Featured

ಬೈಕ್ ಅಪಘಾತದಲ್ಲಿ ಪತಿ ಸಾವು: ಮನನೊಂದ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ರಸ್ತೆ ಅಪಘಾತದಲ್ಲಿ ಪತಿ ಸಾವು: ವಿಷಯ ತಿಳಿದು ನೇಣಿಗೆ ಶರಣಾದ ಹೆಂಡತಿ

ಶಿವಮೊಗ್ಗ: ಬೈಕ್ ಅಪಘಾತದಲ್ಲಿ ಪತಿ  ಮೃತಪಟ್ಟ ಸುದ್ದಿ ತಿಳಿದು ಪತ್ನಿ  ನೇಣಿಗೆ ಶರಣಾದ ಘಟನೆ ಶಿವಮೊಗ್ಗ  ಜಿಲ್ಲೆ ಹೊಸನಗರತಾಲೂಕಿನ ಬೆಸಿಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಿಲ್ಲೆ ಕ್ಯಾತರ ಕ್ಯಾಂಪ್‌ನಲ್ಲಿ ನಡೆದಿದೆ.

ಮಂಜುನಾಥ್ (25), ಅಮೃತ (21) ಮೃತ ದುರ್ದೈವಿಗಳು. ಮಂಜುನಾಥ್‌ಗೆ ಮಂಗಳವಾರ ಶಿಕಾರಿಪುರದ ಬಳಿ ಅಪಘಾತವಾಗಿತ್ತು. ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮಂಜುನಾಥ್ ಚಿಕಿತ್ಸೆ ಫಲಿಸದೇ  ಮೃತಪಟ್ಟಿದ್ದಾರೆ. ಪತಿ ಮಂಜುನಾಥ್ ಸಾವಿನಿಂದ ಮನನೊಂದ ಪತ್ನಿ ಅಮೃತ ಮನೆಗೆ ಬಂದು ತನ್ನ ವೇಲಿನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮಂಜುನಾಥ್ ಹಾಗೂ ಅಮೃತ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಇದೀಗ ದಂಪತಿ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಸ್ಥಳಕ್ಕೆ ಹೊಸನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

9 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago