Featured

ಬ್ಯಾಂಕಾಕ್​ನಲ್ಲಿ ಹೆಚ್ಚಿದ ವಾಯುಮಾಲಿನ್ಯ, ಜನರ ಕಣ್ಣು, ಮೂಗಲ್ಲಿ ರಕ್ತಸ್ರಾವ – Vishwanews24

ಬ್ಯಾಂಕಾಕ್,: ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್​ನಲ್ಲಿ ವಾಯು ಮಾಲಿನ್ಯ ಅಪಾಯದ ಮಟ್ಟ ಮೀರಿದ್ದು, ಜನರ ಕಣ್ಣು, ಮೂಗಲ್ಲಿ, ಬಾಯಲ್ಲಿ ರಕ್ತಸ್ರಾವ, ಜನರ ಕಣ್ಣುಗಳು ರಕ್ತವರ್ಣಕ್ಕೆ ತಿರುಗುತ್ತಿದ್ದು ಜನರಲ್ಲಿ ಆತಂಕ ಮನೆ ಮಾಡಿದೆ ..

ಗಾಳಿಯಲ್ಲಿರುವ ವಿಷಕಾರಿ ಧೂಳಿನ ಕಣಗಳ ಪ್ರಮಾಣ PM 2.5 ಅಪಾಯ ಮಟ್ಟ ಮುಟ್ಟಿದೆ. ಬ್ಯಾಂಕಾಕಿನ 41ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಈ ಮಟ್ಟ ಸುರಕ್ಷಿತ ಮಟ್ಟ ಮೀರಿರುವುದು ಜನರಿಗೆ ತೊಂದರೆ ಉಂಟಾಗಲು ಕಾರಣ ಎಂದು ಥಾಯ್ಲೆಂಡ್​ನ ಮಾಲಿನ್ಯ ನಿಯಂತ್ರಣ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. PM 2.5ನಲ್ಲಿ ಧೂಳು, ಹೊಗೆ, ಮಾಲಿನ್ಯಯುಕ್ತ ದ್ರವ ಪದಾರ್ಥಗಳನ್ನು ಹೊಂದಿದ್ದು ವಾಯು ಗುಣಮಟ್ಟ ಇಂಡೆಕ್ಸ್ (ಎಕ್ಯೂಐ) ಪ್ರಮಾಣವನ್ನು ಅಧಿಕಾರಿಗಳು ಗಮನಿಸುತ್ತಿದ್ದಾರೆ.

ವಿಶ್ವದೆಲ್ಲೆಡೆ ನಗರ ಪ್ರದೇಶಗಳ ಮಾಲಿನ್ಯ ಪ್ರಮಾಣವನ್ನು ತಿಳಿಸುವ ಏರ್ ವಿಶ್ಯುವಲ್ ವೆಬ್ ತಾಣದ ಅಂಕಿ ಅಂಶದ ಪ್ರಕಾರ ಅತ್ಯಂತ ಮಾಲಿನ್ಯಯುಕ್ತ ನಗರಗಳ ಪಟ್ಟಿಯಲ್ಲಿ ನವದೆಹಲಿ ಮುಂದಿದ್ದರೆ, ಬ್ಯಾಂಕಾಕ್ 5ನೇ ಸ್ಥಾನದಲ್ಲಿದೆ.

ವಾಯು ಮಾಲಿನ್ಯದ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಾಲಿನ್ಯ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರಿ ವಿರೋಧಿ ಅಭಿಯಾನ ಆರಂಭವಾಗಿದೆ. ಮಾಲಿನ್ಯದ ದುಷ್ಪರಿಣಾಮದಿಂದ ಪಾರಾಗಲು ಯಾವೆಲ್ಲ ರೀತಿಯ ಮಾಸ್ಕ್​ಗಳನ್ನು ಧರಿಸುವುದು ಸುರಕ್ಷಿತ ಎಂಬ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.

ವಾಯು ಮಾಲಿನ್ಯವನ್ನು ನಿಯಂತ್ರಣಕ್ಕೆ ತರಲು ಥಾಯ್ಲೆಂಡ್ ಸರ್ಕಾರವು ಮೋಡ ಬಿತ್ತನೆ ಮಾಡಿ ಕೃತಕ ಮಳೆ ಉಂಟು ಮಾದಲು ಯತ್ನಿಸಿತ್ತು. ಈ ಮೂಲಕದ ಮಾಲಿನ್ಯಕ್ಕೆ ಕಾರಣವಾದ ಸೂಕ್ಷ್ಮ ಮಾಲಿನ್ಯಕಾರಕಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವುದು ಸರ್ಕಾರದ ಉದ್ದೇಶವಾಗಿತ್ತು. ಆದರೆ, ಮೋಡ ಬಿತ್ತನೆ ಯತ್ನ ವಿಫಲವಾಗಿದೆ. ಟ್ಯಾಂಕರ್​ಗಳನ್ನು ಬಳಸಿ ಮುಗಿಲೆತ್ತರಕ್ಕೆ ನೀರು ಸಿಡಿಸುವ ಪ್ರಯತ್ನವೂ ಕೈಕೊಟ್ಟಿದೆ. ಸಾರ್ವಜನಿಕರು ಮಾಸ್ಕ್ ಧರಿಸಿ ಓಡಾಡುವುದು ಅನಿವಾರ್ಯವಾಗಿದೆ.

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

7 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

9 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

9 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

9 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

9 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

9 hours ago