ಬೈಂದೂರು: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಪಘಾತದಲ್ಲಿ ಸತ್ತು ಹೋಗಿದ್ದ ದನವೊಂದನ್ನು ಐಆರ್ ಬಿ ಸಂಸ್ಥೆಯ ಸಿಬ್ಬಂದಿಗಳು ವಾಹನಕ್ಕೆ ಕಟ್ಟಿ ರಸ್ತೆ ಮೇಲೆ ಎಳೆದೊಯ್ಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ವಾಹನಕ್ಕೆ ಡಿಕ್ಕಿಯಾಗಿ ಎರಡು ಹಸುಗಳು ಸತ್ತು ಬಿದ್ದಿದ್ದು, ವಾಹನಕ್ಕೆ ಹಾಕಿ ಹಸುವಿನ ಶವ ಸಾಗಿಸುವ ಬದಲು ಹಸುವನ್ನ ವಾಹನಕ್ಕೆ ಕಟ್ಟಿ ಎಳೆದೊಯ್ದು ಅವಾಂತರ ಮಾಡುವ ಮೂಲಕ ಐಆರ್ ಬಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.
ಸತ್ತ ಹಸುಗಳನ್ನು ಟೊಯಿಂಗ್ ವಾಹನದ ಮೂಲಕ ಎಳೆದೊಯ್ಯುವ ವಿಡಿಯೋ ವೈರಲ್ ಆಗುತ್ತಿದ್ದಂತೆ ಬೈಂದೂರು ಹಿಂದೂ ಜಾಗರಣ ವೇದಿಕೆ ಐಆರ್‌ಬಿ ಕ್ರಮದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, ಹಸುಗಳನ್ನು ಈ ರೀತಿಯಾಗಿ ಬಿದಿಬೀದಿಗಳಲ್ಲಿ ಎಳೆದುಕೊಂಡು ಹೋಗುವ ಹೇಯ ಕೃತ್ಯಕ್ಕೆ ನಾಚಿಕೆಯಾಗಬೇಕು. ನಿಮಗೆ ಗೋವಿನ ಶಾಪ ತಟ್ಟದೆ ಇರುವುದಿಲ್ಲ ಎಂದಿದೆ. ನಿಮ್ಮ ಬೇಜಾವಾಬ್ದಾರಿತನದ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಇದರ ವಿರುದ್ದ ಹಿಂದೂ ಸಂಘಟನೆ ಪ್ರತಿಭಟನೆ ನಡೆಸಲಿದೆ ಎಂದು ಹೇಳಿದೆ.
ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…
ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…
ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…
ಕರ್ನಾಟಕದಲ್ಲಿ ಯಾವುದೇ ರೀತಿಯ ಹಿಂಸೆಗೆ ಅವಕಾಶ ನೀಡುವುದಿಲ್ಲ : ಬಿ.ಕೆ. ಹರಿಪ್ರಸಾದ್ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು…
ಉಡುಪಿ: ನಿರೀಕ್ಷಿತ ಮುಂಗಾರು ಮಳೆಯಿಲ್ಲದೆ ಕಡಲಿಗೆ ಇಳಿಯದ ನಾಡದೋಣಿಗಳು ಉಡುಪಿ: ಕರಾವಳಿಯಲ್ಲಿ ನಿರೀಕ್ಷಿತ ಮುಂಗಾರು ಮಳೆಯಾಗದ ಕಾರಣ ಈ ಋತುವಿನಲ್ಲಿ…