Featured

ಬೈಂದೂರು: ಸಮುದ್ರದ ಅಲೆಗಳ ಅಬ್ಬರಕ್ಕೆ ಮಗುಚಿದ ದೋಣಿ ; ಜೀವರಕ್ಷಿಸಿದ ಲೈಫ್ ಜಾಕೇಟ್ – vishwanews24

ಬೈಂದೂರು: ಸಮುದ್ರದ ಅಲೆಗಳ ಅಬ್ಬರಕ್ಕೆ ಮಗುಚಿದ ದೋಣಿ ;

ಜೀವರಕ್ಷಿಸಿದ ಲೈಫ್ ಜಾಕೇಟ್

9 ಮೀನುಗಾರರು ಅಪಾಯದಿಂದ ಪಾರು

ಬೈಂದೂರು:  ಸಮುದ್ರದ ಭಾರೀ ಅಲೆಗೆ ಸಿಲುಕಿದ ಮೀನುಗಾರಿಕಾ ದೋಣಿಯೊಂದು ಮಗುಚಿ ಬಿದ್ದಿದ್ದು, ಇದರಲ್ಲಿದ್ದ 9 ಮೀನುಗಾರರು ಲೈಫ್ ಜಾಕೇಟ್ ಧರಿಸಿದ್ದರಿಂದ ಅಪಾಯದಿಂದ ಪಾರಾಗಿ ದಡ ಸೇರಿದ ಘಟನೆ ಬೈಂದೂರು ತಾಲೂಕಿನ ಉಪ್ಪುಂದ ಮಡಿಕಲ್ ಎಂಬಲ್ಲಿ ರವಿವಾರ ಬೆಳಗ್ಗೆ ನಡೆದಿದೆ.

ಉಪ್ಪುಂದ ಮೂಲದ ಚಂದ್ರ ಖಾರ್ವಿ, ಪ್ರಮೋದ್, ಪ್ರಜ್ವಲ್, ಗೌತಮ್, ಭಾಸ್ಕರ, ಯೋಗಿರಾಜ್, ಗೋವಿಂದ, ಬಾಬು ಖಾರ್ವಿ, ದೀಪಕ್ ಅಪಾಯ ದಿಂದ ಪಾರಾದ ಮೀನುಗಾರರು. ಇವರೆಲ್ಲ ಬೆಳಗ್ಗೆ 11 ಗಂಟೆ ಸುಮಾರಿಗೆ ಉಪ್ಪುಂದ ಶಾರದಾ ಖಾರ್ವಿ ಎಂಬವರ ಮಾಲೀಕತ್ವದ ಶಿವಪ್ರಸಾದ್ ದೋಣಿಯು ಮೀನುಗಾರಿಕೆಗೆ ತೆರಳಿದ್ದರು. ಮಡಿಕಲ್ ಎಲ್.ಪಿ. ಸಮೀಪ ಸಮುದ್ರದ ಅಲೆಗಳ ರಭಸಕ್ಕೆ ದೋಣಿ ಮಗುಚಿ ಬಿತ್ತೆನ್ನಲಾಗಿದೆ.

ಇದರಿಂದ ದೋಣಿಯಲ್ಲಿದ್ದ ಎಲ್ಲ 9 ಮಂದಿ ಮೀನುಗಾರರು ಕೂಡ ನೀರಿಗೆ ಬಿದ್ದರು. ಎಲ್ಲ ಮೀನುಗಾರರು ಲೈಪ್ ಜಾಕೆಟ್ ಧರಿಸಿದ್ದರಿಂದ ಸಮುದ್ರದಲ್ಲಿ ಈಜುತ್ತಿದ್ದರು. ಕೂಡಲೇ ದಡದಲ್ಲಿದ್ದ ಇತರೆ ಮೀನುಗಾರರು ರೋಪ್ ನೀಡಿ ಅವರನ್ನು ಸುರಕ್ಷಿತವಾಗಿ ದಡ ಸೇರಿದರು. ದೋಣಿ ಮಗುಚಿದ ರಭಸಕ್ಕೆ ದೋಣಿಗೆ ಹಾನಿಯಾಗಿದ್ದಲ್ಲದೆ ಎಂಜಿನ್, ದೋಣಿಯಲ್ಲಿದ್ದ ಬಲೆ ಹಾಗೂ ಲಕ್ಷಾಂತರ ರೂ. ಮೌಲ್ಯದ ಸಲಕರಣೆಗಳು ನಷ್ಟವಾಗಿದೆ ಎಂದು ತಿಳಿದು ಬಂದಿದೆ.

ಕರಾವಳಿ ಕಾವಲು ಪೊಲೀಸ್ ಠಾಣೆಯ ಉಪನಿರೀಕ್ಷಕ ಸುಬ್ರಹ್ಮಣ್ಯ ಹಾಗೂ ಸಿಬ್ಬಂದಿ ರಾಘವೇಂದ್ರ ದೇವಾಡಿಗ, ಈಶ್ವರ, ನಾಗೇಶ್, ಸತೀಶ್, ರಮೇಶ್, ವಿಜಯ, ಕೆಎನ್‌ಡಿ ಸಿಬ್ಬಂದಿಗಳಾದ ಗಿರೀಶ್, ಜಯರಾಜ್ ಸ್ಥಳಕ್ಕೆ ಭೇಟಿ ನೀಡಿದ್ದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

24 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 day ago