ಬೆಂಗಳೂರು:ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕ್ರಮ ಅಧಿಕಾರದ ದುರುಪಯೋಗ ಮಾತ್ರವಲ್ಲ ವಿರೋಧ ಪಕ್ಷಗಳನ್ನು ಹಣಿಯುವ ಸರ್ವಾಧಿಕಾರಿ ನಡೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಈ ಕುರಿತು ಎಕ್ಸ್‌ನಲ್ಲಿ ಟ್ವೀಟ್ ಮಾಡಿದ ಅವರು. ಕಾನೂನುಬಾಹಿರವಾದ ಈ ಕ್ರಮವನ್ನು ತಕ್ಷಣ ಹಿಂದಕ್ಕೆ ಪಡೆಯುವಂತೆ ಚುನಾವಣಾ ಆಯೋಗ ಕೇಂದ್ರ ಸರ್ಕಾರಕ್ಕೆ ನಿರ್ದೆಶನ ನೀಡಬೇಕು ಎಂದು ಆಗ್ರಹಪಡಿಸುತ್ತೇನೆ.
ಚುನಾವಣಾ ಸಮಯದಲ್ಲಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ ಕಾಂಗ್ರೆಸ್ ಪಕ್ಷ ಹಣದ ಕೊರತೆಯಿಂದ ಗೋಳಾಡುವಂತೆ ಮಾಡಬೇಕೆನ್ನುವುದೇ ಬಿಜೆಪಿ ಸರ್ಕಾರದ ದುರುದ್ದೇಶವಾಗಿದೆ ಎಂದರು.
ನಮ್ಮ ಪಕ್ಷದ ಖಾತೆಯಲ್ಲಿರುವುದು ಪಕ್ಷದ ಅಭಿಮಾನಿಗಳಾದ ಸಾಮಾನ್ಯ ಜನರಿಂದ ಸಂಗ್ರಹವಾಗಿರುವ ಹಣ, ಅದರಲ್ಲಿರುವುದು ದೊಡ್ಡ ಉದ್ಯಮಪತಿಗಳದ್ದಲ್ಲ. ಹೀಗಿದ್ದರೂ ಯಾಕೆ ಇಂತಹ ಕ್ರಮ?
ಚುನಾವಣಾ ಬಾಂಡ್ ಗಳ ಮೂಲಕ ಉದ್ಯಮಿಗಳಿಂದ ಸಾವಿರಾರು ಕೋಟಿ ರೂಪಾಯಿಗಳನ್ನು ಸುಲಿಗೆ ಮಾಡಿ ತಮ್ಮ ಖಾತೆಗೆ ತುಂಬಿಸಿಕೊಂಡಿರುವ ಭಾರತೀಯ ಜನತಾ ಪಕ್ಷದ ಬಗ್ಗೆ ಚುನಾವಣಾ ಆಯೋಗ ಮೌನವಾಗಿರುವುದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಆರೋಪಿಸಿದರು.
ಆಯೋಗ ತಕ್ಷಣ ಇದನ್ನು ಗಮನಿಸಿ ನಮ್ಮ ಪಕ್ಷಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು.ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯಲ್ಲಿ ಸೋಲಿನ ಭಯ ಹುಟ್ಟಿಕೊಂಡಿದೆ. ಸಾರ್ವಜನಿಕವಾಗಿ ಎದೆಯುಬ್ಬಿಸಿ ಏನೇ ಕೊಚ್ಚಿಕೊಂಡರೂ ಆಂತರ್ಯದಲ್ಲಿರುವ ಆತ್ಮಸಾಕ್ಷಿ ಸತ್ಯವನ್ನೇ ಹೇಳುತ್ತದೆ. 400 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಬಾಯಲ್ಲಿ ಹೇಳಿಕೊಂಡರೂ ವಾಸ್ತವದ ಸ್ಥಿತಿ ಏನೆನ್ನುವುದು ನರೇಂದ್ರ ಮೋದಿಗೆ ಗೊತ್ತಿದೆ ಎಂದರು.
ಈ ಭಯದ ಕಾರಣದಿಂದಲೇ ಕೇಂದ್ರ ಸರ್ಕಾರ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸುವ ಸೇಡಿನ ಕ್ರಮಕ್ಕೆ ಮುಂದಾಗಿದೆ. ಪ್ರಧಾನಿ ನರೇಂದ್ರಮೋದಿಯವರು ಒಂದು ಮುಖವಾಡ ಅಷ್ಟೆ, ಅದರ ಹಿಂದೆ ಸರ್ಕಾರವನ್ನು ಮನ್ನಡೆಸವ ಒಂದು “ದುಷ್ಟ ಶಕ್ತಿ’’ ಇದೆ ಎಂದು ನಮ್ಮ ನಾಯಕರಾಗಿರುವ ರಾಹುಲ್ ಗಾಂಧಿಯವರು ಹೇಳಿರುವುದು ಸರಿಯಾಗಿದೆ. ಈ “ದುಷ್ಟ ಶಕ್ತಿ’’ ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಲಯವನ್ನು ಕೂಡಾ ಬುಡಮೇಲು ಮಾಡಲು ಹೊರಟಿದೆ. ಇದನ್ನು ತಡೆಯುವ ಶಕ್ತಿ ಇರುವುದು ಚುನಾವಣೆಗೆ ಮಾತ್ರ ಎಂದು ಹೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…