ಜೋದ್ಪುರ : ಕೃಷ್ಣ ಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಮಾನ್ ಖಾನ್‌ಗೆ ಐದು ವರ್ಷಗಳ ಜೈಲು ಶಿಕ್ಷೆ ಮತ್ತು ಹತ್ತು ಸಾವಿರ ರೂ ದಂಡ ವಿಧಿಸಲಾಗಿದೆ.
ಸರ್ಕಾರದ ಪರ ವಕೀಲರು ಕನಿಷ್ಠ ಆರು ವರ್ಷಗಳ ಶಿಕ್ಷೆ ನೀಡುವಂತೆ ವಾದ ಮಂಡಿಸಿದ್ದರು. ಆದರೆ ಸಲ್ಮನ್ ಪರ ವಕೀಲರು ಶಿಕ್ಷೆಯ ಪ್ರಮಾಣ ಕಡಿಮೆಗೊಳಿಸುವಂತೆ ಮನವಿ ಮಾಡಿದ್ದು, ನ್ಯಾಯಾಲಯ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ಹಮ್ ಸಾಥ್ ಸಾಥ್ ಹೇ ಚಿತ್ರದ ಚಿತ್ರೀಕರಣ ಸಂದರ್ಭದಲ್ಲಿ ನಡೆದಿದ್ದ ಬೇಟೆ ಪ್ರಕರಣ ಇದಾಗಿದ್ದು. ಸಲ್ಮಾನ್ ಜೊತೆ ಸೈಫ್ ಅಲಿ ಖಾನ್. ಟಬು, ಸೊನಾಲಿ ಬೇಂದ್ರೆ, ನೀಲಂ ಅವರ ವಿರುದ್ದವೂ ಪ್ರಕರಣ ದಾಖಲಾಗಿತ್ತು. ಇಂದು ಎಲ್ಲಾ ಆರೋಪಿಗಳೂ ಜೋದ್ಪುರ ನ್ಯಾಯಾಲಯಕ್ಕೆ ಆಗಮಿಸಿದ್ದು, ಈ ಸಂದರ್ಭದಲ್ಲಿ ತೀರ್ಪು ಪ್ರಕಟಿಸಿದ ನ್ಯಾಯಾಲಯ ಸಲ್ಮಾನ್ ಖಾನ್ ದೋಷಿ ಎಂದಿದ್ದು, ಇತರೆ ಆರೋಪಿಗಳನ್ನು ಖುಲಾಸೆಗೊಳಿಸಿದೆ.ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣವನ್ನು ಮುಖ್ಯ ನ್ಯಾಯಮೂರ್ತಿ ದೇಲ್ ಕುಮಾರ್ ಖಾತ್ರಿ ವಿಚಾರಣೆ ನಡೆಸಿ, ತೀರ್ಪು ನೀಡಿದ್ದಾರೆ.
ಸಲ್ಮಾನ್ ಖಾನ್ ಹಾಗೂ ತಂಡ ಚಿತ್ರೀಕರಣಕ್ಕೆಂದು ರಾಜಸ್ಥಾನದಲ್ಲಿ ತಂಗಿದ್ದರು. ಈ ವೇಳೆ ರಾತ್ರಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕೃಷ್ಣ ಮೃಗಗಳ ಗುಂಪು ಕಾಣಿಸಿದ್ದು, ಡ್ರೈವರ್ ಸೀಟಿನಲ್ಲಿದ್ದ ಸಲ್ಮಾನ್ ಗುಂಡು ಹಾರಿಸಿದ್ದರು. ಈ ವೇಳೆ ಎರಡು ಕೃಷ್ಣಮೃಗಗಳು ಸಾವಿಗೀಡಾಗಿದ್ದವು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…