Featured

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ

ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ ದರೋಡೆ ಪ್ರಕರಣ ಸಂಬಂಧ ಮತ್ತೆ ನಾಲ್ವರು ಆರೋಪಿಗಳನ್ನು ಸುರತ್ಕಲ್‌ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಕೇರಳದ ಕಣ್ಣೂರು ಮೂಲದ ಮಿಥುನ್ ಲಾಲ್, ಶ್ರೀರಾಗ್, ಮಡಿಕೇರಿಯ ಉಬೈದ್, ಝಿಯಾದ್ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಪೈಕಿ ಮಿಥುನ್, ಉಬೈದ್ ಮತ್ತು ಝಿಯಾದ್ ಈ ಮೂವರು ನಿರೀಕ್ಷಣಾ ಜಾಮೀನು ಅರ್ಜಿಸಲ್ಲಿಸಲು ತಮ್ಮ ವಕೀಲರೊಂದಿಗೆ ಮಂಗಳೂರು ನ್ಯಾಯಾಲಯಕ್ಕೆ ಬಂದಿದ್ದ ವೇಳೆ ಪೊಲೀಸರು ಬಂಧಿಸಿದ್ದು, ಶ್ರಿರಾಗ್ ತನ್ನ ವಕೀಲರೊಂದಿಗೆ ಪೊಲೀಸರಿಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ.

ಬಂಧಿತರಿಂದ ಕೃತ್ಯಕ್ಕೆ ಬಳಸಿದ್ದ ಒಂದು ಇನ್ನೋವಾ ಮತ್ತು ಒಂದು ಸ್ವಿಫ್ಟ್‌ ಕಾರು, ಕಬ್ಬಿಣದ ರಾಡ್‌, ಅಪಹರಿಸಿದ್ದ ಉದ್ಯಮಿಯ 10ಗ್ರಾಂ ತೂಕದ ಚಿನ್ನದ ಉಂಗುರ ಮೊದಲಾದವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಕೃತ್ಯದ ಪ್ರಮುಖ ಆರೋಪಿ ಶಿಜಿನ್ ಗಂಗಾಧರನ್ ಸಹಿತ ಕೃತ್ಯದಲ್ಲಿಭಾಗಿಯಾಗಿದ್ದ 13 ಮಂದಿ ಆರೋಪಿಗಳ ಗುರುತನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಈ ಪೈಕಿ 7ಮಂದಿಯನ್ನು ಬಂಧಿಸಿರುವ ಪೊಲೀಸರು ಉಳಿದ ಆರೋಪಿಗಳ ಬಂಧನಕ್ಕಾಗಿ ಕಾರ್ಯಾಚಾರಣೆ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

15 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

17 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

17 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

17 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

18 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

18 hours ago