ಪಡುಬಿದ್ರಿ,: ಸೆಪ್ಟೆಂಬರ್ ೨ರಂದು ಪಡುಬಿದ್ರಿ ಕೆಳಗಿನ ಪೇಟೆಯಲ್ಲಿರುವ ಬ್ಯಾಂಕ್‌ನ ಭದ್ರತಾ ಸಿಬ್ಬಂದಿಯನ್ನು ಕಟ್ಟಿ ಹಾಕಿ ಸಮೀಪದಲ್ಲಿದ್ದ ಚಿನ್ನದ ಅಂಗಡಿ ಹಾಗೂ ಮೊಬೈಲ್ ಅಂಗಡಿಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಮೊಬೈಲ್ ಗಳನ್ನು ಕಳವು ಮಾಡಿದ 5 ಜನ ಆರೋಪಿಗಳನ್ನು ಪಡುಬಿದ್ರಿ ಪೊಲೀಸರು ಮಹಾರಾಷ್ಟ್ರದಲ್ಲಿ ಭಾನುವಾರ ಬಂಧಿಸಿದ್ದಾರೆ.
ಸುಭಾಷ್ ಭೀಮರಾವ್ ಕಾಳೆ(26), ಶಂಕರ್ ಲಗಮನ್ ಕಾಳೆ(37), ಸುಭಾಷ್ ಭಾಸ್ಕರ ಕಾಳೆ(27), ಕಾಳಿದಾಸ ಭಾಸ್ಕರ ಕಾಳೆ(31), ಸುನೀಲ ನಾನಾ ಕಾಳೆ(27) ಬಂಧಿತ ಆರೋಪಿಗಳು. ಬಂಧಿತರಿಂದ ಆರು ಮೊಬೈಲ್‌ಗಳು ಹಾಗೂ ಕೃತ್ಯಕ್ಕೆ ಬಳಸಿದ ಚಾಕುವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳೆಲ್ಲ ಮಹಾರಾಷ್ಟ್ರದ ಉಸ್ಮನಾಬಾದ್ ಜಿಲ್ಲೆಯ ಕಲಾಂಬ್ ತಾಲೂಕಿನವರಾಗಿದ್ದಾರೆ. ಮಹಾರಾಷ್ಟ್ರದಿಂದ ಎರಡು ಲಾರಿಗಳಲ್ಲಿ ಸರಕು ತಂದು ಮಂಗಳೂರಿಗೆ ತಲುಪಿಸಿ ಹಿಂದಿರುಗುವ ವೇಳೆ ಈ ಕೃತ್ಯವೆಸಗಿದ್ದಾರೆ.
ಆರೋಪಿಗಳು ಮಹಾರಾಷ್ಟ್ರದಲ್ಲಿರುವ ಬಗ್ಗೆ ಖಚಿತ ಮಾಹಿತಿ ಪಡೆದು ಕಾಪು ವೃತ್ತ ನಿರೀಕ್ಷಕ ಹಾಲಮೂರ್ತಿ ರಾವ್, ಪಡುಬಿದ್ರಿ ಎಸ್‌ಐ ಸತೀಶ್, ಸಿಬ್ಬಂದಿ ಸುಧಾಕರ್, ರಾಜೇಶ್, ಪ್ರವೀಣ್ ಕುಮಾರ್ ಸಂದೀಪ್, ಪ್ರಕಾಶ್ ಅವರ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…