Featured

ಬ್ರಹ್ಮಶ್ರೀ ಪ್ರಶಸ್ತಿಯನ್ನು ಪಡೆಯಲು ಜನಾರ್ದನ ಪೂಜಾರಿಗಳೇ ಅರ್ಹ ವ್ಯಕ್ತಿ ; ನಾನಲ್ಲ : ನಳಿನ್ ಕುಮಾರ್ ಕಟೀಲ್ -Vishwanews24

ಬ್ರಹ್ಮಶ್ರೀ ಪ್ರಶಸ್ತಿಯನ್ನು ಪಡೆಯಲು ಜನಾರ್ದನ ಪೂಜಾರಿಗಳೇ ಅರ್ಹ ವ್ಯಕ್ತಿ ; ನಾನಲ್ಲ : ನಳಿನ್ ಕುಮಾರ್ ಕಟೀಲ್ -Vishwanews24

ಉಳ್ಳಾಲ: ರಾಜಕೀಯದಲ್ಲಿ ಸರಳತೆ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತಕ್ಕೆ ಹೆಸರಾಗಿರುವ ಜಿಲ್ಲೆಯ ಏಕೈಕ ವ್ಯಕ್ತಿ ಜನಾರ್ಧನ ಪೂಜಾರಿ. ನಾನಿನ್ನೂ ಅವರಷ್ಟು ಎತ್ತರಕ್ಕೆ ಹೋಗಲು ಬಹಳಷ್ಟು ಕಾಲಾವಕಾಶ ಬೇಕಿದೆ. ಹಾಗಾಗಿ ಬ್ರಹ್ಮಶ್ರೀ ಪ್ರಶಸ್ತಿಯನ್ನು ಪಡೆಯಲು ಅರ್ಹ ವ್ಯಕ್ತಿ ನಾನಲ್ಲ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಈ ಮೂಲಕ ಉಳ್ಳಾಲದ ಬಿಲ್ಲವ ವೇದಿಕೆಯಿಂದ ತನಗೆ ಘೋಷಿಸಿದ್ದ “ಬ್ರಹ್ಮಶ್ರೀ” ಪ್ರಶಸ್ತಿ ಬಗ್ಗೆ ಬಿಲ್ಲವರಿಂದ ವಿರೋಧ ವ್ಯಕ್ತವಾಗಿರುವ ಮಧ್ಯೆಯೇ ಪ್ರಶಸ್ತಿಯನ್ನು ನಯವಾಗಿ ನಿರಾಕರಿಸಿ ಅಚ್ಚರಿ ಮೂಡಿಸಿದ್ದಾರೆ.

ಪ್ರಧಾನಿ ಮೋದಿ ಭಾರತ ದೇಶದ ಹೆಮ್ಮೆ , ದೇಶದ ಜನರು ಪ್ರಧಾನಿಯನ್ನು ನೋಡಿ ಹಲವು ವಿಷಯಗಳನ್ನು ಕಲಿಯಬೇಕಿದೆ : ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ -Vishwanews24

ಉಳ್ಳಾಲದ ಬ್ರಹ್ಮಶ್ರೀ ಬಿಲ್ಲವ ವೇದಿಕೆಯ ನೆರಳಲ್ಲಿ ತೊಕ್ಕೊಟ್ಟು ಅಂಬಿಕಾರೋಡಿನ ಗಟ್ಟಿ ಸಮಾಜ ಭವನದಲ್ಲಿ ನಡೆದ “ಮೆರುಗು 2021” (ಪ್ರತಿಭಾ ಅನಾವರಣದ ಹೊಸ್ತಿಲು) ನೃತ್ಯ ಸ್ಫರ್ಧೆ, ಆಯುಷ್ಮಾನ್ ಕಾರ್ಡ್ ಮತ್ತು ಶೈಕ್ಷಣಿಕ ಶಾಲಾ ಶುಲ್ಕ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ನಳಿನ್ ಕುಮಾರ್ ಕಟೀಲ್ ಅವರಿಗೆ ವೇದಿಕೆ ವತಿಯಿಂದ “ಬ್ರಹ್ಮಶ್ರೀ” ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಘೋಷಿಸಲಾಗಿತ್ತು. ಆದರೆ, ನಳಿನ್ ಕುಮಾರ್ ಅವರಿಗೆ ಬ್ರಹ್ಮಶ್ರೀ ಪ್ರಶಸ್ತಿ ನೀಡುವುದನ್ನ ವಿರೋಧಿಸಿ ಬಿಲ್ಲವರ ಸಂಘಟನೆಗಳಿಂದ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೆ ಬ್ರಹ್ಮಶ್ರೀ ಬಿಲ್ಲವ ವೇದಿಕೆಯ ಅಧ್ಯಕ್ಷ ಕೆ.ಟಿ ಸುವರ್ಣರ ವಿರುದ್ಧವೂ ಟೀಕೆ ವ್ಯಕ್ತವಾಗಿತ್ತು.

ಮಂಗಳೂರು: ಮದುವೆಯ ಮರುದಿನ ಹೃದಯಾಘಾತದಿಂದ ಮೃತಪಟ್ಟ ಮದುಮಗಳು -Vishwanews24

ಟೀಕೆ ವಿರೋಧಗಳ ನಡುವೆಯೂ ಸಂಸದ ನಳಿನ್ ಕುಮಾರ್ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಬ್ರಹ್ಮಶ್ರೀ ಪ್ರಶಸ್ತಿಯನ್ನು ಮಾತ್ರ ನಯವಾಗಿ ತಿರಸ್ಕರಿಸಿ, ಅದನ್ನ ವೇದಿಕೆ ಅಧ್ಯಕ್ಷ ಕೆ.ಟಿ.ಸುವರ್ಣ ಅವರ ಪಾದ ಕಮಲಕ್ಕೆ ಅರ್ಪಿಸಿದ್ದಾರೆ. ಬ್ರಹ್ಮಶ್ರೀ ಯಂತಹ ಪ್ರಶಸ್ತಿ ಸ್ವೀಕರಿಸಲು 69 ವರ್ಷ ಕಳೆಯಬೇಕು. ರಾಜಕೀಯ ಕ್ಷೇತ್ರದಲ್ಲಿ ನಾರಾಯಣ ಗುರುಗಳ ಆದರ್ಶಗಳನ್ನು ಅಳವಡಿಸಿ ಸರಳ, ಭ್ರಷ್ಟಾಚಾರ ರಹಿತ, ಪಾರದರ್ಶಕ ಆಡಳಿತ ನೀಡಿ , ಯಾವುದೇ ಪ್ರಶಸ್ತಿಯನ್ನು ನಿರಾಕರಿಸಿರುವ ಜಿಲ್ಲೆಯ ಏಕೈಕ ವ್ಯಕ್ತಿಯಾದ ಜನಾರ್ದನ ಪೂಜಾರಿಗಳೇ ಬ್ರಹ್ಮಶ್ರೀ ಪ್ರಶಸ್ತಿಗೆ ಅರ್ಹರು ಎಂದು ಹೇಳಿದರು.

ಅವರ ಮುಂದೆ ನಾನು ಇನ್ನೂ‌ ಯುವಕ. ನನಗೆ 60 ದಾಟಲಿಲ್ಲ. ರಾಜಕೀಯದಲ್ಲಿ ಸಾಧಿಸಲು ಇನ್ನೂ ಬಹಳಷ್ಟು ಇದೆ. ಹಾಗಾಗಿ ಈ ಪ್ರಶಸ್ತಿ ಸ್ವೀಕರಿಸಲು ನಾನು ಎಷ್ಟು ಅರ್ಹನೋ ಎಂಬ ಜಿಜ್ಞಾಸೆ ಮನಸಲ್ಲಿ ಮೂಡಿದ್ದು ಹಾಗಾಗಿ ನಾನು ಈ ಪ್ರಶಸ್ತಿ ಸ್ವೀಕರಿಸಲ್ಲ ಎಂದರು. ಒಂದಂತೂ ದೇವರ ಪ್ರಮಾಣವಾಗಿ ಹೇಳುವುದೆಂದರೆ ನಾನು ಯಾವ ಜಾತಿಗೂ ಸಂಬಂಧಿಸಿದವನಲ್ಲ. ಹಿಂದು ಸಂಸ್ಕೃತಿಯಲ್ಲಿ ಅಚಲ ನಂಬಿಕೆಯಿಟ್ಟು ಮುನ್ನಡೆಯುತ್ತೇನೆ. ನಾನು ಮೂರು ಬಾರಿ ಸಂಸದನಾಗುವುದಕ್ಕೆ ಬಿಲ್ಲವ ಸಮುದಾಯವೂ ಕಾರಣ. ನನ್ನದು ಮತ್ತು ಕೆ.ಟಿ ಸುವರ್ಣರದ್ದು ಹದಿನೈದು ವರ್ಷಗಳ ಸಂಬಂಧ ಎಂದು ಹೇಳಿದರು.

ಸುರತ್ಕಲ್ : ವಸತಿಗೃಹದಲ್ಲಿ ವೇಶ್ಯಾವಾಟಿಕೆ ದಂಧೆ ; ಇಬ್ಬರ ಬಂಧನ -Vishwanews24

ಉಳ್ಳಾಲ ಬಂಟರ ಸಂಘದ ಅಧ್ಯಕ್ಷರಾದ ಸುರೇಶ್ ಚೌಟ, ಉಳಿಯ ಶ್ರೀ ಉಳ್ಳಾಲ್ತಿ ಧರ್ಮಸರ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಹರೀಶ್ ಕುತ್ತಾರು, ಕುಲಾಲ ಸಂಘದ ಜಿಲ್ಲಾಧ್ಯಕ್ಷ ಮಯೂರ್ ಉಳ್ಳಾಲ್, ಗಟ್ಟಿ ಸಮಾಜದ ಕಾರ್ಯದರ್ಶಿ ಪದ್ಮನಾಭ ಗಟ್ಟಿ, ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ್ ಪೂಜಾರಿ, ಮುಖಂಡರಾದ ಚಂದ್ರಶೇಖರ್ ಉಚ್ಚಿಲ್ , ಬಿಜೆಪಿ ಮಂಗಳೂರು ಕ್ಷೇತ್ರಾಧ್ಯಕ್ಷ ಚಂದ್ರಹಾಸ ಪಂಡಿತ್ ಹೌಸ್, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಸತೀಶ್ ಕುಂಪಲ, ಕಿನ್ಯ ಬೆಳರಿಂಗೆ ಶ್ರೀ ಮಲರಾಯ ಧೂಮಾವತಿ ಬಂಟ ದೈವಗಳ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬಾಬು ಶಾಸ್ತ ಕಿನ್ಯ, ಉಳ್ಳಾಲ ಮೊಗವೀರ ಸಂಘದ ಅಧ್ಯಕ್ಷ ಭರತ್ ಉಳ್ಳಾಲ್, ಕಾಪಿಕಾಡು ಉಮಾಮಹೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಎ.ಜೆ .ಶೇಖರ್ ಉಪಸ್ಥಿತರಿದ್ದರು.
ವೇದಿಕೆಯ ಪ್ರಧಾನ ಕಾರ್ಯದರ್ಶಿ ಜೀವನ್ ಕುಮಾರ್ ತೊಕ್ಕೊಟ್ಟು ಪ್ರಸ್ತಾವಿಸಿದರು. ಅಧ್ಯಕ್ಷ ಕೆ.ಟಿ .ಸುವರ್ಣ ಸ್ವಾಗತಿಸಿದರು.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

14 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

14 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

14 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

14 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

14 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

16 hours ago