Featured

ಬೈಕ್‌ಗೆ ಲಾರಿ ಡಿಕ್ಕಿ :  3 ವರ್ಷದ ಮಗು ಸ್ಥಳದಲ್ಲಿಯೇ ಸಾವು , ತಂದೆ-ತಾಯಿಗೆ ಗಂಭೀರ ಗಾಯ ; ಚಾಲಕ ಪರಾರಿ – vishwanews24

ಬೈಕ್‌ಗೆ ಲಾರಿ ಡಿಕ್ಕಿ :  3 ವರ್ಷದ ಮಗು ಸ್ಥಳದಲ್ಲಿಯೇ  ಸಾವು, ತಂದೆ-ತಾಯಿಗೆ ಗಂಭೀರ ಗಾಯ ; ಚಾಲಕ ಪರಾರಿ

ದೊಡ್ಡಬಳ್ಳಾಪುರ: ಬೈಕ್‌ಗೆ ಲಾರಿಯೊಂದು ಡಿಕ್ಕಿ ಹೊಡೆದ  ಪರಿಣಾಮ ಮೂರು ವರ್ಷದ ಮಗು ಸ್ಥಳದಲ್ಲಿಯೇ ಮೃತ ಪಟ್ಟಿದೆ. ಧನ್ವಿತ್ (3) ಮೃತ ದುರ್ದೈವಿ. ದೊಡ್ಡಬಳ್ಳಾಪುರ ತಾಲೂಕಿನ ಕೆಸ್ತೂರು ಗೇಟ್ ಬಳಿ ಈ ಅಪಘಾತ ಸಂಭವಿಸಿದೆ. ಬೈಕ್‌ನಲ್ಲಿದ್ದ ಆಂಜನೇಯ, ಮಮತ ಎಂಬುವವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ದೊಡ್ಡಬಳ್ಳಾಪುರ ತಾಲೂಕಿನ ತಿಪ್ಪಾಪುರ ಮೂಲದ ಆಂಜನೇಯ ಕುಟುಂಬ ಸಮೇತ ಬೈಕ್‌ನಲ್ಲಿ ದೇವಾಲಯಕ್ಕೆ ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಲಾರಿಯು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್‌ನಲ್ಲಿದ್ದವರು ಹಾರಿ ರಸ್ತೆ ಬದಿಗೆ ಬಿದ್ದಿದ್ದಾರೆ.

ಬಾಲಕ ಧನ್ವಿತ್‌ ಮೇಲೆ ಲಾರಿ ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನೂ ಅಪಘಾತ ಮಾಡಿ ಲಾರಿಯನ್ನು ಒಂದು ಕಿಲೋ ಮೀಟರ್ ದೂರದಲ್ಲಿ ನಿಲ್ಲಿಸಿ, ಸ್ಥಳದಿಂದ ಚಾಲಕ ಪರಾರಿ ಆಗಿದ್ದಾನೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಚಾಲಕನಿಗಾಗಿ ಹುಡುಕಾಟ ನಡೆದಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago