ಮಂಗಳೂರು, : ಖಾಸಗಿ ಬಸ್ಸೊಂದು ಉರುಳಿಬಿದ್ದ ಪರಿಣಾಮ ಹಲವರು ಗಾಯಗೊಂಡ ಘಟನೆ ಬೈಕಂಪಾಡಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.
ಕಾಟಿಪಳ್ಳ-ಕೈಕಂಬ ಕಡೆಯಿಂದ ಮಂಗಳೂರಿನತ್ತ ಬರುತ್ತಿದ್ದ ಖಾಸಗಿ ಬಸ್ ಇದಾಗಿದೆ. ಬಸ್ಸಿನಲ್ಲಿದ್ದ 35ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯಗಳಾಗಿವೆ. ಈ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಕಾಟಿಪಳ್ಳ ಕಡೆಯಿಂದ ಮಂಗಳೂರಿನತ್ತ ಬರುತ್ತಿದ್ದ ಬಸ್ ಬೈಕಂಪಾಡಿಯಿಂದ ಜೋಕಟ್ಟೆಗೆ ತೆರಳುವ ತಿರುವಿನ ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿಬಿದ್ದಿದೆ.
ಬೆಳಗ್ಗಿನ ವೇಳೆಯಾಗಿದ್ದುದರಿಂದ ವಿದ್ಯಾರ್ಥಿಗಳು ಸೇರಿದಂತೆ ಬಸ್ ಪ್ರಯಾಣಿಕರಿಂದ ತುಂಬಿ ತುಳುಕುತ್ತಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಘಟನೆಯ ಬಗ್ಗೆ ಮಂಗಳೂರು ಸಂಚಾರ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…