ಉಡುಪಿ: ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರನ್ನು ನವದೆಹಲಿಯಲ್ಲಿ ಮಂಗಳವಾರ ಭೇಟಿಯಾಗಿ ಕರಾವಳಿ ಕರ್ನಾಟಕದಲ್ಲಿ ಹುಟ್ಟಿದ ಬ್ಯಾಂಕುಗಳನ್ನು ವಿಲೀನಗೊಳಿಸುವ ಯೋಜನೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿದರು.

ಕರ್ನಾಟಕದ ಕರಾವಳಿ ಪ್ರದೇಶದ ಬ್ಯಾಂಕುಗಳನ್ನು ಇತರ ಬ್ಯಾಂಕ್ ಗಳೊಂದಿಗೆ ವಿಲೀನಗೊಳಿಸುವುದರಿಂದ ಅವರ ಹೆಸರಿನೊಂದಿಗೆ ಸಂಸ್ಕೃತಿಯೂ ಶಾಶ್ವತವಾಗಿ ಅಳಿಸಿ ಹೋಗುತ್ತದೆ ಎಂಬ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದರು.
ಅಂತರರಾಷ್ಟ್ರೀಯ ಮಟ್ಟದಲ್ಲಿ ಪೈಪೋಟಿ ನೀಡಲು ಬ್ಯಾಂಕುಗಳ ವಿಲೀನ ಅತ್ಯಗತ್ಯ ಎಂದು ಇದೇ ವೇಳೆ ನಿರ್ಮಲಾ ಅವರಿಗೆ ತಿಳಿಸಿದರು. ವಿಲೀನ ಯೋಜನೆಗಳನ್ನು ಆಯಾ ಬ್ಯಾಂಕುಗಳ ನಿರ್ದೇಶಕರ ಮಂಡಳಿಗಳು ಅನುಮೋದಿಸದ ಹೊರತು ಸರ್ಕಾರವು ಈ ಪ್ರಸ್ತಾಪದೊಂದಿಗೆ ಮುಂದುವರಿಯುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಈ ಸಂದರ್ಭ ಸ್ವಾಮೀಜಿಯವರು , ಐಸ್ ಪ್ಲಾಂಟ್‌ಗಳ ಮೇಲೆ ಜಿಎಸ್‌ಟಿ ಹೇರಿದ್ದರಿಂದ ಆಗುತ್ತಿರುವ ತೊಂದರೆ ಬಗ್ಗೆ ಹಾಗೂ ಮೀನುಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಚಿವರ ಗಮನ ಸೆಳೆದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…