ದಾವಣಗೆರೆ: ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯ ಸರ್ಕಾರ ಉತ್ತಮ ಕೆಲಸ ಮಾಡಿತ್ತು. ಅವರು ಸ್ವಯಂ ಆಗಿ ಬೊಮ್ಮಾಯಿ ಅವರಿಗೆ ಅಧಿಕಾರ ಬಿಟ್ಟುಕೊಟ್ಟಿದ್ದಾರೆ. ಬೊಮ್ಮಾಯಿ ನೇತೃತ್ವದಲ್ಲಿ ಮುಂದೆ ಬಿಜೆಪಿ ಪೂರ್ಣ ಬಹುಮತ ಪಡೆಯಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದರು.
₹3 ಕೋಟಿ ವೆಚ್ಚದ ಗಾಂಧಿಭವನ, ₹15 ಕೋಟಿ ವೆಚ್ಚದ ಪೊಲೀಸ್ ಪಬ್ಲಿಕ್ ವಸತಿ ಶಾಲೆ, ₹15 ಕೋಟಿ ವೆಚ್ಚದ ಪೊಲೀಸ್ ಕ್ವಾರ್ಟರ್ಸ್‌ಗಳನ್ನು ವರ್ಚುವಲ್ ಮೂಲಕ ಉದ್ಘಾಟಿಸಿ, ಜಿಎಂಐಟಿ ಕೇಂದ್ರ ಗ್ರಂಥಾಲಯಕ್ಕೆ ಚಾಲನೆ ನೀಡಿ ಅವರು ಗುರುವಾರ ಜಿಎಂಐಟಿ ಆವರಣದಲ್ಲಿ ಮಾತನಾಡಿದರು.
ವಿಶ್ವವನ್ನೇ ಕಾಡಿದ ಕೊರೊನಾವನ್ನು ನಿಯಂತ್ರಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಯಶಸ್ವಿಯಾಗಿ ನಿರ್ವಹಿಸಿದೆ. ಬಡವರು, ಅಲೆಮಾರಿಗಳು, ದಲಿತರು, ಆದಿವಾಸಿಗಳ ಸಹಿತ ಸಂಕಷ್ಟಕ್ಕೆ ಸಿಲುಕಿದ್ದ ಎಲ್ಲರ ನೆರವಿಗೆ ಸರ್ಕಾರ ಬಂದಿದೆ ಎಂದು ವಿವರಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಗೃಹಸಚಿವ ಆರಗ ಜ್ಞಾನೇಂದ್ರ, ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ, ಕೃಷಿ ಸಚಿವ ಬಿ.ಸಿ. ಪಾಟೀಲ, ಪ್ರವಾಸೋದ್ಯಮ ಸಚಿವ ಆನಂದ ಸಿಂಗ್, ಸಂಸದ ಜಿ.ಎಂ.ಸಿದ್ದೇಶ್ವರ, ಶಾಸಕರಾದ ಎಸ್.ಎ. ರವೀಂದ್ರನಾಥ, ಮಾಡಾಳ್ ವಿರೂಪಾಕ್ಷಪ್ಪ, ಎಂ.ಪಿ ರೇಣುಕಾಚಾರ್ಯ, ಎಸ್.ವಿ, ರಾಮಚಂದ್ರಪ್ಪ, ಪ್ರೊ. ಎನ್. ಲಿಂಗಣ್ಣ, ಕೊಂಡಜ್ಜಿ ಮೋಹನ್, ಕರುಣಾಕರ ರೆಡ್ಡಿ ಅವರೂ ಇದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…