ಬೈಂದೂರು: ಸಮುದ್ರದ ಭಾರೀ ಅಲೆಗೆ ಸಿಲುಕಿದ ಮೀನುಗಾರಿಕಾ ದೋಣಿಯೊಂದು ಮಗುಚಿ ಬಿದ್ದಿದ್ದು, ಇದರಲ್ಲಿದ್ದ 9 ಮೀನುಗಾರರು ಲೈಫ್ ಜಾಕೇಟ್ ಧರಿಸಿದ್ದರಿಂದ ಅಪಾಯದಿಂದ ಪಾರಾಗಿ ದಡ ಸೇರಿದ ಘಟನೆ ಬೈಂದೂರು ತಾಲೂಕಿನ ಉಪ್ಪುಂದ ಮಡಿಕಲ್ ಎಂಬಲ್ಲಿ ರವಿವಾರ ಬೆಳಗ್ಗೆ ನಡೆದಿದೆ.
ಉಪ್ಪುಂದ ಮೂಲದ ಚಂದ್ರ ಖಾರ್ವಿ, ಪ್ರಮೋದ್, ಪ್ರಜ್ವಲ್, ಗೌತಮ್, ಭಾಸ್ಕರ, ಯೋಗಿರಾಜ್, ಗೋವಿಂದ, ಬಾಬು ಖಾರ್ವಿ, ದೀಪಕ್ ಅಪಾಯ ದಿಂದ ಪಾರಾದ ಮೀನುಗಾರರು. ಇವರೆಲ್ಲ ಬೆಳಗ್ಗೆ 11 ಗಂಟೆ ಸುಮಾರಿಗೆ ಉಪ್ಪುಂದ ಶಾರದಾ ಖಾರ್ವಿ ಎಂಬವರ ಮಾಲೀಕತ್ವದ ಶಿವಪ್ರಸಾದ್ ದೋಣಿಯು ಮೀನುಗಾರಿಕೆಗೆ ತೆರಳಿದ್ದರು. ಮಡಿಕಲ್ ಎಲ್.ಪಿ. ಸಮೀಪ ಸಮುದ್ರದ ಅಲೆಗಳ ರಭಸಕ್ಕೆ ದೋಣಿ ಮಗುಚಿ ಬಿತ್ತೆನ್ನಲಾಗಿದೆ.
ಇದರಿಂದ ದೋಣಿಯಲ್ಲಿದ್ದ ಎಲ್ಲ 9 ಮಂದಿ ಮೀನುಗಾರರು ಕೂಡ ನೀರಿಗೆ ಬಿದ್ದರು. ಎಲ್ಲ ಮೀನುಗಾರರು ಲೈಪ್ ಜಾಕೆಟ್ ಧರಿಸಿದ್ದರಿಂದ ಸಮುದ್ರದಲ್ಲಿ ಈಜುತ್ತಿದ್ದರು. ಕೂಡಲೇ ದಡದಲ್ಲಿದ್ದ ಇತರೆ ಮೀನುಗಾರರು ರೋಪ್ ನೀಡಿ ಅವರನ್ನು ಸುರಕ್ಷಿತವಾಗಿ ದಡ ಸೇರಿದರು. ದೋಣಿ ಮಗುಚಿದ ರಭಸಕ್ಕೆ ದೋಣಿಗೆ ಹಾನಿಯಾಗಿದ್ದಲ್ಲದೆ ಎಂಜಿನ್, ದೋಣಿಯಲ್ಲಿದ್ದ ಬಲೆ ಹಾಗೂ ಲಕ್ಷಾಂತರ ರೂ. ಮೌಲ್ಯದ ಸಲಕರಣೆಗಳು ನಷ್ಟವಾಗಿದೆ ಎಂದು ತಿಳಿದು ಬಂದಿದೆ.
ಕರಾವಳಿ ಕಾವಲು ಪೊಲೀಸ್ ಠಾಣೆಯ ಉಪನಿರೀಕ್ಷಕ ಸುಬ್ರಹ್ಮಣ್ಯ ಹಾಗೂ ಸಿಬ್ಬಂದಿ ರಾಘವೇಂದ್ರ ದೇವಾಡಿಗ, ಈಶ್ವರ, ನಾಗೇಶ್, ಸತೀಶ್, ರಮೇಶ್, ವಿಜಯ, ಕೆಎನ್‌ಡಿ ಸಿಬ್ಬಂದಿಗಳಾದ ಗಿರೀಶ್, ಜಯರಾಜ್ ಸ್ಥಳಕ್ಕೆ ಭೇಟಿ ನೀಡಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…