ದೊಡ್ಡಬಳ್ಳಾಪುರ: ಬೈಕ್‌ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮೂರು ವರ್ಷದ ಮಗು ಸ್ಥಳದಲ್ಲಿಯೇ ಮೃತ ಪಟ್ಟಿದೆ. ಧನ್ವಿತ್ (3) ಮೃತ ದುರ್ದೈವಿ. ದೊಡ್ಡಬಳ್ಳಾಪುರ ತಾಲೂಕಿನ ಕೆಸ್ತೂರು ಗೇಟ್ ಬಳಿ ಈ ಅಪಘಾತ ಸಂಭವಿಸಿದೆ. ಬೈಕ್‌ನಲ್ಲಿದ್ದ ಆಂಜನೇಯ, ಮಮತ ಎಂಬುವವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ದೊಡ್ಡಬಳ್ಳಾಪುರ ತಾಲೂಕಿನ ತಿಪ್ಪಾಪುರ ಮೂಲದ ಆಂಜನೇಯ ಕುಟುಂಬ ಸಮೇತ ಬೈಕ್‌ನಲ್ಲಿ ದೇವಾಲಯಕ್ಕೆ ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಲಾರಿಯು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್‌ನಲ್ಲಿದ್ದವರು ಹಾರಿ ರಸ್ತೆ ಬದಿಗೆ ಬಿದ್ದಿದ್ದಾರೆ.
ಬಾಲಕ ಧನ್ವಿತ್ ಮೇಲೆ ಲಾರಿ ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನೂ ಅಪಘಾತ ಮಾಡಿ ಲಾರಿಯನ್ನು ಒಂದು ಕಿಲೋ ಮೀಟರ್ ದೂರದಲ್ಲಿ ನಿಲ್ಲಿಸಿ, ಸ್ಥಳದಿಂದ ಚಾಲಕ ಪರಾರಿ ಆಗಿದ್ದಾನೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಚಾಲಕನಿಗಾಗಿ ಹುಡುಕಾಟ ನಡೆದಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…