Featured

ಬ್ಯಾಂಕ್‌ ಗ್ರಾಹಕರ ಗಮನಕ್ಕೆ: ಮಾರ್ಚ್ 27 ರಿಂದ ಸತತ ಏಳು ದಿನ ಬ್ಯಾಂಕ್‌ಗಳು ಕಾರ್ಯನಿರ್ವಹಿಸುವುದಿಲ್ಲ -Vishwanews24

ಬ್ಯಾಂಕ್‌ ಗ್ರಾಹಕರ ಗಮನಕ್ಕೆ: ಮಾರ್ಚ್ 27 ರಿಂದ ಸತತ ಏಳು ದಿನ ಬ್ಯಾಂಕ್‌ಗಳು ಕಾರ್ಯನಿರ್ವಹಿಸುವುದಿಲ್ಲ -Vishwanews24

ನವದೆಹಲಿ,: ಸಾರ್ವಜನಿಕ ಹಾಗೂ ಖಾಸಗಿ ವಲಯದ ಎಲ್ಲಾ ಬ್ಯಾಂಕ್‌ಗಳು ಮಾರ್ಚ್ 27ರಿಂದ ಏಪ್ರಿಲ್ 4ರ ನಡುವೆ ಬರೋಬ್ಬರಿ ಏಳು ದಿನ ಮುಚ್ಚಿರಲಿದೆ. ಹೀಗಾಗಿ ಬ್ಯಾಂಕ್ ಸಂಬಂಧಿ ಏನೇ ಕೆಲಸವಿದ್ದರೂ ಈ ದಿನಾಂಕಗಳ ಮುಂಚಿತವಾಗಿ ಮಾಡುವುದು ಒಳಿತು.

ಮಾರ್ಚ್ 27 ರಿಂದ ಮಾರ್ಚ್ 29ರವರೆಗೆ ಬ್ಯಾಂಕ್ ಸತತ ಮೂರು ದಿನ ಬಂದ್ ಇರಲಿವೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ವೆಬ್‌ಸೈಟ್‌ನಲ್ಲಿನ ಬ್ಯಾಂಕ್ ರಜಾ ವಿವರಗಳ ಪ್ರಕಾರ, ಬ್ಯಾಂಕುಗಳಿಗೆ ಹೋಳಿ ಹಬ್ಬದ ಕಾರಣ ಮಾರ್ಚ್ 29 ರಂದು ರಜೆ ಇದೆ. ಮಾರ್ಚ್ 30 ರಂದು ಪಾಟ್ನಾದಲ್ಲಿ ಮಾತ್ರ ಬ್ಯಾಂಕುಗಳನ್ನು ಮುಚ್ಚಲಾಗುವುದು ಎಂದು ಆರ್‌ಬಿಐ ತಿಳಿಸಿದೆ. ಇದರ ನಡುವಿನ ಅವಧಿಯಲ್ಲಿ, ಅಂದರೆ ಮಾರ್ಚ್ 30 ಮತ್ತು ಏಪ್ರಿಲ್ 3 ರಂದು ಮಾತ್ರ ಕೇವಲ ಎರಡು ದಿನಗಳವರೆಗೆ ಬ್ಯಾಂಕುಗಳು ತೆರೆಯುತ್ತವೆ.

ಇದನ್ನೂ ಓದಿ : ಸಿಡಿ ಪ್ರಕರಣ : ಯುವತಿಯ ಜೀವ ಹಾಗೂ ಮಾನ ರಕ್ಷಣೆಗೆ ಬದ್ಧನಾಗಿದ್ದೇನೆ : ರಮೇಶ್ ಕುಮಾರ್ -Vishwanews24

ಮಾರ್ಚ್ 31 ರಂದು, ಹಣಕಾಸು ವರ್ಷದ ಮುಕ್ತಾಯದ ಕೊನೆಯ ದಿನದ ಕಾರಣ ಬ್ಯಾಂಕ್ ನಲ್ಲಿ ಸಾರ್ವಜನಿಕ ಸೇವೆಗಳಿಗೆ ಅವಕಾಶವಿರುವುದಿಲ್ಲ. ಇದಲ್ಲದೆ ಹಣಕಾಸು ವರ್ಷದ ಅಂತ್ಯದ ಹಿನ್ನಲೆಯಲ್ಲಿ ಏಪ್ರಿಲ್ 1ರಂದು ಬ್ಯಾಂಕುಗಳಿಗೆ ರಜೆ ಇರಲಿದೆ . ಏಪ್ರಿಲ್ 2 ರಂದು, ಗುಡ್ ಪ್ರೈಡೇಯ ಪ್ರಯುಕ್ತ ಸರ್ಕಾರಿ ರಜೆ ಇದೆ. ಏಪ್ರಿಲ್ 4 ಭಾನುವಾರವಾಗಿದೆ.

ಎಲ್ಲಾ ಬ್ಯಾಂಕ್ ರಜಾದಿನಗಳಲ್ಲಿ ಗ್ರಾಹಕರಿಗೆ ಇಂಟರ್ನೆಟ್ ಬ್ಯಾಂಕಿಂಗ್ ಸೇವೆಗಳು ತೆರೆದಿರುತ್ತವೆ ಎಂದು ಆರ್ ಬಿ ಐ ತಿಳಿಸಿದೆ.

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

14 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

23 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

23 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

23 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

23 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago