿದ್ದಿದ್ದ ಎರಡು ಹಸುಗಳನ್ನು ವಾಹನಕ್ಕೆ ಹಾಕಿ ಸಾಗಿಸುವ ಬದಲು ಟೋಯಿಂಗ್ ಗಾಡಿಗೆ ಕಟ್ಟಿ ಎಳೆದೊಯ್ದಿದ್ದಾರೆ. ಸತ್ತ ಹಸುಗಳನ್ನು ಟೋಯಿಂಗ್ ವಾಹನದ ಮೂಲಕ ಎಳೆದೊಯ್ಯುವ ವಿಡಿಯೋ ವೈರಲ್ ಆಗಿದ್ದು, ಈ ಬಗ್ಗೆ ಬೈಂದೂರು ಹಿಂದೂ ಜಾಗರಣ ವೇದಿಕೆ ಐಆರ್‌ಬಿ ಕ್ರಮದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, “ಹಸುಗಳನ್ನು ಈ ರೀತಿಯಾಗಿ ಬಿದಿಬೀದಿಗಳಲ್ಲಿ ಎಳೆದುಕೊಂಡು ಹೋಗುವ ಹೇಯ ಕೃತ್ಯಕ್ಕೆ ನಾಚಿಕೆಯಾಗಬೇಕು. ನಿಮಗೆ ಗೋವಿನ ಶಾಪ ತಟ್ಟದೆ ಇರುವುದಿಲ್ಲ,ನಿಮ್ಮ ಬೇಜಾವಾಬ್ದಾರಿತನದ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಇದರ ವಿರುದ್ದ ಹಿಂದೂ ಸಂಘಟನೆ ಪ್ರತಿಭಟನೆ ನಡೆಸಲಿದೆ” ಎಂದು ಹೇಳಿತ್ತು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…